ಸಿದ್ಧಾರ್ಥ್ ಸಾವು ಭರಿಸಲಾಗದ ನಷ್ಟ

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ನುಡಿ • ಸಾವಿನ ಸುತ್ತ ಅನುಮಾನದ ಹುತ್ತ

Team Udayavani, Aug 3, 2019, 11:23 AM IST

3-Agust-15

ಮೂಡಿಗೆರೆ: ಜೇಸಿ ಭವನದಲ್ಲಿ ಆಯೋಜಿಸಿದ್ದ ಸಿದ್ಧಾರ್ಥ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸಾಗರ.

ಮೂಡಿಗೆರೆ: ಸರಳ-ಸಜ್ಜನಿಕೆಯೊಂದಿಗೆ ಮೌಲ್ಯಾಧಾರಿತ ಜೀವನ ನಡೆಸಿದ ಉದ್ಯಮಿ ಕೆಫೆ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಹೆಗ್ಡೆ ಅವರ ಅಕಾಲಿಕ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.

ಶುಕ್ರವಾರ ಪಟ್ಟಣದ ಜೇಸಿ ಭವನದಲ್ಲಿ ಕಾಫಿ ಬೆಳೆಗಾರರ ಸಂಘ ಹಾಗೂ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘ- ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಸಿದ್ಧಾರ್ಥ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ಮಾತನಾಡಿ, ಸಮಾಜದಲ್ಲಿ ಒಬ್ಬ ವ್ಯಕ್ತಿ ಹೇಗೆ ಗೌರವಿತವಾಗಿ ಬದುಕಬೇಕು ಎಂಬದನ್ನು ತೋರಿಸಿಕೊಡುತ್ತಿದ್ದ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ಅವರು ತೀರಾ ದೊಡ್ಡ ಉದ್ಯಮಿಯಾದರೂ ಜನಸಾಮಾನ್ಯರೊಂದಿಗೆ ಬದುಕುತ್ತಿದ್ದರು.

ನಮ್ಮಂತಹ ರಾಜಕಾರಣಿಗಳಿಗೂ ಅದನ್ನು ಪಾಲಿಸುವಂತೆ ಸಲಹೆ ನೀಡುತ್ತಿದ್ದರು. ಇಂತಹ ಒಬ್ಬ ಸಜ್ಜನ ಉದ್ಯಮಿಯನ್ನು ಕಳೆದುಕೊಂಡಿರುವುದು ನಮ್ಮ ದುರಾದೃಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ತಾನು ಸಚಿವೆಯಾಗಿದ್ದಾಗ ಪ್ರತಿದಿನ ನನ್ನನ್ನು ಭೇಟಿಯಾಗಿ ಮಾರ್ಗದರ್ಶನ ನೀಡಿ, ರಾಜಕೀಯ ಆಗುಹೋಗುಗಳಿಗೂ ಪ್ರೋತ್ಸಾಹ ನೀಡುತ್ತಿದ್ದರು. ನನ್ನ ಒಳ್ಳೆಯ ನಿರ್ಧಾಗಳಿಗೆ ಶಹಬ್ಟಾಶ್‌ಗಿರಿ ಹೇಳುತ್ತಿದ್ದ ಸಿದ್ಧಾರ್ಥ ಅವರು ಸರಳ-ಸಜ್ಜನಿಕೆಗೆ ಹೆಸರಾಗಿದ್ದರು.ಅವರನ್ನು ಕಳೆದುಕೊಂಡ ನೋವು ಸಹಿಸಲಾಗುತ್ತಿಲ್ಲ. ಅವರ ಕುಟುಂಬಕ್ಕೆ ಭಗವಂತ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಭಾವುಕರಾಗಿ ನುಡಿದರು.

