ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ಸಿದ್ಧತೆ


Team Udayavani, Sep 10, 2019, 3:21 PM IST

yg-tdy-1

ಯಾದಗಿರಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿದರು.

ಯಾದಗಿರಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನು ಸೆಪ್ಟೆಂಬರ್‌ 17ರಂದು ಜಿಲ್ಲಾದ್ಯಂತ ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸೆ. 17ರಂದು ಬೆಳಗ್ಗೆ 7ರಿಂದ 8:00 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಧ್ವಜಾರೋಹಣ ನೆರವೇರಿಸಬೇಕು. ತಾಲೂಕು ಮಟ್ಟದಲ್ಲಿ ಕೂಡ ಅರ್ಥಪೂರ್ಣವಾಗಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನು ಆಚರಣೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂದು ಬೆಳಗ್ಗೆ 8:00 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ಬೆಳಗ್ಗೆ 9:00 ಗಂಟೆಗೆ ಯಾದಗಿರಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಚಿವರು ಧ್ವಜಾರೋಹಣ ಮಾಡುವ ಸಾಧ್ಯತೆ ಇರುತ್ತದೆ. ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿದರು.

ದಿನಾಚರಣೆ ಅಂಗವಾಗಿ ಪ್ರತಿ ತಾಲೂಕಿನ 50 ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಬಂಧ ಹಾಗೂ ಇತರೆ ಸ್ಪರ್ಧೆಗಳನ್ನು ಏರ್ಪಡಿಸಿ, 3 ಜನ ವಿದ್ಯಾರ್ಥಿಗಳನ್ನು ಆಯ್ಕೆ ಮಾಡ‌ಬೇಕು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ಲ್ಯಾಪ್‌ಟಾಪ್‌ಗ್ಳನ್ನು ವಿತರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಕ್ರಮ ಕೈಗೊಳ್ಳಬೇಕು. ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಹಾಗೂ ಉದ್ಘಾಟನೆಗಳಿದ್ದಲ್ಲಿ ಮಾಹಿತಿ ನೀಡುವಂತೆ ಸೂಚಿಸಿದರು.

ಕಾರ್ಯಕ್ರಮದ ಸಾಮೂಹಿಕ ಕವಾಯಿತುನಲ್ಲಿ ಪೊಲೀಸ್‌ ಇಲಾಖೆಯಿಂದ-1, ಭಾರತ ಸೇವಾದಳ-3, ಗೃಹರಕ್ಷಕ ದಳ-1, ಸ್ಕೌಟ್ಸ್‌ ಅಂಡ್‌ ಗೈಡ್ಸ್‌-3 ಒಟ್ಟು 8 ತಂಡಗಳು ಭಾಗವಹಿಸಬೇಕು. ಕವಾಯತ್‌ನಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಮೂರು ದಿನಗಳ ತರಬೇತಿಗೆ ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿಲಾಯಿತು.

ಸಮಾರಂಭದ ವೇದಿಕೆಗೆ ಟೆಂಟ್, ಆಸನ, ಮೈಕ್‌, ವಿದ್ಯುತ್‌, ಸೌಂಡ್‌ ಸಿಸ್ಟಮ್‌, ಶಾಮಿಯಾನ, ಜನರೇಟರ್‌, ಬ್ಯಾಕ್‌ ಡ್ರಾಪ್‌ ವ್ಯವಸ್ಥೆ, ಜಿಲ್ಲಾಡಳಿತ ಕಾರ್ಯಾಲಯ, ಎಲ್ಲಾ ಸರಕಾರಿ ಕಚೇರಿ ಹಾಗೂ ನಗರದ ವೃತ್ತಗಳಲ್ಲಿ ವಿದ್ಯುತ್‌ ದೀಪಾಲಂಕಾರದ ವ್ಯವಸ್ಥೆ, ನಗರ ಸ್ವಚ್ಛತೆಗೆ ಕ್ರಮ ವಹಿಸಬೇಕು. ಪೊಲೀಸ್‌ ಬಂದೋಬಸ್ತ್, ಅಗ್ನಿಶಾಮಕ ವಾಹನ ಹಾಗೂ ಕಾಲೇಜು ಮೈದಾನದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಂಬ್ಯುಲೆನ್ಸ್‌ ವ್ಯವಸ್ಥೆ ಮಾಡಬೇಕು. ಅಂದು ಬೆಳಗ್ಗೆ 5:00 ಗಂಟೆಯಿಂದ ರಾತ್ರಿ 7:00 ಗಂಟೆಯವರೆಗೆ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮೇಲುಸ್ತುವಾರಿ ಕಾರ್ಯವನ್ನು ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಲಾಯಿತು. ವಿದ್ಯಾರ್ಥಿಗಳು ಮತ್ತು ಗಣ್ಯರಿಗೆ ನೀರಿನ ವ್ಯವಸ್ಥೆ ಮಾಡಲು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕರಾದ ರಘುವೀರ್‌ಸಿಂಗ್‌ ಠಾಕೂರ್‌ ಸಭೆ ನಡವಳಿಗಳನ್ನು ಓದಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ಜಿಲ್ಲಾ ಪಂಚಾಯಿತಿ ಅಧಿಕಾರಿ ಗುರುನಾಥ ಎನ್‌.ಗೌಡಪ್ಪನವರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ್‌, ಪೌರಾಯುಕ್ತ ರಮೇಶ ಸುಣಗಾರ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ರಾಘವೇಂದ್ರ, ಸಾಹಿತಿ ಅಯ್ಯಣ್ಣ ಹುಂಡೇಕಾರ, ಜಿಲ್ಲಾ ಭಾವೈಕ್ಯತಾ ಸಮಿತಿಯ ಬಾಬು ದೋಖಾ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಭೀಮುನಾಯಕ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.