ನಳನಳಿಸುತ್ತಿದೆ ಬೆಳೆ..ರೈತನ ಮೊಗದಲ್ಲೀಗ ಕಳೆ..

•ಹೊಲದಲ್ಲಿ ಹಸಿರಿನಿಂದ ಕಂಗೊಳಿಸುತ್ತಿದೆ ಗೋವಿನ ಜೋಳ, ಹೆಸರು, ಸಜ್ಜಿ, ನೆವಣಿ ಬೆಳೆ

Team Udayavani, Jul 31, 2019, 12:03 PM IST

gadaga-tdy-1

ಗಜೇಂದ್ರಗಡ: ಕಾಲಕಾಲೇಶ್ವರ ಗ್ರಾಮ ಬಳಿಯ ಬೆಳೆದ ಗೋವಿನ ಜೋಳ ಫಸಲು ಕಂಗೊಳಿಸುತ್ತಿದೆ.

ಗಜೇಂದ್ರಗಡ: ಬರದ ನಾಡೆಂದೇ ಬಿಂಬಿತವಾಗಿರುವ ತಾಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಅನ್ನದಾತನನ್ನು ಕೈ ಹಿಡಿದಿದ್ದು,ಬೆಳೆಗಳು ನಳನಳಿಸುತ್ತಿವೆ. ನಿರೀಕ್ಷೆಗೂ ಮೀರಿ ಮುಂಗಾರಿನ ಫಸಲು ಬರುವ ಆಶಾಭಾವ ಒಡಮೂಡಿದೆ.

ಪ್ರಸಕ್ತ ವರ್ಷ ಮುಂಗಾರು ಮಳೆ ವಾಡಿಕೆಗಿಂತ ಉತ್ತಮವಾಗಿ ಸುರಿಯದಿದ್ದರೂ ಬೆಳೆ ಉಳಿಯುವಷ್ಟು ಸುರಿದಿದೆ. ಈಗಾಗಲೇ ಬಿತ್ತನೆ ಮಾಡಿರುವ ಹೆಸರು, ಗೋವಿನಜೋಳ, ಸಜ್ಜಿ, ನೆವಣಿ, ಗುರೆಳ್ಳು ಬೆಳೆ ಹಸಿರಿನಿಂದ ಕಂಗೊಳಿಸುತ್ತಿದೆ.

ತಾಲೂಕಿನಲ್ಲಿ ಕಳೆದ ಬಾರಿ 30 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು, 10 ಸಾವಿರ ಹೆಕ್ಟೇರ್‌ ಪ್ರದೇಶ ಗೋವಿನಜೋಳ, 5 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಮತ್ತು 1000 ಹೆಕ್ಟೇರ್‌ ಪ್ರದೇಶದಲ್ಲಿ ಸಜ್ಜಿ ಬಿತ್ತನೆಯಾಗಿತ್ತು. ಈ ಬಾರಿ ಹೆಸರು 20,989, ಗೋವಿನ ಜೋಳ 5805, ಶೇಂಗಾ 5355, ಸಜ್ಜಿ 394, ಗುರೆಳ್ಳು 200, ಸೂರ್ಯಕಾಂತಿ 350, ಬಿ.ಟಿ ಹತ್ತಿ 923, ತೊಗರಿ 424 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಬೆಳೆಗಳು ಇದೀಗ ಸಮೃದ್ಧವಾಗಿದ್ದು, ಹೆಸರು ಹೂವು ಬಿಟ್ಟು ಕಾಯಿ ಕಟ್ಟುವ ಹಂತದಲ್ಲಿದೆ. ಮಳೆ ಹೆಚ್ಚಾದರೆ ಕೀಟಭಾದೆ ತಗುಲಿ ಎಲ್ಲಿ ಇಳುವರಿ ಕುಂಠಿತವಾಗುತ್ತದೆಯೋ ಎಂಬ ಭೀತಿ ರೈತರನ್ನು ಕಾಡುತ್ತಿದೆ. ಹೀಗಾಗಿ ಬೆಳೆಗಳ ರಕ್ಷಣೆಗಾಗಿ ರೈತರು ಕೀಟಭಾದೆ, ರೋಗ ಹತೋಟಿಗೆ ತರಲು ಔಷಧ ಸಿಂಪಡಣೆಯಲ್ಲಿ ತೊಡಗಿದ್ದಾರೆ.

