ಮೋದಿ ಬಯಸಿದರೆ ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶ: ಟ್ರಂಪ್
Team Udayavani, Aug 2, 2019, 10:31 AM IST
ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ಥಾನ ನಡುವಿನ ಕಾಶ್ಮೀರ ವಿವಾದವನ್ನು ಬಗೆಹರಿಸುವ ವಿಚಾರವನ್ನು ಅಮೇರಿಕಾ ಅಧ್ಯಕ್ಷ ಮತ್ತೆ ಪುನರುಚ್ಚರಿಸಿದ್ದಾರೆ. ಉಭಯ ದೇಶಗಳು ಒಪ್ಪಿದರೆ ಅಮೇರಿಕಾ ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗೆ ಪಾಕಿಸ್ಥಾನಕ್ಕೆ ಭೇಟಿ ನೀಡಿದ್ದ ಟ್ರಂಪ್, ತಾನು ಕಾಶ್ಮೀರ ವಿವಾದದಲ್ಲಿ ಉಬಯ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ದವಿರುವಿದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಹೇಳಿದ್ದೆ ಎಂದಿದ್ದರು .
ಆದರೆ ಅಮೇರಿಕಾ ಅಧ್ಯಕ್ಷರ ಈ ಬೇಡಿಕೆಯನ್ನು ಭಾರತ ತಿರಸ್ಕರಿಸಿದೆ. ʼಇದು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಟ್ಟ ವಿಷಯ. ಅವರು ಒಪ್ಪಿಗೆ ನೀಡಿದರೆ ಮಾತ್ರ ನಾನು ಮಧ್ಯಸ್ಥಿಕೆ ವಹಿಸಲು ಸಿದ್ದʼ ಎಂದು ಟ್ರಂಪ್ ಹೇಳಿಕೆ ನೀಡಿದ್ದಾರೆ.