ಅಭಿವೃದ್ಧಿ ಹೆಸರಿನಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ

Team Udayavani, Sep 9, 2019, 3:00 AM IST

Udayavani Kannada Newspaper

ಬೆಂಗಳೂರು: ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. 100ರೂ. ಖರ್ಚು ಮಾಡುವ ಕಡೆ 50ರೂ. ಖರ್ಚು ಮಾಡಿ ಉಳಿದದ್ದು ದುರುಪಯೋಗ ವಾಗುತ್ತಿದೆ ಎಂಬ ದೂರಿದೆ. ಇದನ್ನು ತಡೆಯಲು ಕ್ರಮ ವಹಿಸುವೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು.

ಭಾನುವಾರ ಗೃಹ ಕಚೇರಿ “ಕೃಷ್ಣಾ’ದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಎಲ್ಲೆಲ್ಲಿ ಲೋಪ ಗಳಾಗುತ್ತಿವೆ ಎಂಬುದು ಕಂಡುಬಂದರೆ, ಮನವರಿಕೆ ಯಾದರೆ ಅದನ್ನು ಸಚಿವರು ಹಾಗೂ ನನ್ನ ಗಮನಕ್ಕೆ ತಂದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು.

ವೈಟ್‌ ಟಾಪಿಂಗ್‌ ಯೋಜನೆಯಡಿ ಒಂದು ಕಿ.ಮೀ. ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ 11ರಿಂದ 12 ಕೋಟಿ ರೂ. ವೆಚ್ಚ ಮಾಡಲಾಗಿದೆ. ಆದರೆ ನಾಲ್ಕು ಕೋಟಿ ರೂ.ನಲ್ಲಿ ಇದಕ್ಕಿಂತಲೂ ಉತ್ತಮ ರಸ್ತೆ ನಿರ್ಮಾಣ ಸಾಧ್ಯವಿದೆ. ಯೋಜನೆ ಹೆಸರಿನಲ್ಲಿ ಲೂಟಿ, ಹಗಲು ದರೋಡೆ ನಡೆದಿದೆ ಎಂದು ಸಿಎಂ ಕಿಡಿ ಕಾರಿದರು.

ನಮ್ಮ ವತಿಯಿಂದಲೇ 4 ಕೋಟಿ ರೂ. ವೆಚ್ಚದಲ್ಲಿ ಇದಕ್ಕಿಂತ ಉತ್ತಮ ರಸ್ತೆ ನಿರ್ಮಿಸಲಾಗುವುದು. ಸದ್ಯದಲ್ಲೇ ಕೆಲ ಗುತ್ತಿಗೆದಾರರಿಂದ 10- 12 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗು ವುದು. ಆಗ ವ್ಯತ್ಯಾಸ ಸ್ಪಷ್ಟವಾಗಿ ಗೊತ್ತಾಗಲಿದೆ. ಕಾಮಗಾ ರಿಗೆ‌ ಹೆಚ್ಚುವರಿ ಹಣ ವೆಚ್ಚ ಮಾಡಲಾಗಿದೆ. ಹಾಗಾಗಿ ತನಿಖೆಗೆ ಸೂಚಿಸಲಾಗಿದ್ದು, ಸಮಿತಿ ವರದಿ ಆಧರಿಸಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

15 ದಿನಕ್ಕೊಮ್ಮೆ ನಗರ ತಪಾಸಣೆ: ಸಾಧ್ಯವಾದಷ್ಟೂ 15 ದಿನಕ್ಕೊಮ್ಮೆ ಬೆಂಗಳೂರಿನಲ್ಲಿ ತಪಾಸಣಾ ಭೇಟಿ ನೀಡಿ ಸ್ಥಳದಲ್ಲೇ ಅಗತ್ಯ ಸೂಚನೆ, ನಿರ್ದೇಶನ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಬೆಂಗಳೂರು ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದ ನಗರವಾಗಿರುವ ಹಿನ್ನೆಲೆಯಲ್ಲಿ ಅದಕ್ಕೆ ತಕ್ಕಂತೆ ಮೂಲ ಸೌಕರ್ಯ ಅಭಿವೃದ್ಧಿ ಪಡಿಸುವುದು ಸರ್ಕಾರದ ಆದ್ಯತೆ.

ಈ ದೃಷ್ಟಿಯಿಂದ ಸಾರ್ವಜನಿಕರಿಂದಲೇ ಅಭಿಪ್ರಾಯ ಪಡೆಯುವ ಪ್ರಯತ್ನ ಮಾಡಿದ್ದೇನೆ. ಜನರಿಗೆ ತೊಂದರೆಯಾಗಬಾರ ದೆಂಬ ಕಾರಣಕ್ಕೆ ಭಾನುವಾರವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ತಪಾಸಣೆ ವೇಳೆ ಹತ್ತಾರು ಕಾರುಗಳಲ್ಲಿ ಓಡಾಡುವುದಕ್ಕಿಂತ ಮೂರು ಬಸ್‌ಗಳಲ್ಲಿ ಪ್ರಯಾಣ ಮಾಡಲಾಗಿದೆ ಎಂದು ತಿಳಿಸಿದರು.

ಸೆಂಟ್ರಲ್‌ ಸಿಲ್ಕ್ ಬೋರ್ಡ್‌ ಜಂಕ್ಷನ್‌ನಿಂದ ಹೆಬ್ಟಾಳದವರೆಗೆ 102 ಕಿ.ಮೀ. ಉದ್ದದ ಎಲಿವೇಟೆಡ್‌ ಕಾಮಗಾರಿ ಯೋಜನೆ ಬಗ್ಗೆ ಚರ್ಚಿಸಲಾಗಿದೆ. ವೈಜ್ಞಾನಿಕ ವಿಧಾನದಲ್ಲಿ ಸಂಚಾರ ದಟ್ಟಣೆ ನಿವಾರಣೆಯತ್ತ ಪರಿಶೀಲಿಸಲಾಗುವುದು. ಹಾಗೆಯೇ ನಗರದಲ್ಲಿ ಜಾಹೀರಾತು ಪ್ರದರ್ಶನಕ್ಕೆ ನಿಷೇಧವಿದ್ದು, ಅನುಮತಿ ನೀಡುವ ಬಗ್ಗೆಯೂ ಪರಿಶೀಲಿಸಲಾಗುವುದು.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.