ಮಹಿಳಾ ಒಕ್ಕೂಟ ಹೆಚ್ಚು ಕಾರ್ಯೋನ್ಮುಖವಾಗಲಿ

Team Udayavani, Aug 28, 2019, 3:00 AM IST

mahila

ಚಾಮರಾಜನಗರ: ಮಹಿಳೆಯರ ಸಾಮರ್ಥ್ಯ ವೃದ್ಧಿಸಿ, ಅವರನ್ನು ಸಶಕ್ತರಾಗಿಸುವುದು ಮಹಿಳಾ ಒಕ್ಕೂಟಗಳ ಮುಖ್ಯ ಉದ್ದೇಶವಾಗಬೇಕು. ಅದರಂತೆ ಒಕ್ಕೂಟಗಳು ಹೆಚ್ಚು ಕಾರ್ಯೋನ್ಮುಖವಾಗಬೇಕು ಎಂದು ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಕರ್ನಾಟಕ ಗ್ರಾಮೀಣ ಮಹಿಳಾ ಒಕ್ಕೂಟ ಹಾಗೂ ನಗರ ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ನೆಟ್‌ವರ್ಕ್‌ ಸಂಸ್ಥೆ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಲಾಗಿದ್ದ “ನರೇಗಾ, ವೇತನ ಮತ್ತು ಕಟ್ಟಡ ಕಾರ್ಮಿಕ ಇಲಾಖೆಯ ಸೌಲಭ್ಯಗಳು ಎಂಬ ವಿಷಯ ಕುರಿತು ನಡೆದ “ಜಿಲ್ಲಾ ಮಟ್ಟದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಶೋಷಣೆ ವಿರುದ್ಧ ದನಿ ಎತ್ತಿ: ಮಹಿಳೆಯರು ಮಾನಸಿಕವಾಗಿ ಪುರುಷರಿಗಿಂತ ಹೆಚ್ಚು ಸಬಲರು. ಆದರೂ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಶೋಷಣೆ ಹೆಚ್ಚುತ್ತಲೇ ಇದೆ. ಮಹಿಳೆಯರಿಗೆ ತಮ್ಮ ಹಕ್ಕುಗಳ ಸಂಪೂರ್ಣ ಅರಿವು ಇಲ್ಲದಿರುವುದೇ ಇದಕ್ಕೆ ಮುಖ್ಯ ಕಾರಣ. ಹೀಗಾಗಿ ಮಹಿಳೆಯರು ಸಂವಿಧಾನ ತಮಗೆ ಒದಗಿಸಿರುವ ಎಲ್ಲಾ ಹಕ್ಕು, ಸೌಲಭ್ಯಗಳ ಬಗ್ಗೆ ಅರಿತುಕೊಂಡು ಶೋಷಣೆಯ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಬೇಕು ಎಂದು ಹೇಳಿದರು.

ಬಹುದೊಡ್ಡ ಸವಾಲು: ಗ್ರಾಮ ಪಂಚಾಯಿತಿ ಮತ್ತಿತ್ತಿರ ಕ್ಷೇತ್ರಗಳಲ್ಲಿ ಇಂದು ಮಹಿಳೆಯರಿಗೆ ಶೇ.50ರಷ್ಟು ಅವಕಾಶ ಕಲ್ಪಿಸಲಾಗಿದೆ. ಅದರಂತೆ ಮಹಿಳೆಯರು ಸಹ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಆದರೂ ಆಕೆಯನ್ನು ಸ್ವತಂತ್ರಳು ಎಂದು ಒಪ್ಪಿಕೊಳ್ಳಲು ಸಮಾಜ ಸಿದ್ಧವಿಲ್ಲದಿರುವುದನ್ನ ನೋಡಬಹುದಾಗಿದೆ. ಇಂಥ ಸೀಮಿತ ದೃಷ್ಟಿಯನ್ನು ಹೋಗಲಾಡಿಸುವುದು ಮಹಿಳೆಯರ ಮುಂದಿರುವ ಬಹುದೊಡ್ಡ ಸವಾಲು ಎಂದು ತಿಳಿಸಿದರು.

