ಆಡಳಿತದ ಆಯಕಟ್ಟಿನ ಹುದ್ದೆಗಳ ಸ್ಥಾನಪಲ್ಲಟ

ಡಿಪಿಎಆರ್‌ ಕಾರ್ಯದರ್ಶಿ, ನಗರ ಪೊಲೀಸ್‌ ಆಯುಕ್ತರು, ಗುಪ್ತಚರ ದಳದ ಮುಖ್ಯಸ್ಥರ ಹುದ್ದೆ ಬದಲಾವಣೆ ಸಾಧ್ಯತೆ

Team Udayavani, Jul 27, 2019, 2:31 PM IST

bng-tdy-6

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಾರ್ಯಾಂಗದ (ಆಡಳಿತ)ದ ಆಯಕಟ್ಟಿನ ಹುದ್ದೆಗಳಲ್ಲಿ ಭಾರೀ ಸ್ಥಾನಪಲ್ಲಟ ನಡೆಯುವ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಪ್ರತಿ ಬಾರಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆಡಳಿತದ ಮೇಲೆ ಹಿಡಿತ ಸಾಧಿಸುವ ಸಲುವಾಗಿ ಆಯಕಟ್ಟಿನ ಹುದ್ದೆಗಳ ‘ಮೇಜರ್‌ ಸರ್ಜರಿ’ ನಡೆಸುವ ವಾಡಿಕೆಯಿದೆ. ಈ ಹಿಂದಿನ ಕಾಂಗ್ರೆಸ್‌ ನೇತೃತ್ವದ ಸರ್ಕಾರ, ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರ ಕೂಡ ಉನ್ನತ ಹುದ್ದೆಗಳ ಸ್ಥಾನಪಲ್ಲಟಕ್ಕೆ ಕೈ ಹಾಕಿತ್ತು.

ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೂಡ ಉನ್ನತ ಹುದ್ದೆಗಳಿಗೆ ಸರ್ಜರಿ ಮಾಡಲು ಸಿದ್ಧತೆ ನಡೆಸಿದೆ. ಇದರಲ್ಲಿ ಪ್ರಮುಖವಾಗಿ ಆಡಳಿತ ಹಾಗೂ ಸಿಬ್ಬಂದಿ ಸುಧಾರಣಾ ಇಲಾಖೆ (ಡಿಪಿಎಆರ್‌), ಲೋಕೋಪಯೋಗಿ, ಗೃಹ ಇಲಾಖೆಯಲ್ಲಿ ಭಾರೀ ಬದಲಾವಣೆಗಳಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಡಿಪಿಎಆರ್‌ ಕಾರ್ಯದರ್ಶಿಗಳು, ರಾಜ್ಯ ಗುಪ್ತಚರ ದಳದ ಮುಖ್ಯಸ್ಥರು, ನಗರ ಪೊಲೀಸ್‌ ಆಯುಕ್ತರು, ವಲಯ ಐಜಿಪಿಗಳ ಹುದ್ದೆಗಳಲ್ಲಿ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಧಿಕಾರಿಗಳಿಂದ ಲಾಭಿ ಶುರು: ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ನಡೆದ ಲೋಕೋಪಯೋಗಿ, ಪೊಲೀಸ್‌ ಇಲಾಖೆಯ ಕೆಲ ಹುದ್ದೆಗಳ ವರ್ಗಾವಣೆ ರದ್ದುಗೊಳ್ಳುವುದನ್ನು ತಳ್ಳಿ ಹಾಕುವಂತಿಲ್ಲ. ಮತ್ತೂಂದೆಡೆ, ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿರುವ ಬೆನ್ನಲ್ಲೇ ಆಯಕಟ್ಟಿನ ಹುದ್ದೆಗಳಲ್ಲಿ ಪ್ರತಿಷ್ಠಾಪನೆಗೊಳ್ಳುವ ಸಲುವಾಗಿ ಅಧಿಕಾರಿಗಳ ವರ್ಗ ಲಾಭಿ ಶುರು ಮಾಡಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಬೆಂಗಳೂರಿನ ಕಚೇರಿಗಳಿಗೆ ವರ್ಗಾವಣೆಗೊಳ್ಳ ಬಹುದು. ಸಮ್ಮಿಶ್ರ ಸರ್ಕಾರದ ನೆರಳಲ್ಲಿ ಆಯಕಟ್ಟಿನ ಹುದ್ದೆಗಳಲ್ಲಿ ಆಶ್ರಯ ಪಡೆದುಕೊಂಡಿದ್ದ ಹಲವು ಐಎಎಸ್‌, ಐಪಿಎಸ್‌, ಕೆಎಎಸ್‌ ಅಧಿಕಾರಿಗಳು ವರ್ಗಾವಣೆಯಾಗುವ ಆತಂಕ ಎದುರಿಸುತ್ತಿದ್ದಾರೆ.

