ಇಂದು ಜಿಲ್ಲೆ ಪ್ರವೇಶಿಸಲಿದ್ದಾಳೆ ಹೇಮೆ

ಬುಗಡನಹಳ್ಳಿ ಕೆರೆಗೆ ಹರಿಯಲಿದೆ ನೀರು | ಕಾಲುವೆ ದುರಸ್ತಿ ಪರಿಶೀಲನೆ

Team Udayavani, Aug 10, 2019, 3:22 PM IST

tk-tdy-2

ತುಮಕೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿ ಉಂಟಾಗಿರುವುದರಿಂದ ಜನರು ಅಕ್ಷರಶಃ ತತ್ತರಿಸಿಹೋಗಿದ್ದರೆ, ಕಲ್ಪತರು ನಾಡಿನ ಮೇಲೆ ವರುಣನ ಮುನಿಸು ಕಡಿಮೆಯಾದಂತಿಲ್ಲ. ಆದರೆ ಹೇಮಾವತಿ ಜಲಾಶಯ ತುಂಬಿರುವುದರಿಂದ ಜಿಲ್ಲೆಯ ಜನರ ನೀರಿನ ದಾಹ ನೀಗಿಸುವ ಸಲುವಾಗಿ ಹೇಮಾವತಿ ನೀರು ಜಿಲ್ಲೆಗೆ ಪ್ರವೇಶಿಸಲಿದೆ.

ಬೇರೆಡೆ ಮಳೆಯಿಂದ ಜಿಲ್ಲೆಗೆ ಹೇಮೆ: ಕಳೆದ ವರ್ಷ ತುಮಕೂರು ಜಿಲ್ಲೆಗೆ ಜುಲೈ ತಿಂಗಳಲ್ಲಿಯೇ ಹೇಮಾವತಿ ಜಲಾಶಯದಿಂದ ನೀರು ಹರಿಸಲಾಗಿತ್ತು. ಆದರೆ ಈ ವರ್ಷ ನಗರಕ್ಕೆ ನೀರು ಹರಿಸುವ ಬುಗಡನಹಳ್ಳಿ ಕೆರೆ ಬರಿದಾಗಿದೆ. ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿದಿದೆ. ಜನರು ಟ್ಯಾಂಕರ್‌ ನೀರಿಗೆ ಅವಲಂಬಿತರಾಗಿದ್ದು, ಮಳೆ ಬರದಿದ್ದರೆ ಹೇಗಪ್ಪ ಎಂದು ಚಿಂತಿಸುವ ವೇಳೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಧಾರಾಕಾರವಾಗಿ ಸುರಿದು ಜಲಾಶಯಗಳ ಒಳಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಲೆಗಳಲ್ಲಿ ನೀರು ಹರಿಸಲು ನಿರ್ಧರಿಸಿದ್ದು, ಅದರಂತೆ ತುಮಕೂರಿನ ಹೇಮಾವತಿ ನಾಲೆಗೆ ನೀರು ಬಿಟ್ಟಿರುವುದರಿಂದ ಈಗಾಗಲೇ ನೀರು ನಾಲೆಯಲ್ಲಿ ಹರಿದು ಬರುತ್ತಿದ್ದು, ಶನಿವಾರ ಮಧ್ಯಾಹ್ನ ಅಥವಾ ಸಂಜೆಯೊಳಗೆ ಹೇಮಾವತಿ ಬುಗಡನಹಳ್ಳಿ ಕೆರೆಗೆ ಬರುವ ಸಾಧ್ಯತೆ ಇದೆ.

ಹೇಮಾವತಿ ಜಲಾನಯನ ಪ್ರದೇಶದಲ್ಲಿ ಧಾರಕಾರವಾಗಿ ಮಳೆಯಾಗುತ್ತಿದ್ದು, ಹೇಮಾವತಿ ಜಲಾಶಯದಲ್ಲಿ ಶುಕ್ರವಾರದ ಒಳಹರಿವು 1 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಾಗಿದ್ದು, ಪ್ರತಿನಿತ್ಯ 8 ಟಿಎಂಸಿ ನೀರು ಹೇಮಾವತಿ ಜಲಾಶಯದಲ್ಲಿ ಸಂಗ್ರವಾಗುತ್ತಿದೆ. ಈಗಾಗಲೇ ತುಮಕೂರು ಜಿಲ್ಲೆಯ ಹೇಮಾವತಿ ನಾಲಾ ವಲಯ ವ್ಯಾಪ್ತಿಗೆ ನೀರು ಹರಿಸಲಾಗಿದೆ. ನೀರು ರಭಸವಾಗಿ ನಾಲೆಯಲ್ಲಿ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ತುಮಕೂರು ನಗರದ ಪ್ರಮುಖ ಕುಡಿಯುವ ನೀರಿನ ಜಲ ಸಂಗ್ರಹವಾದ ಬುಗಡನಹಳ್ಳಿ ಕೆರೆಗೆ ಹೇಮಾವತಿ ನೀರು ಬರಲಿದೆ.

ಜ್ಯೋತಿಗಣೇಶ್‌ ಪರಿಶೀಲನೆ: ಬುಗಡನಹಳ್ಳಿ ಕೆರೆಗೆ ಹೇಮಾವತಿ ನೀರು ಬರುತ್ತಿರುವುದರಿಂದ ಶುಕ್ರವಾರ ತುಮಕೂರು ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್‌ ಬುಗಡನಹಳ್ಳಿ ಕೆರೆಗೆ ಭೇಟಿನೀಡಿ, ನೀರು ಬರುವ ಕಾಲುವೆ ದುರಸ್ತಿ ಕಾಮಗಾರಿ ಪರಿಶೀಲನೆ ನಡೆಸಿ, ಶನಿವಾರ ಮಧ್ಯಾಹ್ನದೊಳಗೆ ಹೇಮಾವತಿ ನೀರು ಬುಗುಡನಹಳ್ಳಿ ಕೆರೆಗೆ ಬರಲಿದ್ದು, ಕೆರೆಯ ಹತ್ತಿರ ಕಾಲುವೆಗೆ ಬಿದ್ದಿರುವ ಕಲ್ಲು, ನಾಲೆಯಲ್ಲಿ ತುಂಬಿರುವ ಮಣ್ಣು ತಕ್ಷಣವೇ ತೆಗೆಯುವಂತೆ, ಸೈಪೋನಿಂಗ್‌ ದುರಸ್ತಿ ಮಾಡುವಂತೆ ತಿಳಿಸಿ, ಹೆಚ್ಚುವರಿಯಾಗಿ ಜೆಸಿಬಿ ತೆಗೆದುಕೊಂಡು ತ್ವರಿತವಾಗಿ ದುರಸ್ತಿ ಕಾಮಗಾರಿ ಮಾಡುವಂತೆ ಮಹಾನಗರ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್‌ ತಿಪ್ಪೇರುದ್ರಪ್ಪ ಮತ್ತು ಪಾಲಿಕೆ ಹಾಗೂ ಹೇಮಾವತಿ ಇಲಾಖೆಯ ಕಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

● ಚಿ. ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.