ಜಿಪಂ ಅಧಿಕಾರಿಗಳ ವಿರುದ್ಧ ಸದಸ್ಯರ ಆಕ್ರೋಶ

Team Udayavani, Aug 20, 2019, 5:30 PM IST

rn-tdy-1

ರಾಮನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಜಿಪಂ ಅಧ್ಯಕ್ಷ ಎಂ.ಎನ್‌.ನಾಗರಾಜು ಮಾತನಾಡಿದರು.

ರಾಮನಗರ: ಗ್ರಾಪಂಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಬಳಕೆಯಾಗುತ್ತಿರುವ ಕೊಳವೆ ಬಾವಿ, ಬೀದಿ ದೀಪಗಳಿಗೆ ಪೂರೈಕೆಯಾಗುತ್ತಿವ ವಿದ್ಯುತ್‌ಗೆ ಪ್ರತ್ಯೇಕ ಬಿಲ್ ಕೊಡುವಂತೆ ಕಳೆದೆರಡು ಸಭೆಗಳಲ್ಲಿ ಸೂಚನೆ ಕೊಟ್ಟರೂ ಬೆಸ್ಕಾಂ ಅಧಿಕಾರಿಗಳು ಪಾಲಿಸು ತ್ತಿಲ್ಲ ಎಂದು ಜಿಪಂ ಅಧ್ಯಕ್ಷ ಎಂ.ಎನ್‌.ನಾಗರಾಜು ಬೇಸರ ವ್ಯಕ್ತಪಡಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆ ವಿಚಾರದಲ್ಲಿ ನಡೆದ ಚರ್ಚೆಯ ವೇಳೆ ಜಿಪಂ ಅಧಿಕಾರಿಗಳು ಪ್ರತ್ಯೇ ಕ ಬಿಲ್ಗಳನ್ನು ನೀಡುತ್ತಿಲ್ಲ ಎಂದು ಬೆಸ್ಕಾಂ ಇಲಾಖೆ ಅಧಿಕಾರಿಗಳ ಬಗ್ಗೆ ದೂರು ವ್ಯಕ್ತಪಡಿಸಿದರು. ಈ ವೇಳೆ ಅಧ್ಯಕ್ಷರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಅಧ್ಯಕ್ಷರೊಂದಿಗೆ ಧ್ವನಿಗೂಡಿಸಿದ ಜಿಪಂ ಉಪ ಕಾರ್ಯದರ್ಶಿ ಉಮೇಶ್‌, ಬೆಸ್ಕಾಂ ಅಧಿಕಾರಿಗಳ ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವುದು ಸರಿ ಯಲ್ಲ. ಲಕ್ಷಾಂತರ ರೂ. ಬಾಕಿ ಇದೆ ಎಂದು ಹೇಳ್ತೀ ರಾ. ಜಿಪಂ ಕೇಳಿದ ರೀತಿಯಲ್ಲಿ ಬಿಲ್ ಕೊಡ್ತಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿ ನಿಲಯಗಳಿಗೆ ಸರಬರಾಜು ಆಗುತ್ತಿರುವ ಆಹಾರ ಸಾಮಗ್ರಿಗಳು ಗುಣಮಟ್ಟದ್ದಾಗಿರಲಿ, ಈ ಬಗ್ಗೆ ರಾಜಿ ಬೇಡ ಎಂದು ಜಿಪಂ ಅಧ್ಯಕ್ಷರು ಅಧಿಕಾರಿಗಳಿಗೆ ತಿಳಿ ಹೇಳಿದರು.

ನಿರ್ಧಾರಗಳು ಕಡತಕ್ಕೆ ಮಾತ್ರವೇ?: ಜಿಪಂ ಉಪಾಧ್ಯಕ್ಷೆ ಜಿ.ಡಿ.ವೀಣಾಕುಮಾರಿ ಮಾತನಾಡಿ, ಜಿಪಂ ಸಭೆಗಳಲ್ಲಿ ಚರ್ಚೆಯಾಗುತ್ತಿರುವ ವಿಷಯಗಳು ಕಡತಗಳಲ್ಲಿಯೇ ಉಳಿದುಕೊಳ್ಳುತ್ತಿವೆಯೇ ಹೊರತು ಅನುಷ್ಠಾನವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪ ಡಿಸಿದರು. ಕಳೆದ ಎರಡು ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಚನ್ನಪಟ್ಟಣದ ಬೆಳಕೆರೆ ಹಾಗೂ ನೀಲಕಂಠ ನಹಳ್ಳಿ ಅಂಗನವಾಡಿ ಕೇಂದ್ರಗಳನ್ನು ದುರಸ್ಥಿಪಡಿಸಿ ಎಂದು ಮನವಿ ಮಾಡಿದ್ದಾಗಿ ತಿಳಿಸಿದರು. ಚನ್ನಪಟ್ಟ ಣದ ತಮಿಳರ ಕಾಲೋನಿಯಲ್ಲಿ ಸ್ವಚ್ಛತೆ ಮರೀಚಿಕೆ ಯಾಗಿದೆ. ಸ್ವಚ್ಛ ಮೇವ ಜಯತೆ ಕಾರ್ಯಕ್ರಮ ಕೇವಲ ಉದ್ಘಾಟನೆಗಷ್ಟೆ ಸೀಮಿತವಾಗಿದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಪ್ರಸನ್ನಕುಮಾರ್‌ ಮಾತನಾಡಿ, ಅಧಿಕಾರಿಗಳು ಚುನಾಯತ ಪ್ರತಿನಿಧಿಗಳ ಕರೆಗಳನ್ನೇ ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದರು. ಮಧ್ಯಾಹ್ನ 12 ಗಂಟೆಗೂ ಕರೆ ಸ್ವೀಕರಿಸೊಲ್ಲ. ಸಂಜೆ 5 ಗಂಟೆಗೆ ಫೋನ್‌ ಸ್ವಿಚ್ ಆಫ್ ಆಗಿರುತ್ತೆ ಎಂದರು. ಹಿರಿಯ ಅಧಿಕಾರಿಗಳಿಗೆ ವಿಚಾರ ತಿಳಿಸಿದರೂ ಯಾವ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ ಎಂದರು.

