ಬೇಬಿ ಬೆಟ್ಟದಲ್ಲಿ ಅಕ್ರಮ ಕ್ರಷರ್‌ಗಳಿಗೆ ಬೀಗ

ಭಾರೀ ಶಬ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ • ಕೆಆರ್‌ಎಸ್‌ ಅಣೆಕಟ್ಟೆಗೆ ತೊಂದರೆ ಹಿನ್ನೆಲೆ

Team Udayavani, Aug 18, 2019, 4:12 PM IST

mandya-tdy-1

ಪಾಂಡವಪುರ: ತಾಲೂಕಿನ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗಳ ಮೇಲೆ ತಹಶೀ ಲ್ದಾರ್‌ ಪ್ರಮೋದ್‌ ಎಲ್. ಪಾಟೀಲ್ ಅವರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಬೀಗ ಮುದ್ರೆ ಜಡಿದಿದೆ.

ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮುತ್ತಪ್ಪ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಉಪ ನಿರ್ದೇಶಕಿ ಸವಿತಾ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್‌ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ದಿಢೀರ್‌ ದಾಳಿ ನಡೆಸಿ ಕ್ರಷರ್‌ಗಳಿಗೆ ಬೀಗ ಜಡಿದು ಸ್ಥಗಿತಗೊಳಿಸಿದರು.

35ಕ್ಕೂ ಹೆಚ್ಚು ಕ್ರಷರ್‌ಗೆ ಬೀಗ: ಶಾಸಕ ಸಿ.ಎಸ್‌.ಪುಟ್ಟರಾಜು ಅವರ ಕುಟುಂಬಕ್ಕೆ ಸೇರಿದ ಎಸ್‌ಟಿಜಿ ಸ್ಟೋನ್‌ ಕ್ರಷರ್‌, ಬಾಲಾಜಿ ಸ್ಟೋನ್‌ ಕ್ರಷರ್‌, ರಾಮಾಂಜನೇಯ ಜಲ್ಲಿ ಕ್ರಷರ್‌, ಕೃಷ್ಣ ಸ್ಟೋನ್‌ ಕ್ರಷರ್‌, ಎಸ್‌ವಿಟಿ, ಜ್ಯೋತಿ ಸ್ಟೋನ್‌ ಕ್ರಷರ್‌ ಸೇರಿದಂತೆ 35ಕ್ಕೂ ಹೆಚ್ಚು ಸ್ಟೋನ್‌ ಕ್ರಷರ್‌ಗಳಿಗೆ ಬೀಗ ಮುದ್ರೆ ಜಡಿದಿದ್ದಾರೆ.

ಜಿಲ್ಲಾಧಿಕಾರಿ ಆದೇಶ:ಬೇಬಿಬೆಟ್ಟದ ಕಾವಲ್ನಲ್ಲಿ ನಡೆಸಲಾಗುತ್ತಿದ್ದ ಸ್ಟೋನ್‌ ಕ್ರಷರ್‌ಗಳನ್ನು ಟಾಸ್ಕ್ ಪೋರ್ಸ್‌ ಸಮಿತಿ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ವೆಂಕೆಟೇಶ್‌ ಆದೇಶಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಸ್ಟೋನ್‌ ಕ್ರಷರ್‌ಗಳಿಗೆ ಬೀಗ ಮುದ್ರೆ ಜಡಿದು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಹಶೀಲ್ದಾರ್‌ ಪ್ರಮೋದ್‌ ಎಲ್. ಪಾಟೀಲ್ ತಿಳಿಸಿದರು.

ಬೇಬಿಬೆಟ್ಟದಲ್ಲಿ 10ಕ್ಕೂ ಹೆಚ್ಚು ಕಲ್ಲುಕ್ವಾರಿಗಳು ನಡೆಯುತ್ತಿವೆ. ಸಿ ಮಾನ್ಯತೆ ಪಡೆದಿರುವ 18 ಸ್ಟೋನ್‌ ಕ್ರಷರ್‌ ಹಾಗೂ ಬಿ-1 ಮಾನ್ಯತೆ ಪಡೆದಿರುವ 17 ಸ್ಟೋನ್‌ ಕ್ರಷರ್‌ಗಳು ನಡೆಯುತ್ತಿವೆ. ಇವೆಲ್ಲವನ್ನೂ ಸ್ಥಗಿತಗೊಳಿಸಲಾಗುತ್ತಿದೆ. ಇದಲ್ಲದೆ ಅಕ್ರಮ ಗಣಿಗಾರಿಕೆ, ಸ್ಟೋನ್‌ ಕ್ರಷರ್‌ಗಳ ಮೇಲೂ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಅಧಿಕಾರಿ ಮುತ್ತಪ್ಪ ತಿಳಿಸಿದರು.

ಈ ವೇಳೆ ಉಪ ತಹಶೀಲ್ದಾರ್‌ ಸುಧಾಕರ್‌, ಕಂದಾಯ ಪರಿವೀಕ್ಷಕ ಗಣೇಶ್‌, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ವಿಜ್ಞಾನಿ ಡಾ.ನಟಶೇಖರ್‌, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಪಲ್ಲವಿ, ಎಎಸ್‌ಐ ಬಿ.ಜೆ. ರವಿ ಇದ್ದರು.

ಭಾರೀ ಶಬ್ದದ ಬಗ್ಗೆ ಅಧಿಕಾರಿಗಳೇ ಉತ್ತರಿಸಲಿ

ಕೆಆರ್‌ಎಸ್‌ ಮೈಸೂರು-ಮಂಡ್ಯ ಜಿಲ್ಲೆಯ ರೈತರ ಜೀವನಾಡಿ. ಇಂತಹ ಸ್ಥಳದಲ್ಲಿ ಕಾನೂನು ಬಾಹಿರ ಗಣಿಗಾರಿಕೆ ನ್ಪೋಟದಿಂದ ಈ ಶಬ್ಧ ಕೇಳಿಬಂದಿದೆಯೋ ಅಥವಾ ಅದರ ಹಿಂದೆ ಬೇರೆ ಏನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ನಡೆಸಿ ಸತ್ಯ ಹೊರತರಬೇಕಾದ ಜವಾಬ್ದಾರಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೇರಿದೆ ಎಂದು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದರು. ಮದ್ದೂರಿನಲ್ಲಿ ಮಾತನಾಡಿ, ಬೇಬಿ ಬೆಟ್ಟ ಮತ್ತು ಆಸುಪಾಸಿನ ಸ್ಥಳಗಳಲ್ಲಿ ಮೈಸೂರು ಮಹಾಸಂಸ್ಥಾನಕ್ಕೆ ಸೇರಿದ ಭೂಮಿಗಳ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ದಾಖಲೆ ನೀಡಿಲ್ಲ. ಈ ದಾಖಲೆ ಪಡೆಯುವ ಹಕ್ಕಿರುವುದು ತಮ್ಮ ತಾಯಿ ಪ್ರಮೋದಾ ದೇವಿಗೆ ಮಾತ್ರ. ಆನಂತರ ಅದು ನಮಗೆ ಸೇರುತ್ತದೆ. ಈ ಬಗ್ಗೆ ತಾನು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಸರ್ಕಾರಕ್ಕೆ ಬಿಟ್ಟದ್ದು ದಸರಾ ಹಬ್ಬದ ಆಚರಣೆಯನ್ನು ಅದ್ದೂರಿ ಅಥವಾ ಸರಳವಾಗಿ ಆಚರಿಸಬೇಕು ಎನ್ನುವುದು ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ ಎಂದಷ್ಟೇ ಸೂಕ್ಷ್ಮವಾಗಿ ತಿಳಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.