ಗಜೇಂದ್ರಗಡ, ಕಾಲಕಾಲೇಶ್ವರ, ಗೊಗೇರಿ, ಗೌಡಗೇರಿ, ಕುಂಟೋಜಿ, ಮ್ಯಾಕಲಝರಿ, ಮಾಟರಂಗಿ, ಸೂಡಿ, ರಾಮಾಪುರ, ಪುರ್ತಗೇರಿ, ಕೊಡಗಾನೂರ, ವೀರಾಪುರ, ಚಿಲ್ಝರಿ, ಬೈರಾಪುರ, ಜಿಗೇರಿ, ರಾಜೂರ, ದಿಂಡೂರ, ಲಕ್ಕಲಕಟ್ಟಿ, ಕಲ್ಲಿಗನೂರ, ಮುಶಿಗೇರಿ, ಪ್ಯಾಟಿ, ನಾಗೇಂದ್ರಗಡ ಸೇರಿ ರೋಣ ಮತ್ತು ಗಜೇಂದ್ರಗಡ ತಾಲೂಕಿನಾದ್ಯಂತ 2019 ಜೂನ್‌ ಮತ್ತು ಜುಲೈನಲ್ಲಿ 233. 7 ಮಿ.ಮೀ. ಮಳೆ ಸುರಿದಿದೆ. 2018 ಜೂನ್‌ ಮತ್ತು ಜುಲೈನಲ್ಲಿ 112. 26 ಮಿ.ಮೀ. ಮಳೆ ಸುರಿದಿತ್ತು.

ಕಳೆದೊಂದು ವಾರದಿಂದ ತುಂತುರು ಮಳೆಯಾಗುತ್ತಿದ್ದು, ಬೆಳೆಗಳು ಮತ್ತಷ್ಟು ಸಮೃದ್ಧವಾಗಿ ಬರುವ ವಿಶ್ವಾಸ ರೈತರಲ್ಲಿದೆ. ಬೆಳೆಗಳ ಮಧ್ಯದಲ್ಲಿನ ಕಳೆ ತೆಗೆಯುವುದು, ಎಡೆಗುಂಟೆ ಹೊಡೆಯುವಂತಹ ಕೆಲಸಗಳಲ್ಲಿ ರೈತರು ತೊಡಗಿದ್ದಾರೆ.

ಸತತ ಬರಕ್ಕೆ ತುತ್ತಾಗಿ ನಲುಗಿದ್ದ ಅನ್ನದಾತರು ಈ ಬಾರಿ ನಿಟ್ಟುಸಿರು ಬಿಡುವಂತಾಗಿದೆ. ನೀರಿಲ್ಲದೆ ಬರಿದಾಗಿದ್ದ ಕೃಷಿ ಹೊಂಡ, ಚೆಕ್‌ ಡ್ಯಾಂಗಳಲ್ಲಿ ನೀರು ತುಂಬಿವೆ. ಕಳೆದೆರಡು ವರ್ಷಗಳಿಂದ ಅನುಭವಿಸಿದ್ದ ಬರಕ್ಕೆ ಗುಡ್‌ ಬೈ ಹೇಳಿದ ನೇಗಿಲ ಯೋಗಿ ಈಗ ಖುಷಿಯಾಗಿದ್ದಾನೆ.

ಭೂತಾಯಿ ನಂಬಿದರೆ ಎಂದಿಗೂ ಕೈ ಬಿಡಲ್ಲ ಎನ್ನುವ ಮಾತು ಸತ್ಯ ಐತ್ರಿ. ಕಳೆದೆರಡು ವರ್ಷ ಬಿತ್ತಿದ ಬೆಳಿ ಕೈಗೆ ಸಿಗದಂಗಾಗಿ ಬಾಳ್‌ ಕಷ್ಟ ಅನುಭವಿಸಿದ್ವಿ. ಆದ್ರ ಭೂ ತಾಯಿ ಮ್ಯಾಲ ನಂಬಿಕೆ ಇಟ್ಟಿದ್ವಿ ಸುಳ್ಳಾಗಲಿಲ್ರಿ.. ಮುಂಗಾರಿನ ಹೆಸರು ಬೆಳೆ ಭರ್ಜರಿ ಐತ್ರಿ. •ಕಳಕಪ್ಪ ಕುಂಬಾರ, ಹೆಸರು ಬೆಳೆದ ರೈತ.
ಕಳೆದ ಮಳೆಯ ಕೊರತೆಯಿಂದ ಮುಂಗಾರು ಬೆಳೆ ಬಾರದೇ ಕೈ ಸುಟ್ಟುಕೊಂಡಿದ್ದ ಅನ್ನದಾತರಿಗೆ ಈ ಬಾರಿ ಮುಂಗಾರು ಜೀವಕಳೆ ತಂದಿದೆ. ಫಸಲು ಉತ್ತಮ ಹಂತದಲ್ಲಿದ್ದು, ರೈತರ ಜಮೀನುಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಜೂನ್‌ ತಿಂಗಳ ಕೊನೆಯ ವಾರದಲ್ಲಿ ಬಿತ್ತನೆಯಾಗಿದ್ದ ಗೋವಿನ ಜೋಳ ಉತ್ತಮವಾಗಿದೆ.
•ಡಿ. ಜಿ ಮೋಮಿನ್‌

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.