ನಾನು ಜೆಡಿಎಸ್‌ ಬಿಡಲಿಲ್ಲ, ಉಚ್ಚಾಟಿಸಿದರು: ಸಿದ್ದರಾಮಯ್ಯ

Team Udayavani, Jul 23, 2019, 3:05 AM IST

nanu-jds

ವಿಧಾನಸಭೆ: “ನಾನು ಜೆಡಿಎಸ್‌ ಬಿಡಲಿಲ್ಲ. ಜೆಡಿಎನ್‌ನಿಂದ ಉಚ್ಚಾಟನೆ ಮಾಡಿದ ಬಳಿಕ ಆಹ್ವಾನದ ಮೇರೆಗೆ ಕಾಂಗ್ರೆಸ್‌ ಸೇರಿದೆ’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಸೋಮವಾರ ಮಧ್ಯಾಹ್ನ ಭೋಜನಾನಂತರದ ಕಲಾಪದಲ್ಲಿ ಮಾತನಾಡಿದ ಅವರು, “ನಾನು ಜೆಡಿಎಸ್‌ ಬಿಡಲಿಲ್ಲ. ಅಹಿಂದ ಸಂಘಟನೆ ಮಾಡುತ್ತಿದ್ದೆ. 2005ರಲ್ಲಿ ಜೆಡಿಎಸ್‌ನಿಂದ ನನ್ನನ್ನು ಉಚ್ಚಾಟನೆ ಮಾಡಿದರು.

2006ರಲ್ಲಿ ಕಾಂಗ್ರೆಸ್‌ ಆಹ್ವಾನದ ಮೇರೆಗೆ ಪಕ್ಷ ಸೇರಿದೆ. ತಪ್ಪು ಮಾಹಿತಿ ಕಡತಕ್ಕೆ ಹೋಗಬಾರದು. ಬಿಜೆಪಿಯವರು ಅಧಿಕಾರಕ್ಕೆ ಬರಲಿ ಬೇಡ ಎನ್ನುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಅಚಲ ನಂಬಿಕೆಯಿದ್ದವರು ವಾಮಮಾರ್ಗ, ಹಿಂಬಾಗಿಲ ಮೂಲಕ ಪ್ರಯತ್ನ ಮಾಡಬಾರದು. ಶಾಸಕರಿಗೆ ಆಸೆ, ಹಣ, ಅಧಿಕಾರದ ಆಮಿಷವೊಡ್ಡಿ ಸೆಳೆದಿದ್ದರೆ ಅದು ಸರಿಯಲ್ಲ’ ಎಂದು ತಿಳಿಸಿದರು.

ಇದಕ್ಕೂ ಮೊದಲು ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಸೆಳೆಯುವಲ್ಲಿ ಬಿಜೆಪಿಯ ಪಾತ್ರವಿದೆ ಎಂಬುದನ್ನು ಒಪ್ಪಿಕೊಳ್ಳುವಂತೆ ಆಡಳಿತ ಪಕ್ಷಗಳ ಸದಸ್ಯರು ಒತ್ತಾಯಿಸಿದಾಗ ಬಿಜೆಪಿಯ ಸಿ.ಟಿ.ರವಿ, “ನಾನು ಪಕ್ಷದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ರಾಷ್ಟ್ರೀಯ ಸದಸ್ಯತ್ವ ನೋಂದಣಿ ಪ್ರಕ್ರಿಯೆಯಲ್ಲೂ ಜವಾಬ್ದಾರಿಯೊಂದನ್ನು ನಿರ್ವಹಿಸಿದ್ದೇನೆ. ಹಾಗಾಗಿ ನಾನು ಮುಕ್ತವಾಗಿ ಪಕ್ಷದ ಸದಸ್ಯತ್ವ ಪಡೆಯಲು ಆಹ್ವಾನ ನೀಡುತ್ತಿದ್ದೇನೆ.

ಯೋಗ್ಯತೆಗೆ ತಕ್ಕಂತೆ ಸ್ಥಾನವನ್ನೂ ನೀಡಲಾಗುವುದು. ಆದರೆ, ಮಾನ ಕೊಡಲು ಸಾಧ್ಯವಿಲ್ಲ. ನೀವೇ ಗಳಿಸಿಕೊಳ್ಳಬೇಕು’ ಎಂದು ಹೇಳಿದರು. ಆಗ ಆಡಳಿತ ಪಕ್ಷಗಳ ಸದಸ್ಯರು, ಈಗಾಗಲೇ ಮುಂಬೈ ಸೇರಿರುವ ಶಾಸಕರಿಗೆ ಏನು ನೀಡಲಾಗಿದೆ ಎಂಬುದನ್ನು ಬಹಿರಂಗಪಡಿಸಿ ಎಂದು ಆಗ್ರಹಿಸಿದರು. ಇದಕ್ಕೆ ಸಿ.ಟಿ.ರವಿ, ಈ ಹಿಂದೆ ಜೆಡಿಎಸ್‌ನ ಜಮೀರ್‌ ಅಹಮ್ಮದ್‌ ಖಾನ್‌, ಚೆಲುವರಾಯಸ್ವಾಮಿ, ಅಖಂಡ ಶ್ರೀನಿವಾಸಮೂರ್ತಿ ಇತರರು ಕಾಂಗ್ರೆಸ್‌ ಸೇರಿದಾಗ ಏನು ನೀಡಲಾಗಿತ್ತು? ಸಿದ್ದರಾಮಯ್ಯ ಅವರು ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದಾಗ ಏನು ನೀಡಲಾಗಿತ್ತು ಎಂಬುದನ್ನು ತಿಳಿಸಬೇಕು ಎಂದು ಕೆಣಕಿದರು.

ಅಂತಿಮವಾಗಿ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌, ವೈಚಾರಿಕವಾಗಿ ಬಿಜೆಪಿಯನ್ನು ಸಮರ್ಥಿಸದಿದ್ದರೂ ಶ್ಯಾಮ್‌ ಪ್ರಸಾದ್‌ ಮುಖರ್ಜಿ, ದೀನ ದಯಾಳು ಉಪಾಧ್ಯಾಯ ಅವರ ಚರಿತ್ರೆ, ವೈಯಕ್ತಿಕ ಬದುಕು ಹಾಗೂ ಅಪ್ಪಟ ಪ್ರಾಮಾಣಿಕತೆಯು ಅವರನ್ನು ಎತ್ತರದ ಸ್ಥಾನಕ್ಕೆ ಏರಿಸಿದೆ. ಹಾಗೆಯೇ ಕಾಂಗ್ರೆಸ್‌, ಕಮ್ಯುನಿಸ್ಟ್‌ ಪಕ್ಷದ ಆಯ್ದ ನಾಯಕರಲ್ಲಿ ಗುಣಾತ್ಮಕವಾಗಿ ಏನೂ ವ್ಯತ್ಯಾಸ ಕಾಣುತ್ತಿಲ್ಲ. ಅವರ ದೇಶಭಕ್ತಿಯನ್ನು ಯಾರೂ ಪ್ರಶ್ನಿಸುವಂತಿರಲಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.