ಸಕಾಲಕ್ಕೆ ಅನುಷ್ಠಾನವಾಗಲಿ

•ಅಪರ ಮುಖ್ಯ ಕಾರ್ಯದರ್ಶಿ ರಾಜೀವ್‌ ಚಾವ್ಲಾ ಸೂಚನೆ

Team Udayavani, Jul 30, 2019, 11:23 AM IST

ballary-tdy-1

ಬಳ್ಳಾರಿ: ಆಡಳಿತ ಸುಧಾರಣಾ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜೀವ್‌ ಚಾವ್ಲಾ ವೀಡಿಯೋ ಕಾನ್ಫರೆನ್ಸ್‌ ಸಂವಾದದಲ್ಲಿ ಬಳ್ಳಾರಿಯ ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ್‌ ಮಾತನಾಡಿದರು.

ಬಳ್ಳಾರಿ: ಜಿಲ್ಲೆಯ ಪ್ರತಿಯೊಂದು ಇಲಾಖೆಯ ನೋಡಲ್ ಅಧಿಕಾರಿಗಳು ಸಕಾಲದಲ್ಲಿಯೇ ಮಾಹಿತಿ ನೀಡಬೇಕು ಮತ್ತು ಪರಿಣಾಮಕಾರಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್‌ ಚಾವ್ಲಾ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಕಾಲ ಸೇವೆಗಳ ಅಧಿನಿಯಮ ಕುರಿತು ವೀಡಿಯೋ ಕಾನ್ಫರೆನ್ಸ್‌ ಮುಖಾಂತರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ನಡೆದ ಸಂವಾದಲ್ಲಿ ಮಾತನಾಡಿದರು.

ಸಕಾಲ ಯೋಜನೆ ಅಡಿಯಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಅಪರ ಜಿಲ್ಲಾಧಿಕಾರಿಗಳು ಕೋಆರ್ಡಿನೇಟರ್‌ಗಳಾಗಿದ್ದು, ಸಕಾಲ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಸಭೆ ನಡೆಸಿ ಸಕಾಲಕ್ಕೆ ಸಂಬಂಧಿತ ಸಮಸ್ಯೆಗಳು ಅವುಗಳ ಇತ್ಯರ್ಥಗೊಳಿಸುವ ಬಗ್ಗೆ ಮಾಹಿತಿ ಪಡೆದುಕೊಂಡು ಕೇಂದ್ರಕ್ಕೆ ವಿವರ ಸಲ್ಲಿಸಬೇಕು. ಒಂದು ವೇಳೆ ಸಮಸ್ಯೆ ನಿಮ್ಮಲ್ಲೇ ಇತ್ಯರ್ಥಗೊಳಿಸುವುದಿದ್ದರೆ ಮಾಡಬಹುದು. ಜಿಲ್ಲಾಧಿಕಾರಿಗಳು ಇದಕ್ಕೆ ಪ್ರಮುಖ ಪಾತ್ರವಹಿಸಲಿದ್ದು, ಅವರ ಮೂಲಕ ಇಲಾಖೆವಾರು ನೋಡಲ್ ಅಧಿಕಾರಿಗಳಿಗೆ ಸಕಾಲ ಯೋಜನೆಗೆ ಸಂಬಂಧಿತ ಸಮಸ್ಯೆಗಳನ್ನು ಶೀಘ್ರದಲ್ಲಿ ಇತ್ಯರ್ಥವಾಗುವಂತೆ ಸೂಚನೆ ಕೊಡಬೇಕು ಎಂದರು.

ಕಡ್ಡಾಯವಾಗಿ ಸಕಾಲದ ಬಗ್ಗೆ ಪ್ರತಿ ಇಲಾಖೆಯಲ್ಲಿ ಬೋರ್ಡ್‌ ಹಾಕಬೇಕು. ಕಲಂ 5ರ ಪ್ರಕಾರ ಸ್ವೀಕೃತವನ್ನು ಅರ್ಜಿದಾರರಿಗೆ ನೀಡಿ ಸಕಾಲ ನಂಬರ್‌ ಕೋಡಬೇಕು. ಕೈಬರಹ ಅಥವಾ ಇನ್ನಿತರವಾಗಿಯು ಬರೆದುಕೊಂಡು ಬಂದಂಥ ಅರ್ಜಿಗಳಿಗೆ ಮಾನ್ಯತೆ ಇರುವುದಿಲ್ಲ. ಅದಕ್ಕಾಗಿ ಸಕಾಲದ ನೀತಿ ನಿಯಮಗಳ ಪ್ರಕಾರ ಅರ್ಜಿಯನ್ನು ಹಾಕಿ ಅದಕ್ಕೆ ಸಂಬಂಧಿತ ಮಾನ್ಯತಾ ನಂಬರ್‌ ಅರ್ಜಿದಾರರಿಗೆ ನೀಡಬೇಕು. ಇದರಿಂದ ಮುಂದೆ ಆಗುಹೋಗುಗಳ ಬಗ್ಗೆ ಸಕಾಲ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದರು.

ಗ್ರೂಪಿನಲ್ಲಿ ಮಾಹಿತಿ ತಿಳಿಸಿ: 2014ರ ಸಕಾಲ ತಿದ್ದುಪಡಿ ಪ್ರಕಾರ ಸೆಕ್ಷನ್‌ ಪ್ರಾಧಿಕಾರವು ವಿಶೇಷ ಮುತುವರ್ಜಿ ವಹಿಸಿ ಮೇಲ್ಮನವಿ ಅರ್ಜಿಗಳನ್ನು ಕಾಲಮಿತಿಯೊಳಗೆ ಮುಗಿಸಬೇಕು. ಸಕಾಲದ ಪ್ರಾಧಿಕಾರದ ಅಧಿಕಾರಿಗಳು ವಿಶೇಷ ಕರ್ತವ್ಯ ನಿಭಾಯಿಸಿ ಅರ್ಜಿಗಳನ್ನು ಇತ್ಯರ್ಥಗೊಳಿಸಬೇಕು. ರಾಜ್ಯಮಟ್ಟದ ಸಕಾಲ ವ್ಯಾಟ್ಸ್‌ಆಪ್‌ ಗ್ರೂಪ್‌ ರಚಿಸಲಾಗಿದೆ. ಇದರ ಮೂಲಕ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ, ಅಪರ ಜಿಲ್ಲಾಧಿಕಾರಿಗಳು ಸಕಾಲ ಮಾಹಿತಿಗಳು, ಅರ್ಜಿಗಳ ಇತ್ಯರ್ಥ, ವಿಲೇವಾರಿ, ಸಮಸ್ಯೆಗಳು ಕುರಿತು ಮಾಹಿತಿ ಹಂಚಿಕೊಳ್ಳಬಹುದು. ಇದಕ್ಕಾಗಿ ಒಬ್ಬ ವಿಶೇಷ ಅಧಿಕಾರಿಯನ್ನು ಅಡ್ಮಿನ್‌ ಆಗಿ ನೇಮಕ ಮಾಡಲಾಗುತ್ತದೆ. ಅವರ ಮೂಲಕ ಮಾಹಿತಿ ಪಡೆದುಕೊಂಡು ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುತ್ತದೆ ಎಂದು ವಿವರಿಸಿದರು. ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ್‌ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.