ಇನ್ನೂ ದುರಸ್ತಿಯಾಗದ ಮುರಿದು ಬಿದ್ದ ಮೇಲ್ಸೇತುವೆ

Team Udayavani, Aug 20, 2019, 6:10 AM IST

road

ಕಾಸರಗೋಡು: ನಗರದ ಕರಂದ ಕ್ಕಾಡ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಶೋಕ ನಗರಕ್ಕೆ ಹೋಗುವ ರಸ್ತೆ ಬಳಿ ಮೇಲ್ಸೇತುವೆ ಮುರಿದು ಬಿದ್ದು 23 ದಿನಗಳೇ ಕಳೆದರೂ ಇನ್ನೂ ದುರಸ್ತಿಯಾಗದಿರುವುದರಿಂದ ವಾಹನಗಳಿಗೆ ಮತ್ತು ಪಾದಚಾರಿಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಜುಲೈ 28 ರಂದು ಮುಂಜಾನೆ ಮಂಗಳೂರಿನತ್ತ ಸರಕು ಹೇರಿಕೊಂಡು ಸಾಗುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮೇಲ್ಸೇತುವೆಯ ಭದ್ರತಾ ಬೇಲಿಗೆ ಢಿಕ್ಕಿ ಹೊಡೆದು ಕೆಳಕ್ಕೆ ಉರುಳಿತ್ತು. ಈ ಸಂದರ್ಭದಲ್ಲಿ ಕೆಳಕ್ಕುರುಳಿದ ಲಾರಿ ಭದ್ರತಾ ಬೇಲಿಯನ್ನು ಕೆಡವಿತ್ತು. ಅದೃಷ್ಟ ವಶಾತ್‌ ಲಾರಿ ಸಿಬಂದಿ ಸಂಭಾವ್ಯ ದುರಂತದಿಂದ ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದರು. ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿರ್ಮಿ ಸಿದ್ದ ಕಬ್ಬಿಣದ ಸುರಕ್ಷಾ ಬೇಲಿಯನ್ನು ನುಚ್ಚುನೂರುಗೊಳಿಸಿ 23 ದಿನಗಳೇ ಕಳೆದು ಹೋದರೂ ಇನ್ನೂ ದುರಸ್ತಿಗೊಳಿಸಲು ಮುಹೂರ್ತ ಬಂದಿಲ್ಲ !

ಕಾಸರಗೋಡಿನಿಂದ ಮಂಗಳೂರಿಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರಂದಕ್ಕಾಡ್‌ ಅಶ್ವಿ‌ನಿ ನಗರದಲ್ಲಿ ಅಶೋಕ ನಗರಕ್ಕೆ ಸಾಗುವ ರಸ್ತೆಯ ಮೇಲೆ ನಿರ್ಮಿಸಿದ ಮೇಲ್ಸೇತುವೆಯ ಭದ್ರತಾ ಬೇಲಿ ಮುರಿದು ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಮತ್ತು ಪಾದಚಾರಿ ಗಳಿಗೆ ಅಪಾಯ ತಪ್ಪಿದ್ದಲ್ಲ. ವಾಹನಗಳು ನಿಯಂತ್ರಣ ತಪ್ಪಿದರೆ ಅಶೋಕನಗರಕ್ಕೆ ಸಾಗುವ, ಸುಮಾರು 20 ಅಡಿ ಆಳದಲ್ಲಿ ರುವ ಕಂದಕಕ್ಕೆ ಬೀಳುವುದು ಖಚಿತವಾ ಗಿದ್ದು, ಅಪಾಯವನ್ನು ಕೈಬೀಸಿ ಕರೆಯು ವಂತಿದೆ. ರಸ್ತೆಯ ಬದಿಯಲ್ಲಿ ಸಾಗಲು ಪಾದಚಾರಿಗಳಿಗೆ ಸ್ಥಳಾವಕಾಶದ ಕೊರತೆ ಯಿದ್ದು, ಪಾದಚಾರಿಗಳು ಜೀವವನ್ನು ಕೈಯಲ್ಲೇ ಹಿಡಿದುಕೊಂಡು ಹೋಗ ಬೇಕಾದ ಪರಿಸ್ಥಿತಿ ಇದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನಾ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನಗಳ ಸುರಕ್ಷೆಗೆ ಅಗತ್ಯವಾಗಿರುವ ಭದ್ರತಾ ಬೇಲಿ ಮುರಿದು ಬಿದ್ದರೂ ಇನ್ನೂ ದುರಸ್ತಿಗೆ ಕ್ರಮ ತೆಗೆದುಕೊಳ್ಳದಿರುವುದು ಅವಗಣನೆಗೆ ಸ್ಪಷ್ಟ ಉದಾಹರಣೆಯಾ ಗಿದೆ. ಕಾಸರಗೋಡಿನಿಂದ ಮಂಗಳೂರಿಗೆ ಸಾಗುವಾಗ ಹಲವೆಡೆ ಸೇತುವೆಗಳಿದ್ದು. ಈ ಪೈಕಿ ಕೆಲವು ಸೇತುವೆಗಳಲ್ಲಿನ ಭದ್ರತಾ ಬೇಲಿ ಮುರಿದು ಬಿದ್ದು ಕೆಲವು ತಿಂಗಳುಗಳೇ ಕಳೆದಿದ್ದರೂ ಅವುಗಳನ್ನು ದುರಸ್ತಿ ಮಾಡಿಲ್ಲ.

ಕಾಸರಗೋಡು ನಗರದ ಈ ಮೇಲ್ಸೇತುವೆ ಕೆಳಭಾಗದಿಂದ ಅಶೋಕ ನಗರಕ್ಕೆ ನೂರಾರು ಮಂದಿ ಸಾಗುತ್ತಿದ್ದು, ವಾಹನಗಳು ಮತ್ತೆ ಈ ಪ್ರದೇಶದಲ್ಲಿ ಅಪಘಾತಕ್ಕೆ ಕಾರಣವಾದರೆ ದೊಡ್ಡ ದುರಂತವಾಗಬಹುದು. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಂಬಂಧಪಟ್ಟವರು ಎಚ್ಚೆತ್ತು ಮೇಲ್ಸೇತುಗೆ ಭದ್ರತಾ ಬೇಲಿ ನಿರ್ಮಿಸಿ ಸಂಭವನೀಯ ದುರಂತವನ್ನು ತಪ್ಪಿಸಬೇಕಾಗಿದೆ. ಇದಕ್ಕೆ ಅಧಿಕಾರಿಗಳು ಇಚ್ಛಾಶಕ್ತಿಯನ್ನು ತೋರಬೇಕಾಗಿದೆ.

ಕೆಲವು ವರ್ಷಗಳ ಹಿಂದೆ ಇದೇ ಮೇಲ್ಸೇತುವೆಯಿಂದ ಬಸ್ಸೊಂದು ಇನ್ನೊಂದು ಮಗ್ಗುಲಿಗೆ ತಿರುಗಿ 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ಅಲ್ಲಿದ್ದ ಹಸುವೊಂದು ಬಸ್ಸಿನಡಿಗೆ ಸಿಲುಕಿ ಸಾವಿಗೀಡಾಗಿತ್ತು.

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.