ಆಡಳಿತ-ವಿಪಕ್ಷ ಸದಸ್ಯರ ಪ್ರತಿಷ್ಠೆಗೆ ಅಭಿವೃದ್ಧಿ ಬಲಿ

ನಾಲ್ಕು ವರ್ಷದಿಂದ ತಾಪಂ ಮಳಿಗೆ ಹರಾಜು ಆಗಿಲ್ಲ • ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ • ಶಾಲೆಗಳಲ್ಲಿ ಶಿಕ್ಷಕರ ಕೊರತೆ

Team Udayavani, Jul 22, 2019, 10:41 AM IST

22-July-8

ನಾಗರಾಜ ತೇಲ್ಕರ್‌
ದೇವದುರ್ಗ:
ತಾಲೂಕು ಪಂಚಾಯಿತಿ ಆಡಳಿತ ಬಿಜೆಪಿ ಹಾಗೂ ವಿರೋಧ ಪಕ್ಷ ಕಾಂಗ್ರೆಸ್‌ ಸದಸ್ಯರು ಮತ್ತು ಅಧಿಕಾರಿಗಳ ಮಧ್ಯೆ ಸಮನ್ವಯ ಕೊರತೆಯಿಂದಾಗಿ ವರ್ಷವೇ ಗತಿಸಿದರೂ ಸಭೆ ನಡೆದಿಲ್ಲ. ಹೀಗಾಗಿ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಹಿನ್ನಡೆ ಆಗಿದೆ.

13ನೇ ಹಣಕಾಸು ಯೋಜನೆಯ ಬಡ್ಡಿ 1.37 ಕೋಟಿ ರೂ. ಬಳಕೆ ಆಗದೇ ಸರ್ಕಾರಕ್ಕೆ ಮರಳಿ ಹೋಗಿದೆ. ತಾಲೂಕು ಪಂಚಾಯಿತಿಯಿಂದ ವಾಣಿಜ್ಯ ಮಳಿಗೆ ನಿರ್ಮಿಸಿ ನಾಲ್ಕು ವರ್ಷವಾದರೂ ಮಳಿಗೆಗಳನ್ನು ಹರಾಜು ಮಾಡಿ ಬಾಡಿಗೆಗೆ ನೀಡಿಲ್ಲ. ಇದರಿಂದ ತಾಪಂ ಆದಾಯಕ್ಕೂ ಕೊಕ್ಕೆ ಬಿದ್ದಿದೆ.

ನಡೆಯದ ಸಭೆ: ತಾಲೂಕು ಪಂಚಾಯಿತಿ ನಡಾವಳಿ ಪ್ರಕಾರ ಮೂರು ತಿಂಗಳಿಗೊಮ್ಮೆ ಸಾಮಾನ್ಯ ಸಭೆ ನಡೆಸಬೇಕು. ಆದರೆ ವರ್ಷವಾದರೂ ಒಂದೇ ಒಂದು ಸಭೆ ನಡೆಸಿಲ್ಲ. ಬಿಜೆಪಿ, ಕಾಂಗ್ರೆಸ್‌ ಸದಸ್ಯರ ಹೊಂದಾಣಿಕೆ ಕೊರತೆ ಮತ್ತು ಅಧಿಕಾರಿಗಳ ಮಧ್ಯದ ಸಮನ್ವಯ ಕೊರತೆ ಇದಕ್ಕೆ ಕಾರಣವೆನ್ನಲಾಗಿದೆ. ಮೂರು ತಿಂಗಳಿಗೊಮ್ಮೆ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹಿಸುತ್ತಿದ್ದರೂ ಇದಕ್ಕೆ ಬಿಜೆಪಿ ಸದಸ್ಯರು ಸ್ಪಂದಿಸುತ್ತಿಲ್ಲ.

