ಹೆಬ್ರಿ: ಸ್ವಾತಂತ್ರ್ಯದಿನಾಚರಣೆ, ಸಮ್ಮಾನ


Team Udayavani, Aug 16, 2019, 5:40 AM IST

1508HBRE6

ಹೆಬ್ರಿ: ಕಳೆದ 40 ವರ್ಷಗಳ ನಿರಂತರ ಹೋರಾಟದ ಫಲವಾಗಿ ಹೆಬ್ರಿ ತಾಲೂಕು ರೂಪುಗೊಂಡಿದೆ. ಇದಕ್ಕೆ ಹಲವರು ಶ್ರಮಿಸಿದ್ದಾರೆ. ಈಗ ಕಂದಾಯ ಕೆಲಸವನ್ನು ಮಾತ್ರ ನಿರ್ವಹಿಸುತ್ತಿದೆ. ಪೂರ್ಣ ಪ್ರಮಾಣದ ತಾಲೂಕಾಗಿ ಜನರಿಗೆ ಉತ್ತಮ ಸೇವೆ ನೀಡಬೇಕು ಎನ್ನುವುದು ನಮ್ಮ ಧ್ಯೇಯ. ಈ ನಿಟ್ಟಿನಲ್ಲಿ ದಾನಿಗಳ ನೆರವಿನಿಂದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಹೆಬ್ರಿ ತಾಲೂಕಿನ ಮೊದಲ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಉತ್ತಮವಾಗಿ ನೆರವೇರಿದೆ ಎಂದು ಹೆಬ್ರಿ ತಾಲೂಕು ತಹಶೀಲ್ದಾರ್‌ ಕೆ. ಮಹೇಶ್ಚಂದ್ರ ಹೇಳಿದರು.

ಹೆಬ್ರಿ ತಾಲೂಕು ಆಡಳಿತ ನೇತೃತ್ವ ದೊಂದಿಗೆ ಸ್ವಾತಂತ್ರ್ಯೋತ್ಸವ ಸಮಿತಿ ಆಶ್ರಯ ದಲ್ಲಿ ಆ. 15ರಂದು ಹೆಬ್ರಿ ಸರಕಾರಿ ಪ.ಪೂ. ಕಾಲೇಜು ಮೈದಾನದಲ್ಲಿ ನಡೆದ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಬಳಿಕ ನಡೆದ ಸಾಂಸ್ಕೃತಿಕ ಕಾರ್ಯ ಕ್ರಮವನ್ನು ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್‌ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ, ಹೆಬ್ರಿ ಗ್ರಾ.ಪಂ. ಅಧ್ಯಕ್ಷ ಎಚ್‌.ಕೆ. ಸುಧಾಕರ್‌ ಮಾತನಾಡಿ, ಕೇವಲ ಹೆಬ್ರಿ ತಾಲೂಕು ರಚನೆಯಾದರೆ ಸಾಲದು. ಜನರು ಇನ್ನೂ ದೂರದ ಕಾರ್ಕಳ ಕುಂದಾಪುರಗಳಿಗೆ ಅಲೆದಾಡುತ್ತಿದ್ದಾರೆ. ಈ ಸಮಸ್ಯೆಗೆ ಪೂರ್ಣ ಪ್ರಮಾಣದ ಮುಕ್ತಿ ಸಿಗಬೇಕಾದರೆ ಎಲ್ಲ ಇಲಾಖೆಗಳು ಹೆಬ್ರಿಗೆ ಬಂದು ಕಾರ್ಯನಿರ್ವಹಿಸಬೇಕು ಎಂದರು.

ಧ್ವಜಾರೋಹಣ ಮೊದಲು ವಿವಿಧ ಶಾಲಾ ವಿದ್ಯಾರ್ಥಿಗಳು, ಸಂಘ ಸಂಸ್ಥೆ ಹಾಗೂ ಇಲಾಖೆಗಳಿಂದ ಪಥಸಂಚಲನ ನಡೆಯಿತು.ಪಥಸಂಚಲನದಲ್ಲಿ ಜೆಎನ್‌ವಿ ಚಾರ ಪ್ರಥಮ, ಅಮೃತಭಾರತಿ ದ್ವಿತೀಯ, ಹೆಬ್ರಿ ಸರಕಾರಿ ಪ್ರೌಢಶಾಲೆ ತೃತೀಯ ಸ್ಥಾನ ಪಡೆದವು.

ಈ ಸಂದರ್ಭ ತಾ.ಪಂ. ಸದಸ್ಯರಾದ ಚಂದ್ರಶೇಖರ್‌ ಶೆಟ್ಟಿ, ಅಮೃತ್‌ಕುಮಾರ್‌ ಶೆಟ್ಟಿ, ಹೆಬ್ರಿ ತಾ. ಹೋರಾಟ ಸಮಿತಿ ಅಧ್ಯಕ್ಷ ಭಾಸ್ಕರ್‌ ಜೋಯಿಸ್‌, ಡಿವೈಎಸ್‌ಪಿ ಗಣೇಶ್‌ ಹೆಗ್ಡೆ, ಹೆಬ್ರಿ ಪೊಲೀಸ್‌ ಠಾಣಾಧಿಕಾರಿ ಮಹಾಬಲ ಶೆಟ್ಟಿ, ಪೊಲೀಸ್‌ ಅಧಿಕಾರಿ ಬಿ.ಆರ್‌. ಕಡಗೇರಿ, ಎಂ.ಆರ್‌. ಮಂಜುನಾಥ, ಪಳನಿವೇಲು, ಸುಬ್ರಹ್ಮಣ್ಯ ಆಚಾರ್ಯ, ವಾಣಿಶ್ರೀ ಹೆಗ್ಡೆ, ಸುಧಾ ವೈ.ಎಂ., ಬಿ.ಎಸ್‌. ವಗ್ಗೆ, ಪ್ರಕಾಶ್‌ ಪೂಜಾರಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಸೀತಾನದಿ ವಿಟuಲ ಶೆಟ್ಟಿ ಸ್ವಾಗತಿಸಿ, ಹೆರ್ಗ ವಿಟuಲ ಶೆಟ್ಟಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಿತ್ಯಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹೆಬ್ರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ದಿವಾಕರ್‌ ಎಂ. ಮರಕಾಲ ವಂದಿಸಿದರು.

ಸಮ್ಮಾನ
ನಿವೃತ್ತ ಸೈನಿಕರಾದ ಯಶವಂತ ಕಾಮತ್‌, ಭಾಸ್ಕರ ಪೂಜಾರಿ, ಶ್ರೀಧರ್‌ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ ಹಾಗೂ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.