ಡೆಂಗ್ಯೂ ಹರಡದಂತೆ ಆರೋಗ್ಯ ಇಲಾಖೆ ಕಟ್ಟೆಚ್ಚರ

ವಲಸೆ ಕಾರ್ಮಿಕರಿರುವಲ್ಲಿ ಪ್ರಕರಣಗಳು ಹೆಚ್ಚು

Team Udayavani, Jul 25, 2019, 5:00 AM IST

dengue-2

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕೊಳಚೆ ತ್ಯಾಜ್ಯ.

ಉಡುಪಿ: ವಿವಿಧ ರೀತಿಯ ಜ್ವರಗಳು ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದೆಡೆ ಡೆಂಗ್ಯೂನಿಂದ ಜನರು ತತ್ತರಿಸುತ್ತಿದ್ದರೆ, ಇನ್ನೊಂದು ಕಡೆ ಮಲೇರಿಯಾ ಹಬ್ಬುತ್ತಿದೆ. ಈ ನಿಟ್ಟಿನಲ್ಲಿ ಜನರೂ ಸಾಕಷ್ಟು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಡಳಿತ ತಿಳಿಸಿದೆ.

ಇಲಾಖಾ ಮಟ್ಟದಲ್ಲಿಯೂ ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಅಧಿಕಾರಿಗಳೂ ಎಚ್ಚರಿಕೆಯಿಂದ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಜು. 15ರ ವರೆಗೆ ಒಟ್ಟು 11 ಡೆಂಗ್ಯೂ ಹಾಗೂ 45 ಮಲೇರಿಯಾ ಪ್ರಕರಣಗಳು ದಾಖಲಾಗಿವೆ.

ಎಲ್ಲೆಲ್ಲಿ ಪ್ರಕರಣ ಜಾಸ್ತಿ?
ಉಡುಪಿಯ ಮಲ್ಪೆ ಭಾಗದಲ್ಲಿ ಹೆಚ್ಚಿನ ಮಲೇರಿಯಾ ಪ್ರಕರಣ, ಹನುಮಂತ ನಗರ, ಕೊಡಂಕೂರು, ನಿಟ್ಟೂರು ಪ್ರದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಉಡುಪಿಯಲ್ಲಿ ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಮಲ್ಪೆಯಂತಹ ಪ್ರದೇಶಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದು, ಇಲ್ಲಿ ಈ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಇದು ಮುಖ್ಯವಾಗಿ ವಲಸೆ ಹೋಗುವ ಜನರಿಂದ ಹರಡುವುದು ಹೆಚ್ಚು. ಕೆಮ್ಮಣ್ಣಿನಲ್ಲಿ 6 ಮಲೇರಿಯಾ ಪ್ರಕರಣಗಳು ಕಂಡುಬಂದಿದ್ದು ಗುಣಮುಖರಾಗಿದ್ದಾರೆ.

ಎಚ್ಚರ ಅಗತ್ಯ
ಯಾವುದೇ ಜ್ವರವಿರಲಿ, ಮೊದಲು ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಸಿಬಂದಿ ಮನೆಗೆ ಬಂದಾಗ ಪರೀಕ್ಷೆಗೆ ಸಹಕರಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ, ಚರಂಡಿಗಳಿಗೆ ಕಸ, ಕಡ್ಡಿಗಳನ್ನು ಎಸೆಯದೆ ನೀರು ಹರಿದು ಹೋಗುವಂತೆ ಮಾಡಬೇಕು. ನೀರು ಸಂಗ್ರಹಣೆ ಸಾಮಗ್ರಿಗಳನ್ನು ಮುಚ್ಚಿಡಿ, ದೊಡ್ಡ ತೊಟ್ಟಿ ವಾರಕ್ಕೊಮ್ಮೆ ತೊಳೆದರೆ ಉತ್ತಮ. ಟಯರು, ಎಳನೀರಿನ ಚಿಪ್ಪು, ಡಬ್ಬ, ಪ್ಲಾಸ್ಟಿಕ್‌ ಕವರ್‌ಗಳನ್ನು ವಿಲೇವಾರಿ ಮಾಡಿ ಮಳೆ ನೀರು ನಿಲ್ಲದಂತೆ ಮಾಡಿದರೆ ಸೊಳ್ಳೆ ಉತ್ಪತ್ತಿ ಕಡಿಮೆಯಾಗುತ್ತದೆ.

ನಗರದಲ್ಲಿ ಹಿಡಿತ
ಮಲೇರಿಯ ಹಾಗೂ ಡೆಂಗ್ಯೂ ನಿಯಂತ್ರಣದಲ್ಲಿದೆ. ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದಲ್ಲಿ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿ ಈ ರೋಗಗಳು ಕಾಣಿಸಿಕೊಳ್ಳುತ್ತಿವೆ.
-ಡಾ| ಪ್ರಶಾಂತ್‌, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ, ಉಡುಪಿ.

