ದರೋಡೆಗೆ ವಿರೋಧ; ನಿವೃತ್ತ ಸೇನಾಧಿಕಾರಿಯನ್ನು ಹತ್ಯೆಗೈದ ಅಪರಿಚಿತ ಗುಂಪು
Team Udayavani, Jul 29, 2019, 10:05 AM IST
ಅಮೇಠಿ: ಅಪರಿಚಿತ ವ್ಯಕ್ತಿಗಳ ಗುಂಪೊಂದು ನಿವೃತ್ತ ಸೇನಾಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಅಮೇಠಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ರಾತ್ರಿ ವೇಳೆ ಏಕಾಏಕಿ ಮನೆಯೊಳಗೆ ನುಗ್ಗಿದ ಗುಂಪೊಂದು ದೊಣ್ಣೆಗಳಿಂದ ಅಮಾನತ್ ಉಲ್ಲಾ ಅವರ ಮೇಲೆ ಹಲ್ಲೆ ಮಾಡಿದೆ. ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದಿರಿಂದ ಅವರು ಮೃತಪಟ್ಟಿದ್ದಾರೆ ಎಂದು ಅಮಾನತ್ ಅವರ ಪುತ್ರ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಮ್ಮ ಮನೆ ಮುಂಭಾಗದಲ್ಲಿರುವ ಅಂಗಡಿಯಲ್ಲಿನ ಸಾಮಾನುಗಳನ್ನು ಕಳವು ಮಾಡಲು ಯತ್ನಿಸುತ್ತಿರುವಾಗ ಪತಿ ಅಮಾನುಲ್ಲಾ ತಡೆದಿದ್ದರು. ನಾನು ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದಾಗ ಗುಂಪು ಏಕಾಏಕಿ ಮನೆಯೊಳಗೆ ನುಗ್ಗಿ ಹಲ್ಲೆ ನಡೆಸಿರುವುದಾಗಿ ಅಮಾನುಲ್ಲಾ ಪತ್ನಿ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ವಿವರಿಸಿದ್ದಾರೆ ಎಂದು ಎಎಸ್ ಪಿ ದಯಾರಾಮ್ ಹೇಳಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳನ್ನು ಹತ್ತಿಕ್ಕುವಲ್ಲಿ ಬಿಜೆಪಿ ನೇತೃತ್ವದ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!