ಪ್ರವಾಹ ಸಂತ್ರಸ್ತರಿಗಾಗಿ ಈಶಾನ್ಯ ಸಾರಿಗೆ ನಷ್ಟದಲ್ಲೂ ಉಚಿತ ಸೇವೆ

ರಾಯಚೂರು, ವಿಜಯಪುರ ಸಂತ್ರಸ್ತರಿಗಾಗಿ 40 ಬಸ್‌ •358 ಬಸ್‌ಗಳ ಸಂಚಾರ ರದ್ದು •ಮಹಾರಾಷ್ಟ್ರದಲ್ಲಿ ಸಿಲುಕಿದ 10 ಬಸ್‌

Team Udayavani, Aug 11, 2019, 10:03 AM IST

11-Agust-2

ಕಲಬುರಗಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಕ್ಕರಾಯನಕೊಪ್ಪ ಗ್ರಾಮದಲ್ಲಿ ಜನತೆ ಸ್ಥಳಾಂತರಕ್ಕೆ ನಿಯೋಜಿಸಲಾಗಿರುವ ಈಶಾನ್ಯ ಸಾರಿಗೆ ಸಂಸ್ಥೆ ಬಸ್‌.

ವಿಶೇಷ ವರದಿ
ಕಲಬುರಗಿ:
ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮತ್ತಷ್ಟು ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, 358 ಬಸ್‌ಗಳ ಸಂಚಾರ ರದ್ದುಗೊಳಿಸಲಾಗಿದೆ. ಇದರಿಂದ ಪ್ರತಿ ದಿನ 34 ಲಕ್ಷ ರೂ.ಗೂ ಅಧಿಕ ನಷ್ಟವನ್ನು ಸಂಸ್ಥೆ ಅನುಭವಿಸುತ್ತಿದೆ. ಆದರೆ, ಇದರ ನಡುವೆಯೂ ಪ್ರವಾಹ ಸಂತ್ರಸ್ತರಿಗೆ ಉಚಿತ ಬಸ್‌ ಸೇವೆಯನ್ನು ಒದಗಿಸಲಾಗುತ್ತಿದೆ.

ಕಳೆದ ಒಂದು ವಾರದಿಂದ ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಮಹಾರಾಷ್ಟ್ರದಿಂದ ಅಧಿಕ ಪ್ರಮಾಣದ ನೀರು ಹರಿಬಿಡುತ್ತಿರುವುದರಿಂದ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಹೈದ್ರಾಬಾದ ಕರ್ನಾಟಕದ ರಾಯಚೂರು, ಯಾದಗಿರಿ ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿ ತತ್ತರಿಸಿವೆ. ಹಲವು ಭಾಗಗಳಲ್ಲಿ ಪ್ರಮುಖ ರಸ್ತೆ, ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್‌ ಆಗಿದೆ.

ಈಶಾನ್ಯ ಸಾರಿಗೆ ಸಂಸ್ಥೆ ವ್ಯಾಪ್ತಿಯ ಏಳು ಜಿಲ್ಲೆಗಳಿಂದ ಬೆಳಗಾವಿ ಮತ್ತು ಮಹಾರಾಷ್ಟ್ರದ ಕೊಲಾØಪುರ, ಮೀರಜ್‌, ಸಾಂಗ್ಲಿ, ಪುಣೆ, ರತ್ನಗಿರಿ, ಇಚಲಕರಂಜಿ ಪಟ್ಟಣಗಳಿಗೆ ತೆರಳುತ್ತಿದ್ದ ಬಸ್‌ಗಳ ಸಂಚಾರ ರದ್ದಾಗಿದೆ.

ಯಾವ ಮಾರ್ಗ ರದ್ದು?: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಮಹಾರಾಷ್ಟ್ರದಲ್ಲಿ ಕೊಯ್ನಾ ಜಲಾಶಯದಿಂದ ರಾಜ್ಯದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ಆದ್ದರಿಂದ ರಾಜ್ಯ ಮತ್ತು ಅಂತಾರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ.

