ಕಾಸರಗೋಡು ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌


Team Udayavani, Aug 14, 2019, 6:30 AM IST

Udayavani Kannada Newspaper

ಕಾಸರಗೋಡು: ದುರ್ಬಲ ಗೊಂಡಿದ್ದ ಮಳೆ ಮತ್ತೆ ಧಾರಾಕಾರವಾಗಿ ಸುರಿಯತೊಡಗಿದೆ. ಕಾಸರಗೋಡು, ಕಣ್ಣೂರು ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಸರಗೋಡು, ಪತ್ತನಂತಿಟ್ಟ, ತೃಶೂರು, ಪಾಲ್ಗಾಟ್, ಕಲ್ಲಿಕೋಟೆ ಜಿಲ್ಲೆಗಳಲ್ಲಿ ಮಂಗಳವಾರ ಕೇಂದ್ರ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಅರಬೀ ಸಮುದ್ರದ ಮಧ್ಯ ಭಾಗದಲ್ಲಿ ಮತ್ತು ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ ಬಂಗಾಲ ಕೊಲ್ಲಿಯ ಮಧ್ಯಭಾಗದಲ್ಲಿ ಸುಂಟರಗಾಳಿ ರೂಪುಗೊಂಡಿದ್ದು, ಅದು ವಾಯು ಭಾರ ಕುಸಿತಕ್ಕೆ ದಾರಿ ಮಾಡಿಕೊಡಲಿದ್ದು ಉತ್ತರ ಕೇರಳದಲ್ಲಿ ಭಾರೀ ಮಳೆಗೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಾಸರಗೋಡು, ಪತ್ತನಂತಿಟ್ಟ, ತೃಶೂರು, ಪಾಲ್ಗಾಟ್, ಕಲ್ಲಿಕೋಟೆ, ಕಣ್ಣೂರು ಜಿಲ್ಲೆಗಳಲ್ಲಿ ಆ.14, 15 ಮತ್ತು 16ರಂದು ಆರೆಂಜ್‌ ಅಲರ್ಟ್‌ ಘೋಷಿಸಿದೆ. ಈ ವರ್ಷ ಸಕಾಲದಲ್ಲಿ ಮಳೆ ಸುರಿಯದಿದ್ದರೂ ಬಳಿಕ ಧಾರಾಕಾರವಾಗಿ ಸುರಿಯತೊಡಗಿದೆ. ಜುಲೈ 31ರ ತನಕದ ಲೆಕ್ಕಾಚಾರ ಪ್ರಕಾರ ರಾಜ್ಯದಲ್ಲಿ ಮಳೆ ಪ್ರಮಾಣದಲ್ಲಿ ಶೇ.31 ರಷ್ಟು ಕುಸಿತು ಉಂಟಾಗಿತ್ತು. ಆ ಬಳಿಕ ರಾಜ್ಯದಲ್ಲಿ ಸುರಿಯಲಾರಂಭಿಸಿದ ಮಳೆ ಕುಸಿತ ಪ್ರಮಾಣ ಈಗ ಶೇ. 3ಕ್ಕೆ ಇಳಿದಿದೆ ಎಂದು ತಿರುವನಂತಪುರದಲ್ಲಿರುವ ಕೇಂದ್ರ ಹವಾಮಾನ ವಿಜ್ಞಾನ ಕೇಂದ್ರ(ಐಎಂಡಿ) ಲೆಕ್ಕಾಚಾರ ನೀಡಿವೆ.

ಒಟ್ಟು 92 ಮಂದಿ ಸಾವು

ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಗಾಳಿ, ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ರಾಜ್ಯದಲ್ಲಿ ಬಲಿ ಯಾದವರ ಸಂಖ್ಯೆ 92ಕ್ಕೇರಿತು.

ಮಲಪ್ಪುರಂ ಜಿಲ್ಲೆಯ ಕವಳಪ್ಪಾರ ಮತ್ತು ವಯನಾಡು ಜಿಲ್ಲೆಯ ಪೂತುಮಲದಲ್ಲಿ ಭೂಕುಸಿತ ಪ್ರದೇಶದಲ್ಲಿ ಮಣ್ಣಿನಡಿ ಸಿಲುಕಿಕೊಂಡಿರುವವರ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿರುವಂತೆ ಕವಳಪ್ಪಾರದಲ್ಲಿ ಮಣ್ಣಿನಡಿಯಲ್ಲಿ ಸಿಲುಕಿಕೊಂಡ ಆರು ಮೃತ ದೇಹಗಳನ್ನು ಪತ್ತೆಹಚ್ಚಲಾಯಿತು. ಮಣ್ಣಿನಡಿಯಲ್ಲಿ ಇನ್ನೂ 44 ಮಂದಿ ಸಿಲುಕಿಕೊಂಡಿರುವುದಾಗಿ ತಿಳಿಯಲಾಗಿದೆ. ಮಳೆ, ಭೂಕುಸಿತ ಮತ್ತು ಪ್ರವಾಹದಿಂದ ನಾಪತ್ತೆಯಾದ 62 ಮಂದಿಯನ್ನು ಪತ್ತೆಹಚ್ಚುವ ಶೋಧ ನಡೆಯುತ್ತಿದೆ.