ಮಲ್ಪೆ: ಮಲೇರಿಯ ಹೆಚ್ಚಳ
ಮಲ್ಪೆಯಲ್ಲಿ ಒಂದೇ ಬಾರಿಗೆ 10 ಪ್ರಕರಣಗಳು ಪತ್ತೆಯಾಗಿವೆ. ಬಂದರಿನಲ್ಲಿ ನಿಲ್ಲಿಸಲಾದ ಬೋಟ್‌ನಲ್ಲಿರುವ ನೀರು ಸಂಗ್ರಹಣಾ ತೊಟ್ಟಿಯಲ್ಲಿ ಮಲೇರಿಯಾ ಸೊಳ್ಳೆ ಉತ್ಪತ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಟ್ಯಾಂಕಿ ನೀರು ಖಾಲಿ ಮಾಡುವಂತೆ ಆದೇಶ ನೀಡಿದ್ದಾರೆ. ಈಗಾಗಲೇ ಆರೋಗ್ಯ ಇಲಾಖೆಯ ವತಿಯಿಂದ ಫಾಗಿಂಗ್‌ ಮಾಡಿಸಲಾಗಿದೆ.

ಸೊಳ್ಳೆಗಳಿಂದ
ರಕ್ಷಣೆಗೆ ಹೀಗೆ ಮಾಡಿ
ಡೆಂಗ್ಯೂ ಹರಡುವ ಸೊಳ್ಳೆ ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಮಲೇರಿಯಾ ಹರಡುವ ಸೊಳ್ಳೆ ರಾತ್ರಿ ಸಮಯದಲ್ಲಿ ಕಚ್ಚುತ್ತವೆ. ಔಷಧ ಲೇಪಿಸಿದ ಸೊಳ್ಳೆ ಪರದೆಗಳ ಬಳಕೆ, ಮಕ್ಕಳು/ ವೃದ್ಧರು ಹಗಲು ಮಲಗುವಾಗಲೂ ಸೊಳ್ಳೆ ಪರದೆ ಉಪಯೋಗಿಸುವುದು, ಸೊಳ್ಳೆ ಪ್ರವೇಶಿಸದಂತೆ ಸಂಜೆ ಹೊತ್ತು ಕಿಟಕಿ ಬಾಗಿಲುಗಳನ್ನು ಭದ್ರವಾಗಿ ಮುಚ್ಚುವುದು ಅಥವಾ ಜಾಲರಿಗಳನ್ನು ಅಳವಡಿಸುವುದು ಮುಂತಾದ ಕ್ರಮಗಳನ್ನು ಅನುಸರಿಸುವ ಮೂಲಕ ಸೊಳ್ಳೆಗಳಿಂದ ರಕ್ಷಣೆ ಪಡೆಯಬಹುದು. ಬಾವಿ/ಕೆರೆಗಳಲ್ಲಿ ಗಪ್ಪಿ ಮೀನುಗಳನ್ನು ಸಾಕುವ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು.

ಸಮಸ್ಯೆ ಇದ್ದರೆ ನಮಗೆ ತಿಳಿಸಿ
ನಗರದಲ್ಲಿ ಡೆಂಗ್ಯೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ “ಉದಯವಾಣಿ’ ಕೂಡ ಜಾಗೃತಿ ಮೂಡಿಸುವ ಜತೆಗೆ ನಗರವಾಸಿಗಳಿಗೆ ತಮ್ಮ ಸಮಸ್ಯೆ-ಪರಿಹಾರ ಮಾರ್ಗೋಪಾಯಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ವೇದಿಕೆ ನೀಡುತ್ತಿದೆ. ಆ ಮೂಲಕ ಜನರು ಕೂಡ ಡೆಂಗ್ಯೂ ಹಾಗೂ ಮಲೇರಿಯಾ ವ್ಯಾಪಕವಾಗುವುದನ್ನು ತಡೆಗಟ್ಟುವುದಕ್ಕೆ ತಮ್ಮ ಜವಾಬ್ದಾರಿ ಮೆರೆಯುವುದು ಆವಶ್ಯಕ. ನಗರದಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಆ ಬಗ್ಗೆ ಸೂಕ್ತ ವಿವರದೊಂದಿಗೆ ಫೋಟೋ ತೆಗೆದು ಕಳುಹಿಸಬಹುದು. ಅಲ್ಲದೆ ಕೆಳ ಹಂತದ ಅಧಿಕಾರಿಗಳಿಂದ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆಯದಿದ್ದರೂ ಆ ಬಗ್ಗೆ ಗಮನಕ್ಕೆ ತಂದರೆ ಉನ್ನತ ಅಧಿಕಾರಿಗಳ ಗಮನಸೆಳೆಯುವ ಪ್ರಯತ್ನ ಮಾಡಲಾಗುವುದು.
9148594259

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.