ಕರ್ನಾಟಕ ಬೆಳೆಗಾರ ಸಂಘದ ಮಾಜಿ ರಾಜ್ಯಾಧ್ಯಕ್ಷ ಬಿ.ಎಸ್‌.ಜಯರಾಂ ಮಾತನಾಡಿ, ಕಾಫಿ ಉದ್ಯಮದ ಹರಿಕಾರ, ಸಮಾಜ ಸೇವಕ ಸಿದ್ಧಾರ್ಥ ಅವರು, ತಾನು ಕಂಡಂತಹ ಅತ್ಯುತ್ತಮ ಉದ್ಯಮಿಯಾಗಿ ರೂಪುಗೊಂಡವರು. ಅವರ ಸರಳತೆ ಕಾಫಿ ನಾಡಿಗೆ ಮಾದರಿಯಾಗಿದೆ. ಸಿದ್ಧಾರ್ಥ ಅವರ ಅಕಾಲಿಕ ಸಾವು ಜಿಲ್ಲೆಯ ಜನತೆಗೆ ಬಹುದೊಡ್ಡ ನಷ್ಟವುಂಟು ಮಾಡಿದೆ. ಪ್ರತಿ ಕ್ಷಣವೂ ಕಾಫಿ ನಾಡಿಗೆ ಮೋಡ ಕವಿದ ವಾತಾವರಣ ಉಂಟಾಗುತ್ತಿದೆ. ಅವರ ಅಗಲಿಕೆಯಿಂದ ಕಾಫಿ ಉದ್ಯಮ ಬಡವಾಗಿದೆ. ಸಿದ್ಧಾರ್ಥ ಅವರ ನೆನಪಿಗಾಗಿ ಪಟ್ಟಣದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗುವುದು. ಅವರ ಅಸಹಜ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ನ್ಯಾಯಾಲಯದ ಮೊರೆ ಹೋಗಲು ಬೆಳೆಗಾರರ ಸಂಘ ನಿರ್ಧರಿಸಿದೆ ಎಂದು ತಿಳಿಸಿದರು.

ಕಾಫಿ ಬೆಳೆಗಾರ ಬಿ.ಎ.ಜಗನ್ನಾಥ್‌ ಮಾತನಾಡಿ, ಒಬ್ಬ ಉದ್ಯಮಿ ಪ್ರಪಂಚದಾದ್ಯಂತ ಹೆಸರು ಮಾಡಲು ಅವರ ಶ್ರಮದೊಂದಿಗೆ ಅಪಾರವಾದ ದೈವೀ ಶಕ್ತಿಯೂ ಇರಬೇಕು. ಅಂತಹ ಶಕ್ತಿ ಸಿದ್ಧಾರ್ಥರಲ್ಲಿತ್ತು. ಕಾಫಿ ಉದ್ಯಮ ಭಾರತದಲ್ಲೂ ಉತ್ತಮವಾಗಿದೆ ಎಂದು ಪ್ರಪಂಚಕ್ಕೆ ತಿಳಿಸಿದ ನೇತಾರ. ಬಹುರಾಷ್ಟ್ರೀಯ ಕಂಪನಿಗಳ ಕಪಿಮುಷ್ಟಿಯಿಂದ ಕಾಫಿ ಬೆಳೆಗಾರರಿಗೆ ಅನುಕೂಲ ಮಾಡಿಕೊಟ್ಟ ವ್ಯಕ್ತಿ ಇನ್ನಿಲ್ಲ ಎಂಬುದೇ ನಮ್ಮ ದುರಂತ ಎಂದರು.

ಪ್ರಾರಂಭದಲ್ಲಿ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.ಸಿದ್ಧಾರ್ಥ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ವೇಳೆ ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಬೆಳೆಗಾರ ಸಂಘದ ಅಧ್ಯಕ್ಷ ಬಾಲಕೃಷ್ಣ, ಜೆಡಿಎಸ್‌ ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ ಕುಮಾರ್‌, ಬಾಲಕೃಷ್ಣಗೌಡ, ಸುರೇಂದ್ರ, ದುಂಡುಗ ಪ್ರಮೋದ್‌, ಡಿ.ಆರ್‌.ದುಗ್ಗಪ್ಪಗೌಡ, ಅಶೋಕ್‌ ಶೆಟ್ಟಿ, ಚಂದ್ರೇಶ್‌, ಡಿ.ಕೆ.ಲಕ್ಷ ್ಮಣ್‌ಗೌಡ, ಮುಗ್ರಹಳ್ಳಿ ಪ್ರದೀಪ,ಬಿ.ಎಂ.ಬೈರೇಗೌಡ, ಎಂ.ಎಸ್‌.ಅನಂತ್‌, ಅರೆಕುಡಿಗೆ ಶಿವಣ್ಣ, ಎಚ್.ಕೆ.ಯೋಗೇಶ್‌, ಸುದರ್ಶನ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.