ಮತ್ತೆ ಕಲ್ಯಾಣ ಅಭಿಯಾನಕ್ಕೆ ಚಾಲನೆ

ತರೀಕೆರೆಯ ಅಕ್ಕ ನಾಗಲಾಂಬಿಕೆ ಗದ್ದುಗೆ ಬಳಿಯಿಂದ ಕಾರ್ಯಕ್ರಮ ಆರಂಭ

Team Udayavani, Aug 2, 2019, 5:57 AM IST

Ban02081906Medn

ತರೀಕೆರೆ: ಬಸವಾದಿ ಶರಣರ ಸಮ ಸಮಾಜದ ಪರಿಕಲ್ಪನೆಯ ಅರಿವು ಮತ್ತು ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸದಾಶಯದೊಂದಿಗೆ ಒಂದು ತಿಂಗಳ ಕಾಲ ರಾಜ್ಯದ ಎಲ್ಲೆಡೆ ನಡೆಯಲಿರುವ ‘ಮತ್ತೆ ಕಲ್ಯಾಣ’ ಅಭಿಯಾನ ಗುರುವಾರದಿಂದ ಆರಂಭಗೊಂಡಿದೆ.

ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಲಿರುವ ಈ ಅಭಿಯಾನಕ್ಕೆ, ತರೀಕೆರೆಯ ಅಕ್ಕ ನಾಗಲಾಂಬಿಕೆ ಗದ್ದುಗೆ ಬಳಿ ಚಾಲನೆ ನೀಡಲಾಯಿತು. ಅಭಿಯಾನದ ಅಂಗವಾಗಿ ಸಾಮರಸ್ಯ ನಡಿಗೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಚಿಂತಕ ಗೊ.ರು.ಚೆನ್ನಬಸಪ್ಪ ಮಾತನಾಡಿ, 12ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿ ಮಾಡಿದವರು ದಾರ್ಶನಿಕ ಬಸವಣ್ಣನವರು. 850 ವರ್ಷಗಳ ನಂತರ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಆರಂಭವಾಗಿರುವುದು ಶುಭ ಲಕ್ಷಣವಾಗಿದೆ.

‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಒಂದು ಚಳವಳಿಯಾಗಿ ರೂಪುಗೊಳ್ಳಬೇಕು. ಜೊತೆಗೆ ಆಂದೋಲನವಾಗಿ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಪ್ರಜಾಸತ್ತೆಯ ದೇಹದ ಮೇಲೆ ಗಾಯಗಳನ್ನು ಮಾಡಲಾಗುತ್ತಿದೆ. ಸಮಾಜದಲ್ಲಿ ಸಂಕಟವಿದೆ, ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ನಮ್ಮ ಜನಪ್ರತಿನಿಧಿಗಳು ರೆಸಾರ್ಟ್‌ ರಾಜಕಾರಣ ಮಾಡುತ್ತ, ವೈಭೋಗದ ಜೀವನ ನಡೆಸುತ್ತಿದ್ದಾರೆ. ಮತದಾರರು ರಾಜಕಾರಣಿಗಳು ತೋರುವ ಕ್ಷುಲ್ಲಕ ಆಸೆ, ಆಮಿಷಗಳಿಗೆ ಬಲಿಯಾಗಿ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಎಡುವುತ್ತಿದ್ದಾರೆ. ಇದು ಬದಲಾಗಬೇಕು ಎಂದು ಅಭಿಪ್ರಾಯಪಟ್ಟರು.

ಸಾನ್ನಿಧ್ಯ ವಹಿಸಿದ್ದ ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿ, ಇಂದಿನ ಸಮಾಜದಲ್ಲಿರುವ ಅನೇಕ ರೋಗಗಳಿಗೆ ಮದ್ದು ನೀಡಬೇಕಾಗಿದೆ. ರಾಜಕೀಯ, ಜಾತಿ, ಭ್ರಷ್ಟಾಚಾರ ಇವೆಲ್ಲ ಸಮಾಜವನ್ನು ರೋಗಪೀಡಿತವನ್ನಾಗಿ ಮಾಡಿವೆ ಮತ್ತು ಸಮಸ್ಯೆಗಳಾಗಿ ಮಾರ್ಪಟ್ಟಿವೆ. ಸಮಸ್ಯೆಗಳನ್ನು ತಾಳ್ಮೆಯಿಂದ ಪರಿಹರಿಸಿಕೊಳ್ಳಬೇಕು. ಆಗ ಬದುಕು ನಿರಾತಂಕವಾಗಿ ಬದಲಾವಣೆ ಕಾಣುತ್ತದೆ ಎಂದರು.

ಇಂದು ನಾವು ಅನಾರೋಗ್ಯದ ವಾತಾವರಣಕ್ಕೆ ಸಿಲುಕಿದ್ದೇವೆ. ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕವಾಗಿ ಪರಿವರ್ತನೆ ಮಾಡುವುದು ‘ಮತ್ತೆ ಕಲ್ಯಾಣ’ ಕಾರ್ಯಕ್ರಮದ ಆಶಯವಾಗಿದೆ ಎಂದರು.

