ಕನಕಪುರದಲ್ಲಿ ಬಂದ್‌: ಪ್ರತಿಭಟನೆ ನಿರಂತರ

Team Udayavani, Sep 6, 2019, 3:42 PM IST

rn-tdy-2

ಕನಕಪುರದ ಚನ್ನಬಸಪ್ಪ ವೃತ್ತದಲ್ಲಿ ಮೋದಿ, ಅಮಿತ್‌ ಶಾ ಅವರಿಗೆ ಮರಳಿನಿಂದ ಸಮಾಧಿ ನಿರ್ಮಿಸಿ, ಅಮಿತ್‌ ಶಾ ಅವರ ಮಗ ಎಂದು ಒಬ್ಬ ಯುವಕನ್ನು ಬಿಂಬಿಸಿ ಕೇಶ ಮುಂಡನ ಮಾಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಕನಕಪುರ: ಕಳೆದ 3 ದಿನಗಳಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ಬಂಧನ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾಗಿತ್ತು. ಈ ಸಂಬಂಧ ಮೂವ ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಡಿ.ಕೆ. ಶಿವಕುಮಾರ್‌ ಬೆಂಬಲಿಗರು ಎಲ್ಲರೂ ಸೇರಿ ನಗರದಲ್ಲಿ ಬೃಹತ್‌ ಪ್ರತಿಭಟನೆ ಮಾಡುವುದಾಗಿ ಪೊಲೀಸ್‌ ಇಲಾಖೆಗೆ ಮನವಿ ಮಾಡಿದರು.

ಇದರಿಂದ ನೌಕರರಿಗೆ, ಕಾಲೇಜುಗಳಿಗೆ ಬೆಂಗಳೂರಿಗೆ ಹೋಗಬೇಕಿದ್ದ ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡಿದರು. ಗುರುವಾರ ಬೆಳಗ್ಗೆ 5 ಗಂಟೆಯಿಂದಲೇ ಬಸ್‌ ಗಳಿಗಾಗಿ ಕಾದು ಕುಳಿತಿದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದ್ವಿಚಕ್ರ ವಾಹನಗಳಲ್ಲಿ ಬೆಂಗಳೂರಿಗೆ ಓಡಾಡುತ್ತಿದ್ದದ್ದು ಕಂಡು ಬಂತು. ಬುಧವಾರ ವರ್ತಕರು ಸ್ವಯಂ ಪ್ರೇರಿತವಾಗಿ ವ್ಯಾಪಾರ ವ್ಯವಹಾರಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಗುರುವಾರ ಎಂದಿನಂತೆ ಮಳಿಗೆಗಳನ್ನು ತೆರೆಯುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಬೈಕ್‌ ರ್ಯಾಲಿಯಲ್ಲಿ ಬಂದು ಪೊಲೀಸರೆದುರೇ ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಿ, ಪ್ರತಿಭಟನೆಗೆ ಬೆಂಬಲ ಕೋರಿದರು.

ಬೆಳಗ್ಗೆ 10 ಗಂಟೆಯಿಂದ ನಗರದ ಚನಬಸಪ್ಪ ವೃತ್ತದಲ್ಲಿ ಜಮಾವಣೆ ಗೊಂಡ ನೂರಾರು ಕಾಂಗ್ರೆಸ್‌- ಜೆಡಿಎಸ್‌ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಸೇರಿ ನಗರದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣಮೂರ್ತಿ ಅವರ ನೇತ್ರತ್ವದಲ್ಲಿ ಪ್ರತಿಭಟಸಿದರು.

