ನಾಳೆ ವಿಪಕ್ಷ ನಾಯಕನ ಆಯ್ಕೆ?


Team Udayavani, Aug 25, 2019, 3:09 AM IST

naale-vipa

ಬೆಂಗಳೂರು: ಪ್ರತಿಪಕ್ಷ ನಾಯಕನ ಆಯ್ಕೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಚರ್ಚಿಸಲು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್‌ ಅವರು ಸೋಮವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌ನಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕಾಗಿ ಸಾಕಷ್ಟು ಪೈಪೋಟಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚಿಸಲು ಕೇಂದ್ರದ ಮಾಜಿ ಸಚಿವರೂ ಆಗಿರುವ ಗುಲಾಂ ನಬಿ ಆಜಾದ್‌ ಅವರು ಸೋಮವಾರ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರೇ ಪ್ರತಿಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿರುವ ಸಂಪ್ರದಾಯ ನಿರಂತರವಾಗಿ ಮುಂದುವರಿದು ಕೊಂಡು ಬಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಒಬ್ಬರಿಗೆ ಎರಡು ಹುದ್ದೆಗಳನ್ನು ನೀಡುವ ಬದಲು, ಇಬ್ಬರು ನಾಯಕರಿಗೆ ಹುದ್ದೆಗಳನ್ನು ನೀಡಿದರೆ, ಪಕ್ಷದಲ್ಲಿ ಏಕಚಕ್ರಾಧಿಪತ್ಯಕ್ಕೆ ಕಡಿವಾಣ ಹಾಕಲು ಸಾಧ್ಯ ಎನ್ನುವ ಕಾರಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದೆ.

ಹೀಗಾಗಿ, ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮುಂದುವರಿಸಿ, ಪ್ರತಿಪಕ್ಷ ನಾಯಕನ ಸ್ಥಾನವನ್ನು ಬೇರೆ ನಾಯಕರಿಗೆ ನೀಡಲು ಈಗಾಗಲೇ ಕಾಂಗ್ರೆಸ್‌ ಹೈಕಮಾಂಡ್‌ ಚಿಂತನೆ ನಡೆಸಿದೆ. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಸಚಿವರಾದ ಎಚ್‌.ಕೆ. ಪಾಟೀಲ್‌, ಆರ್‌.ವಿ.ದೇಶಪಾಂಡೆ, ಕೃಷ್ಣ ಬೈರೇಗೌಡ, ಡಾ.ಜಿ.ಪರಮೇಶ್ವರ್‌ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ.

ಆದರೆ, ಸಿದ್ದರಾಮಯ್ಯ ಅವರೇ ಪ್ರತಿಪಕ್ಷ ನಾಯಕರಾಗಲಿ ಎಂದು ಒಂದು ಬಣ ಒತ್ತಡ ಹೇರುತ್ತಿದೆ. ಆದರೆ, ಎರಡೂ ಹುದ್ದೆಯಲ್ಲಿ ಅವರೊಬ್ಬರೇ ಮುಂದುವರಿದರೆ, ಪಕ್ಷವನ್ನು ಸಂಪೂರ್ಣ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಅವರ ವಿರೋಧಿ ಬಣದ ನಾಯಕರು ಹೈ ಕಮಾಂಡ್‌ ಮುಂದೆ ವಾದ ಮಂಡಿಸಿದ್ದಾರೆ ಎನ್ನಲಾಗುತ್ತಿದೆ.

ಅಲ್ಲದೆ, ಅವರ ಆಪ್ತರಾಗಿರುವ ದಿನೇಶ್‌ ಗುಂಡೂರಾವ್‌ ಅವರೇ ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಎಲ್ಲವೂ ಸಿದ್ದರಾಮಯ್ಯ ಅವರ ಸೂಚನೆಯಂತೆಯೇ ನಡೆಯುತ್ತಿದೆ. ಅದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರ ಸ್ಥಾನವನ್ನೂ ಬದಲಾಯಿಸಬೇಕು ಎಂದು ಕೆಲವು ನಾಯಕರು ಹೈ ಕಮಾಂಡ್‌ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದು ಆಪ್ತರಿಗೆ ಪ್ರತಿಪಕ್ಷ ಸ್ಥಾನ?: ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮುಂದುವರಿಸಿ, ಪ್ರತಿಪಕ್ಷ ನಾಯಕನ ಸ್ಥಾನವನ್ನು ಬೇರೆಯವರಿಗೆ ನೀಡಬೇಕೆಂಬ ಒತ್ತಡ ಜೋರಾದರೆ, ಸಿದ್ದರಾಮಯ್ಯನವರು ತಮ್ಮ ಆಪ್ತರಾಗಿರುವ ಮಾಜಿ ಸಚಿವ ಕೃಷ್ಣ ಬೈರೇಗೌಡ ಅಥವಾ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಅವರ ಹೆಸರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪ್ರಸ್ತಾಪಿಸಲು ಆಲೋಚಿಸಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಹಾಗೂ ಆರ್‌.ವಿ.ದೇಶಪಾಂಡೆ ಅವರು ಉತ್ತರ ಕರ್ನಾಟಕ ಭಾಗಕ್ಕೆ ಪ್ರತಿಪಕ್ಷ ನಾಯಕನ ಸ್ಥಾನ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆಯೂ ಕಾಂಗ್ರೆಸ್‌ ಹೈಕಮಾಂಡ್‌ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಡಿಕೆಶಿ ಲಾಬಿ?: 
ರಾಜ್ಯದಲ್ಲಿ ಅತಂತ್ರ ರಾಜಕೀಯ ಪರಿಸ್ಥಿತಿ ಇರುವುದನ್ನು ಅರಿತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಹೈಕಮಾಂಡ್‌ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ ತಮ್ಮ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಿ, ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯ ಮಂತ್ರಿಯಾಗಬಹುದು ಎಂಬ ಲೆಕ್ಕಾಚಾರ ಹಾಕಿಕೊಂಡಿ ದ್ದಾರೆ ಎನ್ನಲಾಗುತ್ತಿದೆ.

ಪ್ರತಿಪಕ್ಷ ನಾಯಕನ ಸ್ಥಾನ ತಮ್ಮ ಕೈ ತಪ್ಪಿದರೆ, ಒಂದು ವೇಳೆ ಒಕ್ಕಲಿಗ ನಾಯಕರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಲು ಪಕ್ಷ ಒಲವು ತೋರಿದರೆ, ಡಿ.ಕೆ.ಶಿವಕುಮಾರ್‌ ಬದಲಿಗೆ ಕೃಷ್ಣ ಬೈರೇಗೌಡ ಹೆಸರನ್ನು ಹೈಕಮಾಂಡ್‌ ಮುಂದಿಡಲು ಸಿದ್ದರಾಮಯ್ಯ ಆಲೋಚನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆಯೇ, ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾ ಯದ ಪ್ರಭಾವಿ ನಾಯಕರಾಗಿರುವ ಎಂ.ಬಿ.ಪಾಟೀಲ್‌ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ಹೈ ಕಮಾಂಡ್‌ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.