ಆರೋಗ್ಯ ಇಲಾಖೆ ಡಿಎಚ್ಒ ಡಾ.ಅಮರನಾಥ್‌, ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ಅವುಗಳನ್ನು ತಡೆಗಟ್ಟಲು ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಟೆಂಡರ್‌ ಪೂರ್ಣವಾಗಿಲ್ಲ: ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಡಿ ಗಂಗಾ ಕಲ್ಯಾಣ ಯೋಜನೆಯಡಿ 179 ಕೊಳವೆ ಬಾವಿಗಳನ್ನು ಕೊರೆಯಲು ಇನ್ನೂ ಟೆಂಡರ್‌ ಪ್ರಕ್ರಿಯೆ ಪೂರ್ಣವಾಗಿಲ್ಲ ಎಂದರು. ಟೆಂಡರ್‌ ಪ್ರಕ್ರಿಯೆ ಮೊದಲು ಡೀಸಿಗಳ ಹಂತದಲ್ಲಿ ನಡೆಯುತ್ತಿತ್ತು. ಇದೀಗ ರಾಜ್ಯ ಮಟ್ಟದಲ್ಲಿ ನಡೆಯುತ್ತಿರುವುದೇ ವಿಳಂಬಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ ಮೂಲಕ ಸರ್ಕಾರ ಟ್ಯಾಕ್ಸಿ ಯೋಜನೆಯಡಿ 2017-18ನೇ ಸಾಲಿಗೆ 35 ಗುರಿ ನೀಡಿದ್ದು ಈಡೇರಿದೆ. 2018-19ನೆ ಸಾಲಿಗೆ 23 ಗುರಿ ನೀಡಲಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. 2019-20ನೇ ಸಾಲಿಗೆ 14 ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್‌.ಸುಗುಣ, ಶಂಕರ್‌, ಜಿಪಂ ಅಧಿಕಾರಿಗಳು ಉಪಸ್ಥಿತರಿದ್ದರು.

ಮಧ್ಯಮಾವಧಿ ತಳಿಗಳ ಬೀಜ ಬಿತ್ತನೆ ಮಾಡಿ:

ಕೃಷಿ ಇಲಾಖೆ ಪ್ರಗತಿ ಚರ್ಚೆಗೆ ಬಂದಾಗ ಮಾತ ನಾಡಿದ ಕೃಷಿ ಅಧಿಕಾರಿಗಳು ಜಿಲ್ಲೆಯಲ್ಲಿ ಈ ಬಾರಿ 203 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಶೇ.51 ರಷ್ಟು ಬಿತ್ತನೆಯಾಗಿದೆ. ಕನಕಪುರದಲ್ಲಿ ಅತಿ ಕಡಿಮೆ ಬಿತ್ತನೆಯಾಗಿದೆ. 5 ದಿನಗಳಿಂದ ಜಿಲ್ಲೆಯಲ್ಲಿ ಉತ್ತ ಮವಾಗಿ ಮಳೆಯಾಗುತ್ತಿದೆ. ರೈತರು ಈಗಲೂ ಮಧ್ಯ ಮಾವಧಿ ತಳಿಗಳನ್ನು ಬಿತ್ತನೆ ಮಾಡಬಹುದು. ಶೂನ್ಯ ಬಂಡವಾಳ ನೈಸರ್ಗಿಕ ಕೃಷಿಯನ್ನು ಕ್ಲಸ್ಟರ್‌ ಮಟ್ಟದಲ್ಲಿ ಚನ್ನಪಟ್ಟಣದ ಮೂರು ಹಳ್ಳಿಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಸಿರಿ ಧಾನ್ಯ ಬೆಳೆಯಲು 10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈಗಾಗಲೇ 180 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಸಿರಿಧಾನ್ಯ ಬೆಳೆಯಲು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಆ.31ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.