ಪರಿಹಾರ ವಿತರಣೆಗೆ ಪ್ರತ್ಯೇಕ ಪಡೆ


Team Udayavani, Aug 29, 2019, 3:06 AM IST

parihaara

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿಚಾರದಲ್ಲಿ ನಿಗಾ ವಹಿಸಲು ಪ್ರತ್ಯೇಕ ಪಡೆ ರಚಿಸಲಾಗುವುದು. ಸ್ಥಳೀಯ ವಾಗಿ ದೂರುಗಳು ಬಂದರೆ ಅಲ್ಲಿನ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಎಚ್ಚರಿಕೆ ನೀಡಿದ್ದಾರೆ.

ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಗೋಲ್‌ಮಾಲ್‌ ಆಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಬುಧವಾರ ಕಂದಾಯ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಲೋಪವಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಪರಿಹಾರ ವಿತರಣೆ ವಿಚಾರದಲ್ಲಿ ನಿಗಾ ವಹಿಸಲು ಪ್ರತ್ಯೇಕ ಪಡೆ ರಚಿಸಲಾ ಗುವುದು. ಸ್ಥಳೀಯವಾಗಿ ದೂರುಗಳು ಬಂದರೆ ಅಲ್ಲಿನ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ. ಯಾವುದೇ ಕಾರಣಕ್ಕೂ ಪರಿಹಾರ ವಿತರಣೆಯಲ್ಲಿ ವಿಳಂಬ ಆಗಬಾರದು, ಸಮಸ್ಯೆಯೂ ಆಗಬಾರದು. ಈ ಬಗ್ಗೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂತ್ರಸ್ತರ ಬ್ಯಾಂಕ್‌ ಖಾತೆಗೆ ಆದಷ್ಟೂ ನೇರವಾಗಿ ಪರಿಹಾರ ಜಮೆ ಮಾಡಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ತಾತ್ಕಾಲಿಕ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿ ಕೊಳ್ಳಬೇಕು ಎಂದು ತಿಳಿಸಿದರು.

118 ವರ್ಷಗಳಲ್ಲಿಯೇ ಅತಿ ಹೆಚ್ಚಿನ ಮಳೆ: ರಾಜ್ಯದಲ್ಲಿ ಪ್ರವಾಹದಿಂದ 32 ಸಾವಿರ ಕೋಟಿ ರೂ.ಮೊತ್ತದ ಹಾನಿಯಾ ಗಿ ರುವ ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗುವುದು. ರಾಜ್ಯದಲ್ಲಿ ಕಳೆದ ವರ್ಷಕ್ಕಿಂದ ಶೇ.12ರಷ್ಟು ಹೆಚ್ಚು ಮಳೆಯಾಗಿದೆ.

118 ವರ್ಷಗಳಲ್ಲಿ ಅತಿ ಹೆಚ್ಚಿನ ಮಳೆ ಇದು. 825 ಟಿಎಂಸಿ ನೀರು ನಮ್ಮ ರಾಜ್ಯದ ಜಲಾಶಯಗಳಲ್ಲಿ ಸಂಗ್ರಹವಾಗಿದೆ ಎಂದು ಹೇಳಿದರು. ಈಗ 60.09 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ಗೊಬ್ಬರ ಪೂರೈಕೆಗೂ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.