ಕೋಚಿಮುಲ್ಗೆ ಕೆ.ಸಿ.ವ್ಯಾಲಿ ನೀರು ಬಳಸಲು ಚಿಂತನೆ


Team Udayavani, Aug 28, 2019, 1:20 PM IST

kolar-tdy-2

ಕೋಲಾರ ತಾಲೂಕಿನ ಬೀಚಗೊಂಡನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೇ ಸಾಲಿನ ಸರ್ವ ಸದಸ್ಯರ ಸಭೆ, ನೂತನ ಕಟ್ಟಡಕ್ಕೆ ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್‌ ಚಾಲನೆ ನೀಡಿದರು.

ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ನೀರಿಗಾಗಿ ವರ್ಷಕ್ಕೆ 1.75 ಕೋಟಿ ರೂ. ಖರ್ಚು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕೆ.ಸಿ. ವ್ಯಾಲಿ ನೀರನ್ನು ಸಂಸ್ಕರಿಸಿ ಬಳಸಲು ಚಿಂತನೆ ನಡೆಸಿದೆ ಎಂದು ಒಕ್ಕೂಟದ ನಿರ್ದೇಶಕ ಡಿ.ವಿ.ಹರೀಶ್‌ ತಿಳಿಸಿದರು.

ತಾಲೂಕಿನ ಬೀಚಗೊಂಡನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೇ ಸಾಲಿನ ಸರ್ವ ಸದಸ್ಯರ ಸಭೆಗೆ ಚಾಲನೆ ನೀಡಿ, ‘ಕ್ಷೀರಭಾಗ್ಯ’ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ರೈತರ ಹಿತ ಕಾಯುವಲ್ಲಿ ಸದಾ ನಿರತವಾಗಿದ್ದು, ಹಾಲು ಉತ್ಪಾದಕರು ಹಾಗೂ ಅವರ ಮಕ್ಕಳ ಶ್ರೇಯೋಭಿ ವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದರ ಸದುಪಯೋಗ ಪಡೆದುಕೊಳ್ಳಲು ಸಲಹೆ ನೀಡಿದರು. 13 ಲಕ್ಷ ರೂ. ವೆಚ್ಚದಲ್ಲಿ ಬಿಎಂಸಿ(ಬಲ್ಕ್ ಮಿಲ್ಕ್ ಕೂಲರ್‌) ಸ್ಥಾಪಿಸಿದ್ದು, ಸೊಸೈಟಿಗೆ ಗುಣಮಟ್ಟದ ಹಾಲನ್ನು ಪೂರೈಸಿ ಲಾಭ ಗಳಿಸಿ ಎಂದು ಕಿವಿಮಾತು ಹೇಳಿದರು.

ಆತ್ಮಹತ್ಯೆ ಮಾಡಿಕೊಳ್ಳುವ ಚಿಂತನೆ ಇಲ್ಲ: ರಾಜ್ಯದಲ್ಲಿ ಬರದಿಂದ ರೈತರು ಕಂಗೆಟ್ಟು ಆತ್ಮಹತ್ಯೆಯಂತಹ ಸುದ್ದಿಗಳು ಬರುತ್ತಿವೆ. ಆದರೆ, ಜಿಲ್ಲೆಯ ಜನತೆ ಅಂತಹ ಕೃತ್ಯಗಳತ್ತ ಆಲೋಚನೆ ಯನ್ನೂ ಮಾಡುವುದಿಲ್ಲ. ನಮ್ಮ ರೈತರಿಗೆ ಹೈನೋದ್ಯಮ ಜೀವನಾಡಿಯಾಗಿದೆ. ಜಿಲ್ಲೆಯಲ್ಲಿ ಕೃಷಿಗೆ ನೀರಿನ ಕೊರತೆ ಕಾಡುತ್ತಿದೆ, ಈಗ ಪ್ರತಿಕುಟುಂಬವೂ ಹೈನೋದ್ಯಮದತ್ತ ನೋಡುತ್ತಿದೆ ಎಂದು ಹೇಳಿದರು.

ಹಲವು ಯೋಜನೆ ಜಾರಿ: ಕ್ಷೀರಸಿರಿ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುವುದು, ಹೈನುಗಾರರ ಮಕ್ಕಳಿಗೆ ವಸತಿ ನಿಲಯ, ರಾಸುಗಳಿಗೆ, ಉತ್ಪಾದಕರಿಗೆ ವಿಮಾ ಯೋಜನೆ ಸೌಲಭ್ಯ, ಜಿಲ್ಲಾಧಿಕಾರಿ ಆಗಿದ್ದ ದಿ.ಡಿ.ಕೆ.ರವಿ ಮಂಜೂರು ಮಾಡಿರುವ ಭೂಮಿಯಲ್ಲಿ ಕೊಳವೆ ಬಾವಿ ಕೊರೆಯಿಸಿ ಒಕ್ಕೂಟಕ್ಕೆ ನೀರು ಪೂರೈಕೆ, ಮುಂತಾದ ಕ್ರಿಯಾತ್ಮಕ ಯೋಜನೆ ಜಾರಿಗೆ ತರಲಾಗುವುದು ಎಂದರು.

ಸಂಸ್ಕರಣೆ ಮಾಡಿ ಬಳಸಿ: ಒಕ್ಕೂಟದಲ್ಲಿ ನೀರಿಗಾಗಿಯೇ ಪ್ರತಿ ವರ್ಷ 1.75 ಕೋಟಿ ರೂ. ಖರ್ಚು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕೆ.ಸಿ. ವ್ಯಾಲಿ ನೀರು ಬಂದರೆ ಅದನ್ನು ಸಂಸ್ಕರಣೆ ಮಾಡಿ ಬಳಸಿಕೊಳ್ಳುವುದಾಗಿ ತಿಳಿಸಿದರು.

ಕೋಚಿಮುಲ್ ಉಪವ್ಯವಸ್ಥಾಪಕ ಎ.ಸಿ.ಶ್ರೀನಿವಾಸಗೌಡ, ವಿಸ್ತರಣಾಧಿಕಾರಿಗಳಾದ ಶ್ರೀನಿವಾಸ್‌, ಗ್ರಾಪಂ ಸದಸ್ಯ ಚನ್ನಕೇಶವ, ಲಕ್ಷ್ಮಮ್ಮ, ನಿರ್ದೇಶಕರಾದ ಚಿದಾನಂದ, ಚೆನ್ನಬಸವಯ್ಯ, ಬಿ.ಸಿ.ಮುರಳಿ, ನಾಗೇಶ್‌, ಎಸ್‌.ಆರ್‌.ಜಗದೀಶ್‌, ಚಂದ್ರಪ್ಪ, ಬೈಯ್ಯಮ್ಮ, ರಾಮಪ್ಪ, ನಾಗರಾಜಪ್ಪ, ರಾಜಪ್ಪ, ಸಿಇಒ ಪುರುಷೋತ್ತಮ್‌, ರವಿಚಂದ್ರ, ನಾಗೇಗೌಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.