ಆರೋಗ್ಯದ ಬಗ್ಗೆ ಗಮನಹರಿಸಿ: ಆಡು ಮುಟ್ಟದ ಸೊಪ್ಪಿಲ್ಲ, ಮಹಿಳೆ ಮಾಡದ ಕೆಲಸವಿಲ್ಲ ಎಂದು ಹೇಳಲಾಗುತ್ತದೆ. ಅಂತೆಯೇ ಮಹಿಳೆಯರು ಉದ್ಯೋಗದಲ್ಲಿದ್ದರೂ, ಅಷ್ಟೇ ಮುತುವರ್ಜಿಯಿಂದ ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸುತ್ತಾರೆ. ಏತನ್ಮಧ್ಯೆ ತಮ್ಮ ಕುರಿತು ಚಿಂತಿಸುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಎಷ್ಟೋ ಮಹಿಳೆಯರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿವೆ. ಈ ರೀತಿಯ ನಿರ್ಲಕ್ಷ್ಯ ಇರಬಾರದು. ಮಹಿಳೆಯರು ತಮ್ಮ ಆರೋಗ್ಯ ಮತ್ತು ಸ್ವತ್ಛತೆಯ ಬಗೆಗೆ ಹೆಚ್ಚು ಗಮನ ಕೊಡಬೇಕು ಎಂದು ಸಲಹೆ ಮಾಡಿದರು.

ಸರ್ಕಾರದ ಯೋಜನೆಗಳ ಪ್ರಯೋಜ ಪಡೆಯಿರಿ: ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ವಸತಿ ಶಾಲೆಗಳನ್ನು ತೆರೆದಿದೆ. ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣವನ್ನು ಇಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಅಲ್ಲದೇ ಮಹಿಳೆಯರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಕಾರ್ಡ್‌ಗಳನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ಎಲ್ಲಾ ಸೌಲಭ್ಯಗಳ ಪ್ರಯೋಜನ ಪಡೆಯುವುದು ತುಂಬಾ ಮುಖ್ಯ ಎಂದು ತಿಳಿಸಿದರು.

ಹೆಚ್ಚೆಚ್ಚು ಉದ್ಯೋಗಗಳಲ್ಲಿ ತೊಡಗಿ: ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾದಲ್ಲಿ ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ತಮ್ಮನ್ನು ಗುರುತಿಸಿಕೊಳ್ಳುವುದು ಸುಲಭವಾಗಲಿದೆ. ಹೀಗಾಗಿ ಮಹಿಳೆಯರು ಹೆಚ್ಚೆಚ್ಚು ಉದ್ಯೋಗಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತಾಗಬೇಕು ಎಂದರು.

ಕಷ್ಟದ ದಾರಿ ದಾಟಬೇಕು: ಆರ್ಥಿಕ ಸ್ವಾತಂತ್ರ ಹೊಂದಲು ಶಿಕ್ಷಣ ಪಡೆಯುವುದು ಬಹುಮುಖ್ಯವಾಗುತ್ತದೆ. ಅಂತೆಯೇ ಉನ್ನತ ಸ್ಥಾನವನ್ನು ಗಳಿಸಲು ಸುದೀರ್ಘ‌ವಾದ ಕಷ್ಟದ ದಾರಿಯನ್ನು ದಾಟಬೇಕಾಗುತ್ತದೆ. ಆದ ಕಾರಣ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಮುಂದಿನ ಪೀಳಿಗೆಯ ಹೆಣ್ಣು ಮಕ್ಕಳನ್ನು ಸ್ವಾವಲಂಬಿಗಳಾಗಿ ರೂಪಿಸುವ ಹೊಣೆ ನಮ್ಮ ಮೇಲಿದೆ ಎಂದರು.

