ಈಗ 17 ರಾಜ್ಯಗಳಲ್ಲಿ ಬಿಜೆಪಿ ಆಡಳಿತ
Team Udayavani, Jul 27, 2019, 6:00 AM IST
ಬೆಂಗಳೂರು: ದೇಶದಲ್ಲಿ ಸದ್ಯ ಕರ್ನಾಟಕವೂ ಬಿಜೆಪಿ ತೆಕ್ಕೆಗೆ ಸೇರಿದ್ದು, ಒಟ್ಟಾರೆ 17 ರಾಜ್ಯಗಳಲ್ಲಿ ಕಮಲ ಪಕ್ಷ ಆಡಳಿತದ ಚುಕ್ಕಾಣಿ ಹಿಡಿದಂತಾಗಿದೆ. ಕೆಲವು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೇರಿದರೆ, ಇನ್ನು ಕೆಲವು ರಾಜ್ಯಗಳಲ್ಲಿ ಇತರ ಪಕ್ಷಗಳೊಂದಿಗೆ ಮೈತ್ರಿಯಲ್ಲಿ ಅಧಿಕಾರದಲ್ಲಿದೆ. ಉತ್ತರ ಪ್ರದೇಶ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಸ್ವತಂತ್ರವಾಗಿ ಅಧಿಕಾರ ನಡೆಸುತ್ತಿದ್ದರೆ, ಇತರ ರಾಜ್ಯಗಳಲ್ಲಿ ವಿವಿಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು
ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ಕರ್ನಾಟಕ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ, ಉತ್ತರ ಪ್ರದೇಶ.