ಎರಡು ತಿಂಗಳಲ್ಲೇ ಗುಂಡಿ ಬಿದ್ದ ನೂರಡಿ ರಸ್ತೆ!

Team Udayavani, Aug 21, 2019, 4:14 PM IST

mandya-tdy-2

ಮಂಡ್ಯದ ಬೆಸಗರಹಳ್ಳಿ ರಾಮಣ್ಣ ವೃತ್ತದ ತಿರುವಿನ ರಸ್ತೆಯಲ್ಲಿ ಮಳೆ ನೀರು ಹರಿಯುವ ಡಕ್ಟ್ ಕುಸಿದು ಗುಂಡಿ ಸೃಷ್ಟಿಯಾಗಿರುವುದು.

ಮಂಡ್ಯ: ನಿರ್ಮಾಣವಾಗಿ ಇನ್ನೂ ಎರಡು ತಿಂಗಳು ಕಳೆದಿಲ್ಲ. ಆಗಲೇ ನಗರದ ನೂರಡಿ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ರಸ್ತೆ ಮಧ್ಯ ಭಾಗದಲ್ಲಿ ಸೃಷ್ಟಿಯಾಗಿರುವ ಗುಂಡಿ ಮೃತ್ಯುಕೂಪದಂತೆ ಬಾಯ್ತೆರೆದುಕೊಂಡು ಅಪಾಯಕ್ಕೆ ಮುಕ್ತ ಆಹ್ವಾನ ನೀಡಿದೆ.

ನಗರದ ಬೆಸಗರಹಳ್ಳಿ ರಾಮಣ್ಣ ವೃತ್ತದ ತಿರುವಿನ ಮಧ್ಯಭಾಗದಲ್ಲೇ ಹಳ್ಳ ಬಿದ್ದಿರುವುದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ರಸ್ತೆ ಮಧ್ಯಭಾಗದಲ್ಲಿ ಹಾದುಹೋಗಿರುವ ಮಳೆ ನೀರಿನ ಡಕ್ಟ್ ಶಿಥಿಲಗೊಂಡಿದ್ದು, ಭಾರೀ ವಾಹನ ಸಂಚರಿಸುವ ವೇಳೆ ಕುಸಿದು ಗುಂಡಿ ನಿರ್ಮಾಣವಾಗಿದೆ.

ಡಕ್ಟ್ ಕುಸಿದು ಆತಂಕ: ದಶಕಗಳಿಂದ ಅದ್ವಾನಗೊಂಡಿದ್ದ ನೂರಡಿ ರಸ್ತೆ ಎರಡು ತಿಂಗಳ ಹಿಂದಷ್ಟೇ ಡಾಂಬರೀಕರಣಗೊಂಡು ಸುಸ್ಥಿತಿಗೆ ಮರಳಿತ್ತು. ವಾಹನ ಸವಾರರು ನೆಮ್ಮದಿಯ ನಿಟ್ಟುಸಿರುವ ಬಿಡುವ ಹಂತದಲ್ಲೇ ಡಕ್‌ ಕುಸಿದು ಮತ್ತೆ ಜನರ ಆತಂಕವನ್ನು ಹೆಚ್ಚಿಸಿದೆ. ರಸ್ತೆ ದುರಸ್ತಿ ಮಾಡುವ ಸಮಯದಲ್ಲೇ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಾಂದ್ರತೆಯನ್ನು ನಗರಸಭೆ ಅಧಿಕಾರಿಗಳು ಗಮನಿಸಬೇಕಿತ್ತು. ಅದಕ್ಕೆ ಅನುಗುಣವಾಗಿ ಮಳೆ ನೀರು ಹಾದುಹೋಗುವ ಡಕ್‌ನ್ನು ಸುಭದ್ರಗೊಳಿಸಿ ರಸ್ತೆ ನಿರ್ಮಿಸಿದ್ದರೆ ಗುಂಡಿ ಬೀಳುವ ಪ್ರಮಾದವನ್ನು ತಪ್ಪಿಸುವ ಸಾಧ್ಯತೆ ಇತ್ತು. ನಗರಸಭೆಯಲ್ಲಿ ಪರಿಣಿತ ಎಂಜಿನಿಯರ್‌ಗಳಿದ್ದರೂ ಲೋಪಗಳು ಪದೇಪದೆ ಮರುಕಳಿಸುತ್ತಲೇ ಇರುವುದು ಮಾತ್ರ ದುರಂತ.

