ರಾಜೀನಾಮೆ ಸಲ್ಲಿಸಲು ಬಂದ ಶಾಸಕರಿಗೆ ಜೀರೋ ಟ್ರಾಫಿಕ್‌ ನೀಡಿರಲಿಲ್ಲ

Team Udayavani, Jul 23, 2019, 3:04 AM IST

mb patil

ವಿಧಾನಸಭೆ: ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ರಾಜೀನಾಮೆ ಸಲ್ಲಿಸಲು ಬಂದ 10 ಶಾಸಕರಿಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ಬಗ್ಗೆ ಜೆಡಿಎಸ್‌ನ ಎ.ಟಿ.ರಾಮಸ್ವಾಮಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ಸದನದಲ್ಲಿ ತೀವ್ರ ಚರ್ಚೆ ನಡೆಯಿತು.

ರಾಜ್ಯದಲ್ಲಿ ಗೃಹ ಇಲಾಖೆ ವತಿಯಿಂದ ಶಿಷ್ಟಾಚಾರ ಪಾಲನೆ ಬಗ್ಗೆ ಸ್ಪಷ್ಟತೆ ಬೇಕು. ಮುಂಬೈನಿಂದ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದ 10 ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬರಲು ಹಾಗೂ ಬಳಿಕ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಹಿಂದಿರುಗುವಾಗ ಜೀರೋ ಟ್ರಾಫಿಕ್‌ ವ್ಯವಸ್ಥೆ ಕಲ್ಪಿಸಿದ್ದು ಯಾರು ಹಾಗೂ ಯಾವ ಕಾರಣಕ್ಕೆ ಎಂಬುದನ್ನು ಸ್ಪಷ್ಟಪಡಿಸಬೇಕು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಗೃಹ ಸಚಿವ ಎಂ.ಬಿ.ಪಾಟೀಲ್‌ ನೀಡಿದ ಉತ್ತರ ಸ್ಪಷ್ಟವಾಗಿಲ್ಲ. ಕಾರಣ ಸ್ಪೀಕರ್‌ ರಮೇಶ್‌ ಕುಮಾರ್‌, ಶಾಸಕರಿಗೆ ಜೀರೋ ಟ್ರಾಫಿಕ್‌ ನೀಡಲಾಗಿತ್ತೇ? ಆದೇಶ ನೀಡಿದವರು ಯಾರು? ಎಂಬುದನ್ನಷ್ಟೇ ಹೇಳಿ ಎಂದು ಸೂಚಿಸಿದರು. ಇದಕ್ಕೆ ಎಂ.ಬಿ.ಪಾಟೀಲ್‌, ಜೀರೋ ಟ್ರಾಫಿಕ್‌ ವ್ಯವಸ್ಥೆ ನೀಡಿಲ್ಲ. ಈ ಬಗ್ಗೆ ಯಾರೂ ಆದೇಶ ನೀಡಿಲ್ಲ ಎಂದು ಹೇಳಿ ಕುಳಿತರು.

ಇದಕ್ಕೆ ಕೋಪಗೊಂಡ ಸ್ಪೀಕರ್‌, ನಿಮ್ಮ ಉತ್ತರ ನಿಮ್ಮ ಮನಸಾಕ್ಷಿಗೆ ಒಪ್ಪುವುದೇ ಯೋಚಿಸಿ. ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ನೀಡಲಾಗಿತ್ತು ಎಂಬುದು ಜಗಜ್ಜಾಹೀರಾಗಿದೆ. ಹಾಗಾದರೆ ಯಾರಿಗೆ ಬೇಕಾದರೂ ಜೀರೋ ಟ್ರಾಫಿಕ್‌ ವ್ಯವಸ್ಥೆ ನೀಡಬಹುದೆ? ಮುಖ್ಯಮಂತ್ರಿಗಳು, ರಾಜ್ಯಪಾಲರು ಸೇರಿದಂತೆ ಆದ್ಯ ಗಣ್ಯರಿಗಷ್ಟೇ ಇರುವ ಸೌಲಭ್ಯವನ್ನು ಯಾರಿಗಾದರೂ ನೀಡಬಹುದೆ? ಹಾಗಾಗಿ ದೇಶಭಕ್ತರು, ಇತರ ಪ್ರಮುಖರಿಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ನೀಡುವುದು ಬೇಡ. ಇತರ ಕೆಲಸ ಮಾಡಿದವರಿಗೆ ನೀಡಲಿ ಎಂದು ಹೇಳಿದರು.

ಇದಕ್ಕೆ ದನಿಗೂಡಿದ ಕಾಂಗ್ರೆಸ್‌ನ ಎಚ್‌.ಕೆ.ಪಾಟೀಲ್‌, ಸತ್ಯವನ್ನು ಮರೆಮಾಚಿ ಸದನಕ್ಕೆ ಈ ರೀತಿ ಹೇಳುವುದು ಸರಿಯಲ್ಲ ಎಂದು ಹೇಳಿದರು. ಜೆಡಿಎಸ್‌ನ ಎ.ಟಿ.ರಾಮಸ್ವಾಮಿ, ಈ ರೀತಿಯ ಉತ್ತರ ನೀಡಿದರೆ ನಾನು ಸದನದಲ್ಲಿ ಇರಬೇಕೆ ಎಂದು ಬೇಸರ ವ್ಯಕ್ತಪಡಿಸಿದರು. ನಂತರ ಎಂ.ಬಿ.ಪಾಟೀಲ್‌, ಈ ಬಗ್ಗೆ ಪರಿಶೀಲನೆ ನಡೆಸಿ, ಮಾಹಿತಿ ನೀಡುವುದಾಗಿ ತಿಳಿಸಿದರು.

ಬಳಿಕ ಸ್ಪೀಕರ್‌ ಅವರನ್ನು ಕೊಠಡಿಯಲ್ಲಿ ಭೇಟಿಯಾದ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕಿ ನೀಲಮಣಿ ರಾಜು, ನಗರ ಪೊಲೀಸ್‌ ಆಯಕ್ತ ಅಲೋಕ್‌ ಕುಮಾರ್‌ ಈ ಬಗ್ಗೆ ಮಾಹಿತಿ ನೀಡಿದರು. ನಂತರ ಈ ಬಗ್ಗೆ ಸದನಕ್ಕೆ ಮಾಹಿತಿ ನೀಡಿದ ಸ್ಪೀಕರ್‌, ರಾಜೀನಾಮೆ ಸಲ್ಲಿಸಲು ಬಂದ ಶಾಸಕರಿಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ನೀಡಿರಲಿಲ್ಲ. ಈ ಬಗ್ಗೆ ರಾಜ್ಯಪಾಲರು ಸಹ ಯಾವುದೇ ಆದೇಶ ನೀಡಿರಲಿಲ್ಲ ಎಂದು ಸ್ಪಷ್ಟಪಡಿಸಿ ಚರ್ಚೆಗೆ ತೆರೆ ಎಳೆದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.