ಜೆಡಿಎಸ್‌ ರಾಮನಗರ ಜಿಲ್ಲಾ ವಕ್ತಾರ ಸ್ಟುಡಿಯೋ ಚಂದ್ರು ಮಾತನಾಡಿ, ಐಟಿ ಮತ್ತು ಇಡಿ ಅಧಿಕಾರಿಗಳು ಡಿಕೆಶಿ ಅವರನ್ನು ವಶ‌ಕ್ಕೆ ಪಡೆದಿರುವುದರಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಾವಿರಾರು ಕಾರ್ಯ ಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಮೈಸೂರು ಭಾಗದ ಒಕ್ಕಲಿಗರ ನಾಯಕ ರನ್ನು ತುಳಿಯುವ ಕಾರ್ಯ ನಡೆಯುತ್ತಿದೆ. ಫೋನ್‌ ಟ್ಯಾಪಿಂಗ್‌ ಹೆಸರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಟ್ಟಿದರೆ ಪ್ರತಿಭಟನೆಗಿಳಿದು ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಸ್ಥಿತಿ ಊಹಿಸಲು ಸಾಧ್ಯವಾಗದಂತೆ ಮಾಡುತ್ತೆವೆ ಎಂದು ಎಚ್ಚರಿಕೆ ನೀಡಿದರು.

ವಕೀಲ ರಾಮಚಂದ್ರ ಮಾತನಾಡಿ. ಡಿ.ಕೆ ಶಿವಕುಮಾರ್‌ ಅವರನ್ನು ವಿಚಾರಣೆ ಮಾಡುವ ನೆಪದಲ್ಲಿ ಬಂಧಿಸಿರುವುದು ಖಂಡನೀಯ ಡಿಕೆ ಶಿವಕುಮಾರ್‌ ಅವರಿಗೆ ಬಿಪಿ ಶುಗರ್‌ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗಿ ಹೆಚ್ಚಿನ ಚಿಕಿತ್ಸೆಗೆ ಬೇಕೆಂದು ಕೇಳಿದರೂ ಸಹ ಅದನ್ನು ಧಿಕ್ಕರಿಸಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದು ಕೊಂಡಿರುವುದು ಸರಿಯಲ್ಲ ಎಂದರು.

ಸ್ಥಳೀಯ ಕಾಂಗ್ರೆಸ್‌ ಮುಖಂಡರಾದ ವಿಧಾನಪರಿಷತ್‌ ಸದಸ್ಯ ಎಸ್‌ ರವಿ ಸಾತನೂರು ಕಾಂಗ್ರೆಸ್‌ ಮುಖಂಡ ಶ್ರೀಕಂಠು ಸೇರಿದಂತೆ ಬಹುತೇಕ ಸ್ಥಳಿಯ ನಾಯಕರುಗಳು ಡೆಲ್ಲಿ ಬೆಂಗಳೂರು ಸೇರಿಕೊಂಡಿದ್ದು ಪ್ರತಿಭಟನೆಯಲ್ಲಿ ನಾಯಕರ ಕೊರತೆ ಎದ್ದುಕಾಣುತ್ತಿತ್ತು. ಮೊದಲದಿನ ಪ್ರತಿಭಟನೆಗೆ ಸ್ಪಂದಿಸಿದ ಸಾರ್ವಜನಿಕರು ಮತ್ತು ಕಾರ್ಯಕರ್ತರು ಎರಡನೇ ದಿನದ ಪ್ರತಿಭಟನೆಗೆ ಕೊಂಚ ಕಡಿಮೆ ಇದ್ದಂತೆ ಕಂಡಿತು.

ಪೊಲೀಸ್‌ ಬಿಗಿ ಭದ್ರತೆ: ತಾಲೂಕಿನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಎಸ್ಪಿ ಅನುಪಮ್‌ ಅಗರವಾಲ್, ರಾಮನಗರ ಎಸ್ಪಿ ಅನುಪ್‌ ಎ ಶೆಟ್ಟಿ, ಐಜಿಪಿ ಶರತ್‌ ಚಂದ್ರ ಮತ್ತು ಹೆಚ್ಚುವರಿಯಾಗಿ ಎಸ್ಪಿ ಸುಜಿತ್‌ ಅವರನ್ನು ನಿಯೋಜಿಸಲಾಗಿತ್ತು. 600 ಮಂದಿ ಪೊಲೀಸರು ಮೂರು ಕೆಎಸ್‌ಆರ್‌ಪಿ ತುಕಡಿಗಳು 2 ಜಿಲ್ಲಾ ಶಸ್ತ್ರಾಸ್ತ್ರ ಮೀಸಲು ಪಡೆ ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.