ಅಧಿಕಾರಿಗಳಿಗೆ ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸುವ ಅದೃಷ್ಟ ಕೂಡ ರಾಜಕೀಯ ಪಕ್ಷಗಳ ನಡುವೆ ಹೊಂದಿರುವ ಒಡನಾಟ, ಜಾತಿ ಲೆಕ್ಕಾಚಾರದ ಮೇಲೆಯೂ ಅವಲಂಬಿತವಾಗಿರಲಿದೆ ಎಂಬ ಸಂಗತಿ ಗುಟ್ಟಾಗಿ ಏನೂ ಉಳಿದಿಲ್ಲ. ಸರ್ಕಾರಗಳು ಬದಲಾದ ಮೇಲೆ ನಡೆಯುವ ಸಾಮಾನ್ಯ ಪ್ರಕ್ರಿಯೆ ಇದಾಗಿ ಬಿಟ್ಟಿದೆ ಎಂದು ನಿವೃತ್ತ ಅಧಿಕಾರಿಯೊಬ್ಬರು ಹೇಳುತ್ತಾರೆ.

ಕನ್ನಡಿಗರಿಗೆ ಸಿಗಲಿದೆಯೇ ಸಿಟಿ ಕಮಿಷನರ್‌ ಹುದ್ದೆ?:

ಐಪಿಎಸ್‌ ಆಧಿಕಾರಿಗಳ ಸ್ಥಾನಪಲ್ಲಟ ಸಾಧ್ಯವಾದರೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಹುದ್ದೆ ಹಲವು ವರ್ಷಗಳ ನಂತರ ಕನ್ನಡಿಗ ಐಪಿಎಸ್‌ ಅಧಿಕಾರಿಯೊಬ್ಬರ ಪಾಲಾಗಲಿದೆ. ಐಜಿಪಿ ಹುದ್ದೆಯನ್ನು ಎಡಿಜಿಪಿ ಹುದ್ದೆಗೆ ಮೇಲ್ದರ್ಜೆಗೆ ಏರಿಸಿ ಅಲೋಕ್‌ ಕುಮಾರ್‌ ಅವರನ್ನು ಸಮ್ಮಿಶ್ರ ಸರ್ಕಾರ ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಕಗೊಳಿಸಿ ರಾತ್ರೋ ರಾತ್ರಿ ಆದೇಶ ಹೊರಡಿಸಿತ್ತು. ಆಯುಕ್ತರ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದ ಹಿರಿಯ ಐಪಿಎಸ್‌ ಅಧಿಕಾರಿಗಳ ಸೇವಾ ಹಿರಿತನ ಕಡೆಗಣಿಸಿ ಅಲೋಕ್‌ ಕುಮಾರ್‌ ಅವರಿಗೆ ಆಯುಕ್ತರ ಹುದ್ದೆ ಅವಕಾಶ ಲಭಿಸಿದ್ದಕ್ಕೆ ಇಲಾಖೆಯೊಳಗೆ ಅಪಸ್ವರ ಕೇಳಿ ಬಂದಿತ್ತು. ಸದ್ಯ, ನಗರ ಪೊಲೀಸ್‌ ಆಯುಕ್ತರ ಹುದ್ದೆಯ ರೇಸ್‌ನಲ್ಲಿ ಕೆಎಸ್‌ಆರ್‌ಪಿ ಎಡಿಜಿಪಿ ಕನ್ನಡಿಗರಾದ ಭಾಸ್ಕರ್‌ರಾವ್‌, ಎಡಿಜಿಪಿಗಳಾದ ಪ್ರತಾಪ್‌ ರೆಡ್ಡಿ, ಸುನೀಲ್ ಅಗರ್‌ವಾಲ್, ಆರ್‌.ಪಿ ಶರ್ಮಾ, ಕಮಲ್ಪಂಥ್‌ ಇದ್ದು ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
● ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.