ಕಳೆದ ರವಿವಾರದಿಂದ ನಿಪ್ಪಾಣಿ-ಕೊಲಾØಪುರ ರಾಷ್ಟ್ರೀಯ ಹೆದ್ದಾರಿ-4, ಬೆಳಗಾವಿ-ಪಣಜಿ, ಕಾಗವಾಡ್‌-ಮೀರಜ್‌ ರಸ್ತೆ ಸಂಪರ್ಕ ಬಂದ್‌ ಆಗಿದೆ. ವಿಜಯಪುರ-ಜಮಖಂಡಿ ಸಂಪರ್ಕ ಕಲ್ಪಿಸುವ ಚಿಕ್ಕಪಡಸಾವಳಗಿ ಸೇತುವೆ, ವಿಜಯಪುರ-ಹುಬ್ಬಳ್ಳಿ ಮಾರ್ಗದ ಕೊಣ್ಣುರು ಸೇತುವೆ, ಶಹಾಪುರ-ದೇವದುರ್ಗ ಮಾರ್ಗದ ಕೊಳ್ಳೂರು ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ. ಜತೆಗೆ ಕರಾವಳಿ ಭಾಗದಲ್ಲೂ ಮಳೆ ಸುರಿಯುತ್ತಿರುವುರಿಂದ ಧರ್ಮಸ್ಥಳಕ್ಕೆ ತೆರಳುವ ಬಸ್‌ಗಳನ್ನು ರದ್ದು ಮಾಡಲಾಗಿದೆ.

ವಿಜಯಪುರದಲ್ಲಿ 150 ಬಸ್‌ ಸ್ಥಗಿತ: ಈಶಾನ್ಯ ಸಾರಿಗೆಯ ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್‌ ಮತ್ತು ವಿಜಯಪುರದಿಂದ ಕಾರ್ಯ ನಿರ್ವಹಿಸುತ್ತಿದ್ದ ಒಟ್ಟು 358 ಬಸ್‌ಗಳ ಸಂಚಾರ ರದ್ದುಗೊಂಡಿದೆ. ಇದರಲ್ಲಿ ಹೆಚ್ಚು ಬಸ್‌ಗಳು ವಿಜಯಪುರ ಘಟಕಕ್ಕೆ ಸೇರಿದ್ದು, ಒಟ್ಟಾರೆ 150 ಬಸ್‌ಗಳನ್ನು ರದ್ದು ಮಾಡಲಾಗಿದೆ.

ಯಾದಗಿರಿ ಘಟಕದ 60, ಕೊಪ್ಪಳ 38, ಹೊಸಪೇಟೆ 32, ರಾಯಚೂರು 30, ಬಳ್ಳಾರಿ 18, ಕಲಬುರಗಿ ಘಟಕ-1ರ 16, ಕಲಬುರಗಿ ಘಟಕ-2ರ 14 ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿತ್ಯ ಈ ಎಲ್ಲ ಬಸ್‌ಗಳು 1,08,888 ಕಿ.ಮೀ. ದೂರವನ್ನು ಸಂಚರಿಸುತ್ತಿದ್ದವು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಂತಿರುವ 10 ಬಸ್‌: ಪ್ರವಾಹದಿಂದ ಕಾರ್ಯಾಚರಣೆ ನಡೆಸಲಾಗದೆ ಒಟ್ಟು 12 ಬಸ್‌ಗಳನ್ನು ಬೇರೆ-ಬೇರೆ ಬಸ್‌ ನಿಲ್ದಾಣಗಳಲ್ಲೇ ನಿಲ್ಲಿಸಲಾಗಿದೆ. ಮಹಾರಾಷ್ಟ್ರಕ್ಕೆ ತೆರಳಿದ್ದ ಕೊಪ್ಪಳದ 4, ಹೊಸಪೇಟೆ-1, ರಾಯಚೂರು-1, ಕಲಬುರಗಿ -2, ವಿಜಯಪುರ ಘಟಕದ 2 ಬಸ್‌ಗಳನ್ನು ಕೊಲ್ಹಾಪುರ, ರತ್ನಗಿರಿ ಬಸ್‌ ನಿಲ್ದಾಣಗಳಲ್ಲಿ ನಿಲ್ಲಿಸಲಾಗಿದೆ. ಗದಗ ಜಿಲ್ಲೆಯ ಕೊಣ್ಣೂರು ಗ್ರಾಮ ಸಂಪೂರ್ಣ ಜಲಾವೃತಗೊಂಡಿರುವುರಿಂದ ವಿಜಯಪುರ ಘಟಕದ ಎರಡು ಬಸ್‌ಗಳನ್ನು ಅಲ್ಲಿನ ಬಸ್‌ ನಿಲ್ದಾಣದಲ್ಲೇ ಸ್ಥಗಿತಗೊಳಿಸಲಾಗಿದೆ. ಪ್ರವಾಹದ ನೀರು ಕಡಿಮೆಯಾದ ತಕ್ಷಣ ಮತ್ತೆ ಎಲ್ಲ ಮಾರ್ಗಗಳಲ್ಲಿ ಬಸ್‌ ಕಾರ್ಯಾಚರಣೆ ಯಥಾ ಸ್ಥಿತಿ ಆರಂಭಗೊಳ್ಳಲಿದೆ ಎನ್ನುತ್ತಾರೆ ಅಧಿಕಾರಿಗಳು.

