ಹೋರಾಟಗಾರರ ಸ್ಮರಿಸೋಣ

370ನೇ ವಿಧಿ ರದ್ದು ಐತಿಹಾಸಿಕ ನಿರ್ಧಾರ•ಸ್ವಾತಂತ್ರ್ಯದಿಂದ ನೆಮ್ಮದಿ

Team Udayavani, Aug 16, 2019, 12:51 PM IST

16-Agust-21

ಶಹಾಬಾದ: ತಾಲೂಕಾಡಳಿತ ವತಿಯಿಂದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಮತ್ತಿಮಡು ಮಾತನಾಡಿದರು.

ಶಹಾಬಾದ: ಶತಮಾನಗಳಿಂದ‌ ಬ್ರಿಟಿಷರ ದಾಸ್ಯದಿಂದ ಬಳಲಿದ ಭಾರತಕ್ಕೆ ತ್ಯಾಗ, ಬಲಿದಾನ ನೀಡುವುದರ ಮೂಲಕ ನಮಗೆ ಸ್ವಾತಂತ್ರ್ಯ ಕಲ್ಪಿಸಿದ ಮಹಾನ್‌ ಹೋರಾಟಗಾರರನ್ನು ಸ್ಮರಿಸುವ ವಿಶೇಷ ದಿನವೇ ಸ್ವಾತಂತ್ರ್ಯ ದಿನವಾಗಿದೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಗುರುವಾರ ತಾಲೂಕಾಡಳಿತ ವತಿಯಿಂದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ದೇಶವನ್ನು ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸಲು ಗಾಂಧಿಧೀಜಿ, ಭಗತ್‌ಸಿಂಗ್‌, ಲಾಲಬಹಾದ್ದೂರ ಶಾಸ್ತ್ರೀ, ಚಂದ್ರಶೇಖರ ಆಜಾದ್‌, ಸುಭಾಶ್ಚಂದ್ರಭೋಸ್‌ ಅವರಂತ ಅಸಂಖ್ಯ ಮಹನೀಯರು ತಮ್ಮ ವೈಯಕ್ತಿಕ ಬದುಕಿನ ಸಂತೋಷಗಳನ್ನು ತ್ಯಾಗ ಮಾಡಿದರು. ಬ್ರಿಟಿಷರ ವಿರುದ್ಧ ಉಗ್ರ ಹೋರಾಟದ ಮೂಲಕ ಇತಿಹಾಸ ಬರೆದರು. ನಮಗೆ ದೇಣಿಗೆಯಾಗಿ ಕೊಟ್ಟ ಸ್ವಾತಂತ್ರ್ಯವನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ದೇಶವನ್ನು ಅಭಿವೃದ್ಧಿಪಥದತ್ತ ಸಾಗಿಸಬೇಕಾಗಿದೆ ಎಂದರು.

ತಹಶೀಲ್ದಾರ್‌ ಸುರೇಶ ವರ್ಮಾ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ದೇಶದ ಅತಿ ದೊಡ್ಡ ಹಬ್ಬ. ಮಹಾತ್ಮ ಗಾಂಧಿಧೀಜಿ ನೇತೃತ್ವದಲ್ಲಿ ಗಳಿಸಿದ ಸ್ವಾತಂತ್ರ್ಯ ದೇಶದ ಜನ ಸಮುದಾಯ ಅಭಿವೃದ್ಧಿ, ಭಾವೈಕ್ಯತೆ ಮತ್ತು ನೆಮ್ಮದಿ ಬದುಕಿಗೆ ಸಹಕಾರಿಯಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ 370ನೇ ವಿಧಿ ರದ್ದುಪಡಿಸುವ ಮೂಲಕ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿರುವುದು ಶ್ಲಾಘನೀಯವಾಗಿದೆ ಎಂದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪಿ.ಎಂ. ಸಜ್ಜನ್‌, ಪೌರಾಯುಕ್ತ ವೆಂಕಟೇಶ, ಡಿವೈಎಸ್‌ಪಿ ಕೆ. ಬಸವರಾಜ, ಪಿಐ ಕಪಿಲ್ದೇವ, ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ, ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಮೋದ, ಬಿಜೆಪಿ ಅಧ್ಯಕ್ಷ ಸುಭಾಷ ಜಾಪೂರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ರಶೀದ್‌, ಮುಖಂಡರಾದ ನಾಗರಾಜ ಮೇಲಗಿರಿ, ಅಣವೀರ ಇಂಗಿನಶೆಟ್ಟಿ, ಶೇರ ಅಲಿ, ದೇವೆಂದ್ರ ಕಾರೊಳ್ಳಿ, ಸುರೇಶ ಚವ್ಹಾಣ ಇದ್ದರು.

ಟಾಪ್ ನ್ಯೂಸ್

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-wqew-ewqe

Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್‌!: 7 ಮಂದಿ ಸೆರೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.