ಕರ್ಣಾರ್ಜುನದಲ್ಲಿ ವಕೀಲರ ವಾದ ಮಂಡನೆ

Team Udayavani, Aug 9, 2019, 5:00 AM IST

e-4

ಕನ್ಯಾಡಿಯ ಯಕ್ಷಭಾರತಿ 5ನೇ ವರ್ಷದ ಸಂಭ್ರಮಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದು, ತಾಲೂಕಿನ ಹವ್ಯಾಸಿ ಯಕ್ಷಗಾನ ತಂಡಗಳಿಗೆ ತಾಳಮದ್ದಳೆ ಹಾಗೂ ಯಕ್ಷಗಾನ ಪ್ರದರ್ಶನ ನೀಡುವ ಅವಕಾಶ ಕಲ್ಪಿಸಿಕೊಟ್ಟಿದೆ. ಸರಣಿಯ ಮೊದಲ ಕಾರ್ಯಕ್ರಮದಂಗವಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜು.20ರಂದು ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಸದಸ್ಯರು “ಕರ್ಣಾರ್ಜುನ’ (ಕರ್ಣಪರ್ವ) ತಾಳಮದ್ದಳೆಯನ್ನು ನಡೆಸಿಕೊಟ್ಟರು.

ನ್ಯಾಯಾಲಯದಲ್ಲಿ ತಮ್ಮ ಕಕ್ಷಿದಾರರ ಪರವಾಗಿ ವಾದಿಸುವ ನ್ಯಾಯವಾದಿಗಳು ಯಕ್ಷಗಾನದ ವೇದಿಕೆಯಲ್ಲಿ ಅರ್ಥಧಾರಿಗಳಾಗಿ ತಮ್ಮ ಪಕ್ಷಕ್ಕೆ ನ್ಯಾಯ ದೊರಕಿಸಿ ಕೊಡಲು ವಾದಿಸುವುದರಲ್ಲಿ ತಾವು ಕಡಿಮೆಯಿಲ್ಲವೆಂಬುದನ್ನು ಶ್ರುತಪಡಿಸಿದ್ದಾರೆ. ಕರ್ಣಾರ್ಜುನರ ನಡುವಿನ ಯುದ್ಧದ ಸನ್ನಿವೇಶವನ್ನು ಯಾವ ಯಕ್ಷಗಾನ ಅರ್ಥದಾರಿಗೂ ಸರಿಗಟ್ಟುವ ರೀತಿಯಲ್ಲಿ ಪಾತ್ರದ ಘನತೆ, ಗಾಂಭೀರ್ಯವನ್ನು ಎತ್ತಿ ತೋರಿಸಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿಯೂ ಯಕ್ಷಗಾನವನ್ನು ಪ್ರವೃತ್ತಿಯಾಗಿ ಬೆಳೆಸಿ ಪಾತ್ರಕ್ಕೆ ಸಮರ್ಪಕವಾಗಿ ಜೀವ ತುಂಬಿ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ. ಸುಬ್ರಹ್ಮಣ್ಯ ಕುಮಾರ್‌ ಅಗರ್ತ ಕರ್ಣನಾಗಿ ಆರಂಭದಿಂದ ಅಂತ್ಯದವರೆಗೂ ಒಂದೇ ವಾಗ್ಝರಿಯಲ್ಲಿ ತನ್ನ ದೃಢ ನಿಲುವನ್ನು ಸಮರ್ಥಿಸುತ್ತ ಬದ್ಧತೆಯನ್ನು ಪ್ರತಿಪಾದಿಸಿ ಭೇಷ್‌ ಎನಿಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಕುಮಾರ್‌ ಪಡಂಗಡಿ ಅರ್ಜುನನ ಸಾರಥಿ ಕೃಷ್ಣನಾಗಿ ಕರ್ಣನ ಶೌರ್ಯವನ್ನು ಶ್ಲಾ ಸಿ ಅರ್ಜುನನನ್ನು ಹುರಿದುಂಬಿಸುತ್ತಾರೆ. ಕರ್ಣನ ಸಾರಥಿ ಶಲ್ಯನಾಗಿ ಕೇಶವ ಬೆಳಾಲು ಪ್ರಖರವಾದ ಮಾತುಗಳಿಂದ ಮತ್ತೆ ಅರ್ಜುನನೆಡೆಗೆ ಅಸ್ತ್ರ ಪ್ರಯೋಗಿಸುವಂತೆ ಕರ್ಣನನ್ನು ಉತ್ತೇಜಿಸುತ್ತಾರೆ. ಅರ್ಜುನನಾಗಿ ಶೈಲೇಶ್‌ ಠೊಸರ್‌ ಪ್ರತ್ಯಸ್ತ್ರ ಪ್ರಯೋಗದಲ್ಲಿ ತನ್ನ ಮಾತಿನ ಚಾಟಿಯಿಂದ ಕರ್ಣನನ್ನು ಬಡಿದೆಬ್ಬಿಸುತ್ತಾರೆ. ಪುಟ್ಟ ಪಾತ್ರವಾದರೂ ಸರ್ಪಾಸ್ತ್ರ ಅಶ್ವಸೇನನಾಗಿ ಪ್ರತಾಪ ಸಿಂಹ ನಾಯಕ್‌ ಮತ್ತೆ ಅಸ್ತ್ರ ಪ್ರಯೋಗಿಸುವಂತೆ ಪ್ರಚೋದಿಸುವ ಮಾತಿನ ವೈಖರಿ ಗಮನ ಸೆಳೆದಿತ್ತು.

ಭಾಗವತರಾಗಿ ಗಿರೀಶ ಮುಳಿಯಾಲ ಮತ್ತು ಪ್ರಕಾಶ ಅಭ್ಯಂಕರ್‌, ಚೆಂಡೆ ಮದ್ದಳೆಯಲ್ಲಿ ಶ್ರೇಯಸ್‌ ಪಾಳಂದೆ ಮತ್ತು ಆದಿತ್ಯ ಹೊಳ್ಳ ಸಹಕರಿಸಿದ್ದು, ಉತ್ಕೃಷ್ಟ ಮಟ್ಟದ ತಾಳದ್ದಳೆಯಲ್ಲಿ ಎಲ್ಲ ನ್ಯಾಯವಾದಿಗಳೂ ತಮ್ಮ ಪಾತ್ರಗಳಿಗೆ ನ್ಯಾಯ ದೊರಕಿಸಿ ತಾವು ತಾಳಮದ್ದಳೆ ಕೂಟದಲ್ಲೂ ಸೈ ಎನಿಸಿಕೊಂಡಿದ್ದಾರೆ.

ಸಾಂತೂರು ಶ್ರೀನಿವಾಸ ತಂತ್ರಿ

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.