40 ಬಸ್‌ ಉಚಿತ ಸೇವೆ
ಪ್ರವಾಹ ಪೀಡಿತ ಗ್ರಾಮಗಳಲ್ಲಿ ಜನರ ಸ್ಥಳಾಂತರ ಮತ್ತು ಸಾಮಗ್ರಿಗಳನ್ನು ಸಾಗಿಸಲು ಈಶಾನ್ಯ ಸಾರಿಗೆಯಿಂದ ಉಚಿತವಾಗಿ 40 ಬಸ್‌ಗಳ ಸೇವೆ ಒದಗಿಸಲಾಗುತ್ತಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕುರಕೆಹಳ್ಳಿಗೆ ಏಳು ಮತ್ತು ರಾಯಚೂರು ತಾಲೂಕಿನ ಗುರ್ಜಾಪುರಕ್ಕೆ ಎರಡು ಬಸ್‌ ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಾಳಕ್ಕೆ ಎರಡು, ದೇವೂರ ಗ್ರಾಮಕ್ಕೆ ಒಂದು ಬಸ್‌ ಸೇರಿ ಒಟ್ಟು 40 ಬಸ್‌ಗಳ ಮೂಲಕ ಸಂತ್ರಸ್ತರ ಸ್ಥಳಾಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪ್ರವಾಹ ಹಿನ್ನೆಲೆಯಲ್ಲಿ ಆ.4ರಿಂದ ಈಶಾನ್ಯ ಸಾರಿಗೆ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ 358 ಬಸ್‌ಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಇದರಿಂದ ಸಂಸ್ಥೆಗೆ ನಿತ್ಯ 34 ಲಕ್ಷ ರೂ. ನಷ್ಟ ಉಂಟಾಗುತ್ತಿದೆ. ಆದರೂ, ಜನತೆ ಅನುಕೂಲಕ್ಕಾಗಿ ಸಂಸ್ಥೆಯು ಸೇವೆ ಒದಗಿಸಲು ಸಿದ್ಧವಿದೆ. ಸಂಕಷ್ಟ ಸಮಯದಲ್ಲಿ ಮಾನವೀಯತೆ ಮುಖ್ಯವೇ ಹೊರತು ಲಾಭ-ನಷ್ಟದ ಲೆಕ್ಕಾಚಾರ ಹಾಕಬಾರದು. ಇದೇ ದೃಷ್ಟಿಯಿಂದ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ.
ಜಹೀರಾ ನಸೀಮ್‌,
 ಎಂಡಿ, ಎನ್‌ಇಕೆಆರ್‌ಟಿಸಿ, ಕಲಬುರಗಿ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.