ಸಮಸ್ಯೆಗಳು ಶೀಘ್ರ ಪರಿಹಾರ: ಪಂಚಾಯಿತಿಯ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಆಯಾ ಗ್ರಾಮ ಪಂಚಾಯಿತಿಗೆ ಅನುಗುಣವಾಗಿ ಕೆಲಸಗಳನ್ನು ವಿಭಾಗಿಸಲಾಗಿದೆ. ಜತೆಗೆ ನರೇಗಾ ಯೋಜನೆಯನ್ನು ಮಹಿಳೆಯರಿಗೆ ಪ್ರಯೋಜನವಾಗುವಂತೆ ಮಾಡಲು ಪಂಚಾಯಿತಿಗಳಿಗೆ ನಿಗದಿತ ಗುರಿ ನೀಡಲಾಗಿದೆ. ಒಂದು ವೇಳೆ ಯಾವುದೇ ಸಮಸ್ಯೆ ಕಂಡುಬಂದಲ್ಲಿ ಅದನ್ನು ಕೂಡಲೇ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಅರಿವು ಮೂಡಿಸಲಾಗುವುದು: ಕೋಲಾರ ಗ್ರಾಮೀಣ ಮಹಿಳಾ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಮ್ಮ ಮಾತನಾಡಿ, ಮಹಿಳೆಯ ಸಮಸ್ಯೆಗಳನ್ನು ಬೇರು ಮಟ್ಟದಿಂದ ಹೋಗಲಾಡಿಸಿ, ಅವರನ್ನು ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕವಾಗಿ ಸಶಕ್ತರನ್ನಾಗಿಸುವುದೇ ನಮ್ಮ ಒಕ್ಕೂಟದ ಧ್ಯೇಯೋದ್ದೇಶ. ಅದರಂತೆ ಎಲ್ಲಾ ಸೂಕ್ಷ್ಮ ವಿಚಾರಗಳ ಬಗೆಗೂ ಅವರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಸಬಲೀಕರಣವಾಗಬೇಕು: ನಗರ ಸಿಡಿವಿಓಎನ್‌ಐನ ಅಧ್ಯಕ್ಷ ಜೆ.ಆಡಿಸ್‌ ಆರ್ನಾಲ್ಡ್‌ ಮಾತನಾಡಿ, ಮಹಿಳೆಯರು ಸಶಕ್ತರಾಗಲು ಇರುವ ವಿವಿಧ ಅವಕಾಶಗಳ ಬಗ್ಗೆ ಈ ಸಮಾವೇಶದಲ್ಲಿ ಮಾಹಿತಿ ನೀಡಲಾಗಿದೆ. ಜತೆಗೆ ಅವರ ಬೆಳವಣಿಗೆಗೆ ಶಿಕ್ಷಣ ಎಷ್ಟು ಪೂರಕ ಎಂಬುದನ್ನು ತಿಳಿಸಲಾಗಿದೆ. ಅದರಂತೆ ಮಹಿಳೆಯರು ಇದರ ಪ್ರಯೋಜನ ಪಡೆದು ಸಬಲೀಕರಣವಾಗಬೇಕು ಎಂದರು.

ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ: ಕಟ್ಟಡ ಕಾರ್ಮಿಕ ಇಲಾಖೆಯ ರಾಜೇಶ್‌ರವರು ಕಟ್ಟಡ ಕಾಮಿಕರಿಗೆ ಸರ್ಕಾರ ನೀಡುತ್ತಿರುವ ಧನಸಹಾಯ, ಅವರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನ ಮತ್ತು ಪಿಂಚಣಿಗಳ ಕುರಿತು ಮಾಹಿತಿ ನೀಡಿದರು. ನಗರ ಮಹಿಳಾ ಪೊಲೀಸ್‌ ಠಾಣೆಯ ಮುಖ್ಯ ಪೇದೆ ನಟರಾಜ್‌ ಅವರು ಮಹಿಳೆಯರ ರಕ್ಷಣೆಗೆ ಇರುವ ಸೌಕರ್ಯಗಳು ಹಾಗೂ ಅಗತ್ಯ ಸಂದರ್ಭಗಳಲ್ಲಿ ಕೆಎಸ್‌ಪಿ ಆ್ಯಪ್‌ನ ಪ್ರಯೋಜನ ಪಡೆಯುವಂತೆ ತಿಳಿಸಿದರು.

ನರೇಗಾ ಜಿಲ್ಲಾ ಸಂಯೋಜಕ‌ ನವೀನ್‌ ನರೇಗಾ ಯೋಜನೆಯ ಸೌಲಭ್ಯದ ಮಾಹಿತಿಯನ್ನು ನೀಡಿದರು. ಒಕ್ಕೂಟದ ಸದಸ್ಯೆ ಸುಂದರಮ್ಮ, ಗ್ರಾಮೀಣ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಜಯಲಕ್ಷ್ಮೀ, ಕಾರ್ಯಕ್ರಮದ ಸಂಯೋಜಕಿ ಪುಷ್ಪಲತಾ ಮತ್ತಿತ್ತರರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.