ನೆರೆ ಭೀತಿಯಲ್ಲಿ ತೀರದ ಜನ

•ಭಟ್ಕಳದಲ್ಲಿ ಮುಂದುವರಿದ ಭಾರೀ ಮಳೆ•ಸಿದ್ದಾಪುರದಲ್ಲಿ ಮರ ಬಿದ್ದು ಅರಣ್ಯ ರಕ್ಷಕ ಸಾವು

Team Udayavani, Jul 24, 2019, 12:47 PM IST

uk tdy 1

ಅಂಕೋಲಾ: ತಾಲೂಕಿನಲ್ಲಿ ಎಡಬಿಡದೆ ಸುರುಯುತ್ತಿರುವ ಭಾರಿ ಮಳೆಯಿಂದ ಕೃಷಿ ಭೂಮಿ ಜಲಾವೃತವಾಗಿರುವುದು.

ಕಾರವಾರ: ಜಿಲ್ಲೆಯಲ್ಲಿ ವರುಣನ ಆರ್ಭಟ ಮಂಗಳವಾರವೂ ಮುಂದುವರಿದಿದೆ. ಕರಾವಳಿಯಲ್ಲಿ ಭಾರೀ ಮಳೆ ಸುರಿಯಿತು. ಮಳೆಯ ಮನ್ಸೂಚನೆ ಅರಿತ ಜಿಲ್ಲಾಡಳಿತ ಕರಾವಳಿಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಕಾರವಾರ ಮುಲ್ಲಾ ಸ್ಟಾಪ್‌ನಲ್ಲಿ ಮಾವಿನ ಮರ ಬಿದ್ದು ಗಂಟೆ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಹೊನ್ನಾವರದ ಮುಗ್ವಾ ಗ್ರಾಮ ಜಲಾವೃತವಾಗಿದ್ದು, ಅಲ್ಲಿನ ಜನರನ್ನು ಭಾಸ್ಕೇರಿ ಶಾಲೆಗೆ ಸ್ಥಳಾಂತರಿಸಿ ಗಂಜಿ ಕೇಂದ್ರ ತೆರೆಯಲಾಗಿದೆ.

ಸಿದ್ದಾಪುರದಲ್ಲಿ ಮಳೆಯ ಅವಾಂತರ ಮುಂದುವರಿದಿದ್ದು, ಹಲವು ಕಡೆ ನದಿ ದಂಡೆ ಗ್ರಾಮಗಳಿಗೆ ನೀರು ನುಗ್ಗಿತು. ನಾಳೆ ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜಿಲ್ಲಾಡಳಿತ ಮಳೆಯ ಅವಘಡ ಎದುರಿಸಲು ಸಕಲ ಮುನ್ನೆಚ್ಚರಿಕೆ ವಹಿಸಿದೆ. ನಗರ, ಪಟ್ಟಣಗಳಲ್ಲಿ ಸ್ಥಳೀಯ ಆಡಳಿತಗಳು ಮಳೆಯ ತೊಂದರೆಗಳನ್ನು ನಿರ್ವಹಿಸಲು ಸನ್ನದ್ಧವಾಗಿದೆ.

ಮುಲ್ಲಾ ಸ್ಟಾಪ್‌ನಲ್ಲಿ ಉರುಳಿದ ಮರ: ಕಾರವಾರದ ಮುಖ್ಯ ರಸ್ತೆಯಲ್ಲಿ ಮರವೊಂದು ಉರುಳಿದ ಕಾರಣ ವಾಹನ ಸಂಚಾರಕ್ಕೆ ಅಡೆತಡೆಯಾಯಿತು. ತಕ್ಷಣ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರ ತೆರವು ಮಾಡುವ ಕಾರ್ಯಕ್ಕೆ ಮುಂದಾಯಿತು. 45 ನಿಮಿಷಗಳಲ್ಲಿ ಉರುಳಿದ ಮರ ತೆರವು ಮಾಡಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿತು. ಅನೇಕ ತಗ್ಗು ಪ್ರದೇಶಗಳು ಜಲಾವೃತವಾಗಿದ್ದವು. ಸಂಜೆ ಸ್ವಲ್ಪ ಮಳೆ ಕಡಿಮೆಯಾದ ಕಾರಣ ಪರಿಸ್ಥಿತಿ ನಿಯಂತ್ರಣಕ್ಕೆ ಬಂತು.

ಮಳೆಯ ವಿವರ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 965.7 ಮಿಮೀ ಮಳೆಯಾಗಿದ್ದು ಸರಾಸರಿ 87.8 ಮಿಮೀ ಮಳೆ ದಾಖಲಾಗಿದೆ. ಭಟ್ಕಳದಲ್ಲಿ ಭಾರೀ ಮಳೆ ಸುರಿದಿದೆ. ಕುಮಟಾ, ಅಂಕೋಲಾ, ಕಾರವಾರ ಕ್ರಮವಾಗಿ ನಂತರದ ಸ್ಥಾನಗಳಲ್ಲಿವೆ.

ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 991 ಮಿಮೀ ಇದ್ದು, ಇದುವರೆಗೆ ಸರಾಸರಿ 806.8 ಮಿಮೀ ಮಳೆ ದಾಖಲಾಗಿದೆ. ಈ ಅವಧಿಯಲ್ಲಿ ಅಂಕೋಲಾದಲ್ಲಿ 141 ಮಿಮೀ, ಭಟ್ಕಳ 228 ಮಿಮೀ, ಹಳಿಯಾಳ 3.2 ಮಿಮೀ, ಹೊನ್ನಾವರ 134.3 ಮಿಮೀ, ಕಾರವಾರ 137.3 ಮಿಮೀ, ಕುಮಟಾ 197.2 ಮಿಮೀ, ಮುಂಡಗೋಡ 5.6 ಮಿಮೀ, ಸಿದ್ದಾಪುರ 54.2 ಮಿಮೀ, ಶಿರಸಿ 31.5 ಮಿಮೀ, ಜೋಯಿಡಾ 11 ಮಿಮೀ ಯಲ್ಲಾಪುರ 22.4 ಮಿಮೀ ಮಳೆಯಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.