ಹೆಸ್ಕಾಂ ಕಚೇರಿ ಗೇಟ್‌ಗೆ ಬೀಗ ಹಾಕಿ ರೈತರ ಪ್ರತಿಭಟನೆ

Team Udayavani, Aug 23, 2019, 11:52 AM IST

hv-tdy-1

ಬ್ಯಾಡಗಿ: ತ್ರಿಫೇಸ್‌ ವಿದ್ಯುತ್‌ ಪೂರೈಸಲು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಹೆಸ್ಕಾಂ ಕಚೇರಿಗೆ ಬೀಗ ಹಾಕಿ ಧರಣಿ ನಡೆಸಿದರು.

ಬ್ಯಾಡಗಿ: ಕಳೆದೆರಡು ತಿಂಗಳಿನಿಂದ ಮೋಟೆಬೆನ್ನೂರ ಭಾಗಕ್ಕೆ ತ್ರಿಫೇಸ್‌ ವಿದ್ಯುತ್‌ ಪೂರೈಸದ ಹೆಸ್ಕಾಂ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹೆಸ್ಕಾಂ ಕಚೇರಿಯ ಗೇಟ್‌ಗೆ ಬೀಗ ಹಾಕಿ ಧರಣಿ ನಡೆಸಿದರು.

ಸಮರ್ಪಕ ವಿದ್ಯುತ್‌ ಪೂರೈಕೆ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡು ವಿಚಾರಿಸಲೆಂದು ರೈತ ಸಂಘದ ಕಾರ್ಯಕರ್ತರು ಹೆಸ್ಕಾಂ ಕಚೇರಿಗೆ ಆಗಮಿಸಿದ್ದರು. ಆದರೆ, ಅಧಿಕಾರಿಗಳಿಂದ ಸೂಕ್ತ ಉತ್ತರ ಸಿಗದ ಪರಿಣಾಮ ಕಂಗಾಲಾದ ರೈತರು ಕಚೇರಿಯಲ್ಲಿದ್ದ ಸಿಬ್ಬಂದಿಯನ್ನು ಹೊರ ಹಾಕಿ ಪ್ರತಿಭಟನೆಗೆ ಮುಂದಾದರು. ಪರಿಣಾಮ ಬಿಲ್ ಪಾವತಿ ಸೇರಿದಂತೆ ಇನ್ನಿತರ ಕೆಲಸಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ತೊಮದರೆಯಾಯಿತು.

ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ತ್ರಿಫೇಸ್‌ ವಿದ್ಯುತ್‌ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಮೋಟೆಬೆನ್ನೂರ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯಲು ಸಹ ನೀರು ಸಿಗದ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ಪ್ರಶ್ನಿಸಿದರೇ ನಾಳೆ, ನಾಡಿದ್ದು ಎನ್ನುವ ಹಾರಿಕೆ ಉತ್ತರಗಳನ್ನು ನೀಡುತ್ತ ಕಾಲಹರಣ ಮಾಡುತ್ತಿದ್ದಾರೆ. ಹೆಸ್ಕಾ ಸಿಬ್ಬಂದಿ ಎಂದರೆ ಸುಳ್ಳುಕೋರರ ಕೂಟ ಎನ್ನುವಂತಾಗಿದೆ ಎಂದು ಆರೋಪಿಸಿದರು.

ತಾಲೂಕಾಧ್ಯಕ್ಷ ರುದ್ರಗೌಡ ಕಾಡನಗೌಡ್ರ ಮಾತನಾಡಿ, ಕ್ಯಾಬೇಜ್‌ ಬೆಳೆ ಕೀಳುವ ಹಂತಕ್ಕೆ ಬಂದಿದೆ. ಎತ್ತರಪ್ರದೇಶದ ಭೂಮಿಗಳಲ್ಲಿ ಅಷ್ಟೋ ಇಷ್ಟೋ ಕ್ಯಾಬೇಜ್‌ ಬೆಳೆ ಸಿಗುತ್ತಿದೆ. ಆದರೆ, ಅದನ್ನು ಕೀಳಲು ಸಹ ಕೊಳವೆಬಾವಿಗಳ ನೀರು ಅವಶ್ಯವಿದೆ. ಆದರೆ, ತ್ರಿಫೇಸ್‌ ವಿದ್ಯುತ್‌ ಇಲ್ಲದೇ ಯಾವುದೇ ಕೆಲಸ ಮಾಡಲಾಗದೆ ರೈತನ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ಆರೋಪಿಸಿದರು.

ಗಂಗಣ್ಣ ಎಲಿ ಮಾತನಾಡಿ, ತ್ರಿಫೇಸ್‌ ವಿದ್ಯುತ್‌ ಸ್ಥಗಿತಗೊಂಡಿದ್ದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯಲೂ ನೀರು ಸಿಗುತ್ತಿಲ್ಲ. ಹೊಲಕ್ಕೆ ಹೋಗುವವರು ಮನೆಯಿಂದಲೇ ಕುಡಿಯುವ ನೀರು ತುಂಬಿಕೊಂಡು ಹೋಗಬೇಕಾಗಿದೆ. ಇನ್ನಾದರೂ ಅಧಿಕಾರಿಗಳು ರೈತರ ಸಮಸ್ಯೆ ಅರಿತು ವಿದ್ಯುತ್‌ ಪೂರೈಕೆಯಲ್ಲಿ ನ್ಯಾಯ ದೊರಕಿಸಲಿ ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.