ಅಧಿಕಾರಿಗಳ ನಿರ್ಲಕ್ಷ್ಯ: ನಮ್ಮಲ್ಲಿ ತಾಂತ್ರಿಕತೆ ಎಷ್ಟೇ ಪ್ರಗತಿ ಸಾಧಿಸಿದರೂ, ವೈಜ್ಞಾನಿಕವಾಗಿ ಸಾಕಷ್ಟು ಮುಂದುವರಿದಿದ್ದರೂ ಅಭಿವೃದ್ಧಿ ಕಾರ್ಯಗಳಲ್ಲಿ ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಆಡಳಿತ ನಡೆಸುವವರ ಲೋಪವೂ ಇದಕ್ಕೆ ಮತ್ತೂಂದು ಕಾರಣ. ಶಿಥಿಲಗೊಂಡ ಡಕ್ಟ್ ಮೇಲೆ ರಸ್ತೆ ನಿರ್ಮಾಣ ಮಾಡಿದವರ ಎಂಜಿನಿಯರ್‌ಗಳು ಹಾಗೂ ಗುತ್ತಿಗೆ ದಾರರ ಸಾಮಾನ್ಯ ಜ್ಞಾನ ಎಷ್ಟರಮಟ್ಟಿಗಿದೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ.

ಸಂಪರ್ಕ ರಸ್ತೆಗಳ ಅದ್ವಾನ: ವಿವೇಕಾನಂದ ಜೋಡಿ ರಸ್ತೆಯಿಂದ ನೂರಡಿ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ನಿತ್ಯ ನೂರಾರು ವಾಹನಗಳು ಎಡಬಿಡದೆ ಸಂಚರಿಸುತ್ತಿರುತ್ತವೆ. ಮಳವಳ್ಳಿ, ಕಿರುಗಾವಲು, ಬನ್ನೂರು, ತಿ.ನರಸೀಪುರ, ಚಾಮರಾಜನಗರ, ಮೈಸೂರು, ನಂಜನಗೂಡು ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ವಾಹನ ದಟ್ಟಣೆಯಿಂದ ಕೂಡಿರುವ ರಸ್ತೆಯ ಆಧುನೀಕರಣ ಹೇಗಿರಬೇಕೆಂಬ ಪರಿಕಲ್ಪನೆ ಬಹುಶಃ ನಗರಸಭೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಇದ್ದಂತೆ ಕಾಣುತ್ತಿಲ್ಲ ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಮಾತಾಗಿದೆ.

ಅಧಿಕಾರಿಗಳೇ ನೇರ ಹೊಣೆ: ರಸ್ತೆಯನ್ನು ಅಭಿವೃದ್ಧಿಪಡಿಸುವ ಸಮಯದಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಭಾರೀ ವಾಹನಗಳ ತೂಕದ ಅಂದಾಜನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡಬೇಕಿದ್ದರೂ, ಅದನ್ನು ಪರಿಗಣಿಸದೆ ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿ ಅವ್ಯವಸ್ಥೆ ಸೃಷ್ಟಿಯಾಗುವಂತೆ ಮಾಡಿರುವುದಕ್ಕೆ ಟೆಂಡರ್‌ ಪಡೆದ ಗುತ್ತಿಗೆದಾರರು ಹಾಗೂ ನಗರಸಭೆ ಅಧಿಕಾರಿಗಳೇ ನೇರ ಹೊಣೆಗಾರರಾಗಿದ್ದಾರೆ.

ನೂರಡಿ ರಸ್ತೆ ನಿರ್ಮಾಣದ ಸಮಯದಲ್ಲಿ ಡಕ್ಟ್ ದುರಸ್ತಿಯನ್ನು ಅಂದಾಜುಪಟ್ಟಿಗೆ ಸೇರಿಸಿಕೊಂಡಿರಲಿಲ್ಲ. ನಿಗದಿಗಿಂತ ಭಾರೀ ತೂಕದ ವಾಹನ ಸಂಚರಿಸಿರುವುದರಿಂದ ಡಕ್ಟ್ ಕುಸಿದಿದೆ ಎಂದು ನಗರಸಭೆ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಅಪಾಯವನ್ನು ಮೊದಲೆಧೀ ಗುರುತಿಸಿದ್ದರೆ ರಸ್ತೆ ಸುಸ್ಥಿತಿಯಲ್ಲಿರುವಂತೆ ಕಾಪಾಡಬಹುದಾಗಿತ್ತು. ಈಗ ಒಂದು ಕಡೆ ಗುಂಡಿ ನಿರ್ಮಾಣವಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ನಗರಸಭೆ ಅಧಿಕಾರಿಗಳು ಗುಂಡಿ ಮಧ್ಯಭಾಗಕ್ಕೆ ಬ್ಯಾರಿಕೇಡ್‌ ಇಟ್ಟು ಕೈತೊಳೆದುಕೊಂಡಿದ್ದಾರೆ. ಶಿಥಿಲಾವಸ್ಥೆಯಲ್ಲಿರುವ ಡಕ್‌ನ್ನು ದುರಸ್ತಿಪಡಿಸಿ ಯಾವಾಗ ಸುಸ್ಥಿತಿಗೆ ತರುತ್ತಾರೆ ಎನ್ನುವುದು ಗೊತ್ತಿಲ್ಲ. ಒಟ್ಟಿನಲ್ಲಿ ಅದ್ವಾನ ರಸ್ತೆಗಳಿಂದ ಮಂಡ್ಯಕ್ಕಂತೂ ಮುಕ್ತಿ ದೊರಕಿಲ್ಲ.

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.