ಮಾಜಿ ದೇವದಾಸಿಯರಿಗೆ ಜಮೀನು ಹಂಚಿಕೆ

•ಸೌಲಭ್ಯ ನೀಡಲು ರಾಜ್ಯದ 10 ಜಿಲ್ಲೆಗಳು ಆಯ್ಕೆ•ಕೊಪ್ಪದಲ್ಲೇ ಮೊದಲು ಯೋಜನೆ ಅನುಷ್ಠಾನ

Team Udayavani, Aug 9, 2019, 12:59 PM IST

kopala-tdy-5

ಕೊಪ್ಪಳ: ಅರ್ಹ ಮಾಜಿ ದೇವದಾಸಿಯರಿಗೆ ಭೂಮಿ ಮಂಜೂರು ಮಾಡುವ ಸಲುವಾಗಿ ಭೂ ಮಾಲೀಕರ ಜಮೀನುಗಳಿಗೆ ಬೆಲೆ ನಿಗದಿಗೊಳಿಸಲು ನಡೆದ ಅನುಷ್ಠಾನ ಸಮಿತಿ ಸಭೆಯಲ್ಲಿ ಡಿಸಿ ಸುನೀಲ್ ಕುಮಾರ ಮಾತನಾಡಿದರು.

ಕೊಪ್ಪಳ: ಭೂರಹಿತ ದೇವದಾಸಿಯರ ಸಬಲೀಕರಣಕ್ಕೆ ಡಾ| ಬಿ.ಆರ್‌. ಅಂಬೇಡ್ಕರ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಡಿ ಜಮೀನು ಹಂಚಿಕೆಗೆ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ ಪಿ. ಸುನೀಲ್ ಕುಮಾರ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಭೂ ಒಡೆತನ ಯೋಜನೆಯಡಿ ಅರ್ಹ ಮಾಜಿ ದೇವದಾಸಿ ಮಹಿಳೆಯರಿಗೆ ಭೂಮಿ ಮಂಜೂರು ಮಾಡುವ ಸಲುವಾಗಿ ಭೂ ಮಾಲೀಕರ ಜಮೀನುಗಳಿಗೆ ಬೆಲೆ ನಿಗದಿಗೊಳಿಸಲು ನಡೆದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗುರುತಿಸಲ್ಪಟ್ಟ ಭೂರಹಿತ ಮಾಜಿ ದೇವದಾಸಿಯರ ಸಬಲೀಕರಣಕ್ಕಾಗಿ ಡಾ| ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಭೂ ಒಡೆತನ ಯೋಜನೆಯಡಿ ಭೂಮಿ ಖರೀದಿಸಿ ಹಂಚಿಕೆ ಮಾಡುವ ಯೋಜನೆಗೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕೊಪ್ಪಳ ಜಿಲ್ಲೆಯಲ್ಲಿಂದು ಚಾಲನೆ ನೀಡಲಾಗಿದ್ದು, ಈ ಯೋಜನೆಯಡಿ 2017-18ನೇ ಸಾಲಿಗೆ ಜಿಲ್ಲೆಯ 16 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಭೂ ಹಂಚಿಕೆ ಮಾಡಲಾಗುತ್ತಿದೆ. ಇಲಾಖೆಯಿಂದ ಗುರುತಿಸಲ್ಪಟ್ಟ ಮಾಜಿ ದೇವದಾಸಿಯರಲ್ಲಿ ಅರ್ಹ ಭೂ ರಹಿತ ಮಾಜಿ ದೇವದಾಸಿ ಮಹಿಳೆಯರನ್ನು ಗುರುತಿಸಿ ಆಯ್ಕೆ ಮಾಡಿ ನಿಯಮಾನುಸಾರ ಸೌಲಭ್ಯ ನೀಡಲು ರಾಜ್ಯದ 10 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಕೊಪ್ಪಳ ಜಿಲ್ಲೆಯೂ ಒಂದಾಗಿದ್ದು, ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಅರ್ಹ ಫಲಾನುಭವಿಗಳಿಗೆ ಅವರು ವಾಸಿಸುವ ಪ್ರದೇಶದ ವ್ಯಾಪ್ತಿಯಲ್ಲಿ ಭೂ ಮಾಲೀಕರಿಂದ ಭೂಮಿ ಖರೀದಿಸಿ ಭೂ ಹಂಚಿಕೆ ಮಾಡಲು ಕ್ರಮ ಕೈಗೊಂಡಿದೆ ಎಂದರು.

ಡಾ| ಬಿ.ಆರ್‌ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ.ರಮೇಶ ಮಾತನಾಡಿ, ಫಲಾನುಭವಿಗಳ ಆಯ್ಕೆ ಮಾನದಂಡಗಳು ಹಾಗೂ ಅರ್ಹತೆಗಳು, ಭೂ ಹಂಚಿಕೆ ನಿಯಮಗಳ ಕುರಿತು ಸಂಕ್ಷಿಪ್ತ ವಿವರಣೆ ನೀಡಿದರು.

ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಭೂ ಮಾಲೀಕರು, ವಿಮುಕ್ತ ದೇವದಾಸಿ ವೇದಿಕೆಯ ಸಂಚಾಲಕ ಚಂದಾಲಿಂಗ್‌ ಕಲಾಲಬಂಡಿ, ಮಾಜಿ ದೇವದಾಸಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.