ಮುಂಬೈಯಲ್ಲಿ ಮತ್ತೆ ಧಾರಾಕಾರ ಮಳೆ, ಇಂದೂ ಶಾಲಾ-ಕಾಲೇಜಿಗೆ ರಜೆ ಘೋಷಣೆ
Team Udayavani, Sep 4, 2019, 10:35 AM IST
ಮುಂಬೈ:ಧಾರಾಕಾರ ಮಳೆ ಹಾಗೂ ತಗ್ಗುಪ್ರದೇಶಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಮುಂಬೈನ ಶಾಲೆಗಳಿಗೆ ಬುಧವಾರವೂ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಿತ್ತು.
ರಾಜ್ಯದ ಉಳಿದ ಭಾಗಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದಿರುವುದಾಗಿ ಹವಾಮಾನ ಇಲಾಖೆ ತಿಳಿಸಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಶಿಕ್ಷಕರು ಈಗಾಗಲೇ ಶಾಲೆ ಬಂದಾಗಿದ್ದು, ಈ ನಿಟ್ಟಿನಲ್ಲಿ ಮಕ್ಕಳನ್ನು ಮನೆಗೆ ಸುರಕ್ಷಿತವಾಗಿ ಕಳುಹಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಇಲಾಖೆ ಮನವಿ ಮಾಡಿಕೊಂಡಿದೆ.
ಸಮುದ್ರ ತೀರ ಹಾಗೂ ಜಲಾವೃತಗೊಂಡ ಪ್ರದೇಶಗಳಿಗೆ ಜನರು ತೆರಳದಂತೆ ಎಚ್ಚರಿಕೆ ವಹಿಸಬೇಕೆಂದು ಮುಂಬೈ ಮಹಾನಗರ ಪಾಲಿಕೆ ಮನವಿ ಮಾಡಿಕೊಂಡಿದೆ. ಯಾರಾದರೂ ಜಲಾವೃತಗೊಂಡ ಪ್ರದೇಶದಲ್ಲಿ ಸಿಕ್ಕಿಹಾಕಿಕೊಂಡಿದ್ದನ್ನು ಗಮನಿಸಿದರೆ ಹೆಲ್ಪ್ ಲೈನ್ ನಂಬರ್ 1916ಕ್ಕೆ ಕರೆ ಮಾಡಿ ತಿಳಿಸುವಂತೆ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