ವಿದ್ಯಾರ್ಥಿಗಳಿಂದ ನೆರವು

ಈ ಬಾರಿಯ ಬಿರುಸಿನ ಗಾಳಿಮಳೆಯ ಹೊಡೆತಕ್ಕೆ ಕಂಗೆಟ್ಟು ಹೋದ ಜಿಲ್ಲೆಯ ಜನತೆಗೆ ಸಾಂತ್ವನ ಸ್ಪರ್ಶ ನೀಡಲು ಜಿಲ್ಲಾಡಳಿತೆ ನಡೆಸುತ್ತಿರುವ ಯತ್ನಕ್ಕೆ ಸ್ಪಂದಿಸುವಲ್ಲಿ ವಿದ್ಯಾರ್ಥಿಗಳೂ ಹಿಂದುಳಿದಿಲ್ಲ.

ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಬೇರೆ ಬೇರೆ ರೂಪದಲ್ಲಿ ಸಾರ್ವಜನಿಕ ವಲಯವನ್ನು ಸಹಾಯಕ್ಕಾಗಿ ಸಂಪರ್ಕಿಸುತ್ತಿದೆ. ಇದರ ಅಂಗವಾಗಿ ಜಿಲ್ಲಾಧಿಕಾರಿ ಅವರು ನಡೆಸಿದ ವೀಡಿಯೋ ಸಂದೇಶದಿಂದ ಪ್ರಭಾವಿತಗೊಂಡ ಕಾಲೇಜು ವಿದ್ಯಾರ್ಥಿಗಳ ಬಳಗವೊಂದು ಸಹಾಯದ ಸಾಮಗ್ರಿಗಳ ಸಹಿತ ಹೊಸದುರ್ಗ ತಾಲೂಕು ಕಚೇರಿಯಲ್ಲಿ ಚಟುವಟಿಕೆ ನಡೆಸುತ್ತಿರುವ ಕಲೆಕ್ಷನ್‌ ಸೆಂಟರ್‌ಗೆ ಧಾವಿಸಿ ಬಂದಿದೆ. ಕಾಸರಗೋಡು ಸರಕಾರಿ ಕಾಲೇಜಿನ ಎನ್‌.ಎಸ್‌.ಎಸ್‌. ಸ್ವಯಂ ಸೇವಕರು ಶುಚಿಕರ ಸಾಮಗ್ರಿಗಳು, ಉಡುಪುಗಳು, ಪಾದರಕ್ಷೆಗಳು, ಆಹಾರ ಸಾಮಗ್ರಿಗಳು, ನ್ಯಾಪ್ಕಿನ್‌ಗಳು ಇತ್ಯಾದಿಗಳನ್ನು ಕೊಡುಗೆಯಾಗಿ ನೀಡಿದರು. ಎನ್‌.ಎಸ್‌.ಎಸ್‌. ಸ್ವಯಂಸೇವಕರಾದ ಎಂ. ಅನೂಪ್‌, ಎಂ. ಹರಿಕೃಷ್ಣನ್‌, ಸಿ.ಎ. ಆನ್ಸಿ, ಮನೀಷಾ ಕೆ. ಮನು, ಕೆ. ಮಂಜಿಮಾ, ಕೆ. ಶಿಲ್ಪಾ, ಸುಜಿತ್‌ ಮೊದಲಾದವರು ನೇತೃತ್ವ ವಹಿಸಿದ್ದರು.

ಸಹಾಯ ಹಸ್ತದೊಂದಿಗೆ ವಾಹನ ಇಲಾಖೆ ಸಿಬಂದಿ

ಮಳೆಗಾಲದ ಬಿರುಸಿನ ಸಂಕಷ್ಟಕ್ಕೊಳ ಗಾದವರಿಗೆ ಸಹಾಯ ಹಸ್ತದೊಂದಿಗೆ ಮೋಟಾರು ವಾಹನ ಇಲಾಖೆ ಸಿಬ್ಬಂದಿ ರಂಗಕ್ಕಿಳಿದಿದ್ದಾರೆ. ಹೊಸದುರ್ಗ ತಾಲೂಕು ಕಚೇರಿಯಲ್ಲಿ ಚಟುವಟಿಕೆ ನಡೆಸುತ್ತಿರುವ ಕಲೆಕ್ಷನ್‌ ಸೆಂಟರ್‌ಗೆ ನಿತ್ಯೋಪಯೋಗಿ ಅನೇಕ ಸಾಮಗ್ರಿಗಳನ್ನು ಕೊಡುಗೆಯಾಗಿ ನಿಡಿದ್ದಾರೆ. ಆರ್‌.ಟಿ.ಒ. ಎಸ್‌. ಮನೋಜ್‌, ಎನ್‌ಫೋರ್ಸ್‌ಮೆಂಟ್ ಆರ್‌.ಟಿ.ಒ. ಮೋಹನ್‌ ದಾಸ್‌, ಮೋಟಾರು ವಾಹನ ಇನ್ಸ್‌ ಪೆಕ್ಟರರಾದ ಟಿ. ವೆಂಕಟನ್‌, ಎಂ. ವಿಜಯನ್‌, ರೆಜಿ ಕುರಿಯಾಕೋಸ್‌, ದಿನೇಶ್‌ ಕುಮಾರ್‌, ಗಣೇಶನ್‌, ಸೀನಿ, ವರಿಷ್ಠಾಕಾರಿ ಕೆ. ಶಶಿ ಅವರ ನೇತೃತ್ವದಲ್ಲಿ ಸಾಮಗ್ರಿ ಹಸ್ತಾಂತರಿಸಲಾಯಿತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.