ಟೆಂಡರ್‌ ವಿಳಂಬ: ತಾಲೂಕು ಪಂಚಾಯಿತಿ ಅನುದಾನದಲ್ಲಿ ರಾಜ್ಯ ಹೆದ್ದಾರಿ ರಸ್ತೆ ಪಕ್ಕದಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಾಲ್ಕು ವಾಣಿಜ್ಯ ಮಳಿಗೆ ನಿರ್ಮಿಸಲಾಗಿದೆ. ನಾಲ್ಕು ವರ್ಷವಾದರೂ ಹರಾಜು ನಡೆಸಿ ಮಳಿಗೆಗಳನ್ನು ಬಾಡಿಗೆಗೆ ನೀಡಿಲ್ಲ. ಹಲವು ಬಾರಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮಳಿಗೆಗಳನ್ನು ಬಾಡಿಗೆಗೆ ನೀಡಲು ಆಗ್ರಹಿಸಿದರೂ ಪ್ರಯೋಜನವಾಗಿಲ್ಲ. ಮಳಿಗೆಗಳನ್ನು ಬಾಡಿಗೆ ನೀಡಿದ್ದರೆ ತಾಲೂಕು ಪಂಚಾಯಿತಿಗೆ ಲಕ್ಷಾಂತರ ರೂ. ಆದಾಯ ಬರುತ್ತಿತ್ತು. ಆದರೆ ಇದಕ್ಕೂ ಕೊಕ್ಕೆ ಬಿದ್ದಿದೆ. ಹಳೆ ಆರೇಳು ಮಳಿಗೆಗಳಿಂದ ತಿಂಗಳಿಗೆ ಬರುವ ಬಾಡಿಗೆ ಹಣದ ಲೆಕ್ಕಪತ್ರದಲ್ಲೂ ಗೊಂದಲ ಇದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿದರೂ ಸೂಕ್ತ ಮಾಹಿತಿ ನೀಡಿಲ್ಲ ಎಂದು ಸದಸ್ಯರು ದೂರಿದ್ದಾರೆ.

ಹೊಂದಾಣಿಕೆ ಕೊರತೆ: ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತೆ ತಾಪಂ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಪ್ರತಿಷ್ಠೆ, ಹಾಗೂ ಅಧಿಕಾರಿಗಳ ಮಧ್ಯೆ ಸಮನ್ವಯ ಕೊರತೆ ಹಿನ್ನೆಲೆಯಲ್ಲಿ ತಾಲೂಕಿನ ಅಭಿವೃದ್ಧಿಗೆ ಹಿನ್ನಡೆ ಆಗಿದೆ. ತಾಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ರಸ್ತೆ ದುಸ್ಥಿತಿ, ಚರಂಡಿ, ವಿದ್ಯುತ್‌, ಬೀದಿ ದೀಪ, ಶೌಚಾಲಯ ಕೊರತೆ, ಶಾಲೆಗಳಲ್ಲಿ ಶಿಕ್ಷಕರ ಕೊರತೆ ಸೇರಿ ಸಮಸ್ಯೆಗಳಿವೆ. ತಾಲೂಕಿನಲ್ಲಿ ಬರ ಆವರಿಸಿದೆ. ಇಂತಹ ಸಮಸ್ಯೆಗಳ ಸಭೆಯಲ್ಲಿ ಚರ್ಚೆ ನಡೆಸಬೇಕಾದ ಸದಸ್ಯರಲ್ಲಿ ಹೊಂದಾಣಿಕೆ ಇಲ್ಲದ್ದರಿಂದ ಅಭಿವೃದ್ಧಿಗೆ ಹಿನ್ನಡೆ ಆಗಿದೆ. ಇನ್ನು ಗ್ರಾಮೀಣ ಜನರು ಸಮಸ್ಯೆಗಳ ಪಟ್ಟಿ ಹೊತ್ತುಕೊಂಡು ತಾಲೂಕು ಪಂಚಾಯಿತಿಗೆ ಬಂದರೆ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ ಎಂಂದು ಗ್ರಾಮಸ್ಥರು ದೂರಿದ್ದಾರೆ.

ವರ್ಷಗಳಿಂದ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಕರೆದಿಲ್ಲ. ಇದರಿಂದ ಅಭಿವೃದ್ಧಿಗೆ ಹಿನ್ನಡೆ ಆಗಿದೆ. ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಶಾಸಕರ ನಿರ್ದೇಶನದಂತೆ ಆಡಳಿತ ನಡೆಯುತ್ತಿದೆ.
ಗೋವಿಂದ ನಾಯಕ,
ಚಿಕ್ಕಗುಡ್ಡ ಕ್ಷೇತ್ರದ ತಾಪಂ ಸದಸ್ಯ

ಕೆಲ ಕಾರಣಗಳಿಂದ ಸಭೆ ಕರೆಯುವುದು ವಿಳಂಬವಾಗಿದೆ. ತಾಪಂ. ಅಧ್ಯಕ್ಷರ ಸೂಚನೆ ಮೇರೆಗೆ ವಾರದಲ್ಲಿ ಸಭೆ ಕರೆಯಲಾಗುವುದು.
ಹಾಲಸಿದ್ದಪ್ಪ ಪೂಜೇರಿ,
ತಾಪಂ ಕಾ.ನಿ. ಅಧಿಕಾರಿ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.