ಸಮಾರಂಭದಲ್ಲಿ ಯಳನಾಡು ಮಠದ ಶ್ರೀ ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ, ನಂದಿಪುರದ ಶ್ರೀ ನಂದಿಕೇಶ್ವರ ಸ್ವಾಮೀಜಿ, ಶಾಸಕರಾದ ಸಿ.ಟಿ.ರವಿ, ಡಿ.ಎಸ್‌. ಸುರೇಶ್‌, ಬೆಳ್ಳಿ ಪ್ರಕಾಶ್‌ ಸೇರಿದಂತೆ ಹಲವು ಜನಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಐಕ್ಯಮಂಟಪ ಮಾದರಿ ವಾಹನ

‘ಮತ್ತೆ ಕಲ್ಯಾಣ’ ಅಭಿಯಾನಕ್ಕಾಗಿ ಬೆಂಗಳೂರಿನ ಖ್ಯಾತ ಕಲಾವಿದ ಶಶಿಧರ ಅಡಪ ನೇತೃತ್ವದ ತಂಡ ಕೂಡಲಸಂಗಮದ ಐಕ್ಯಮಂಟಪದ ಮಾದರಿಯಲ್ಲಿ ಶರಣರ ವಚನಗಳು ಹಾಗೂ ಪ್ರತಿಮೆಗಳನ್ನೊಳಗೊಂಡ ಪ್ರಚಾರ ವಾಹನವೊಂದನ್ನು ಸಿದ್ಧಪಡಿಸಿದೆ. ಗುರುವಾರ ಚಿತ್ರದುರ್ಗ ಜಿಲ್ಲೆ ಸಾಣೇಹಳ್ಳಿ ಮಠದಿಂದ ಹೊರಟ ಈ ವಾಹನ ತರೀಕೆರೆಗೆ ಆಗಮಿಸಿದೆ. ಈ ವಾಹನ ಒಂದು ತಿಂಗಳವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಆ.30ರಂದು ಬೀದರ್‌ನ ಬಸವಕಲ್ಯಾಣದಲ್ಲಿ ಸಮಾರೋಪ ನಡೆಯಲಿದೆ.

ಕಲ್ಯಾಣ ರಾಜ್ಯ ಎನ್ನುವುದು ಒಂದು ಕನಸು.ಜಾತಿ-ಮತಗಳನ್ನು ಮೀರಿದ ಒಂದು ಸಂದೇಶ. ಕನಸಿಲ್ಲದ ದಾರಿಯಲ್ಲಿ ಹೋಗಬಾರದು.ಕರ್ನಾಟಕದಲ್ಲಿ ಆನೇಕ
ಪ್ರಯೋಗದ ತಾಣಗಳಿವೆ. ಕಲ್ಯಾಣಕೂಡ ಒಂದು ಪ್ರಯೋಗ ತಾಣ.ಕಲ್ಯಾಣವೆಂದರೆ ಚಳವಳಿಗಳ ತಾಣ.ಇದೊಂದು ವೈಚಾರಿಕ ಯಾತ್ರೆ.
– ಪ್ರೊ| ತರೀಕೆರೆ ರಹಮತ್‌

ಹೆಣ್ಣಿಗೆ ಸ್ವಾತಂತ್ರ್ಯ ಸಿಕ್ಕಿದ್ದು 12ನೇ ಶತಮಾನದಲ್ಲಿ. ಅನುಭವ ಮಂಟಪದಲ್ಲಿ ಹಲವಾರು ಮಹಿಳೆಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ವಚನಗಳು
ಜ್ಞಾನದೀವಿಗೆಗಳು. ಕಲ್ಯಾಣವೆಂದರೆ ಒಳಿತು, ಲೇಸು ಮತ್ತು ಅಭ್ಯುದಯ.ಮನುಕುಲದ ಕಲ್ಯಾಣವೇ “ಮತ್ತೆ ಕಲ್ಯಾಣ’ವಾಗಿದೆ.
– ಗಂಗಾಂಬಿಕಾ ಬಸವರಾಜು,ಚಿಂತಕಿ

ಇತ್ತೀಚಿನ ದಿನಗಳಲ್ಲಿ ಹಿಂದುತ್ವದ ಹೆಸರಿನಲ್ಲಿಬ್ರಾಹ್ಮಣ್ಯವನ್ನು ಹೇರಲಾಗುತ್ತಿದೆ. ವ್ಯವಸ್ಥೆ, ಸರಕಾರ ಜಾತ್ಯತೀತ ಸಿದಾಟಛಿಂತಗಳನ್ನು ಹೇಳುತ್ತವೆಯೇ ಹೊರತು ಜಾರಿಗೆ ತರುವುದಿಲ್ಲ.ಶರಣರ ವಚನಗಳು ಜಾತಿಯನ್ನು ನಿರಾಕರಿಸುತ್ತವೆ. ಬಡವ-ಶ್ರೀಮಂತ ಎಂಬ ಭೇದಭಾವ ಹೋಗಬೇಕಾಗಿದೆ. ಶ್ರೀಮಂತರಲ್ಲಿನ ಶ್ರೀಮಂತಿಕೆಯನ್ನು ಬಡವರಿಗೆ ಹಂಚುವ ಅಗತ್ಯವಿದೆ.
– ಚೇತನ್‌, ಚಿಂತಕ ಹಾಗೂ ಚಿತ್ರ ನಟ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.