ಸಿನಿಮಾ ಕಲಿಕೆಗೆ ಹೊಸ ಹಾದಿ ಸೃಷ್ಟಿಸಿದ ಗುರು ದೇಶಪಾಂಡೆ!

Team Udayavani, Sep 11, 2019, 11:05 AM IST

Guru-deshpan

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಯಶಸ್ವೀ ನಿರ್ದೇಶಕಕರಾಗಿ ಹೆಸರಾಗಿರುವ ಗುರು ದೇಶಪಾಂಡೆ ಇದೀಗ ನಿರ್ಮಾಪಕರಾಗಿಯೂ ಅಡಿಯಿರಿಸಿದ್ದಾರೆ. ಇದೆಲ್ಲದರ ಜೊತೆಗೆ ಅವರು ಜಿ ಅಕಾಡೆಮಿ ಎಂಬ ಸಿನಿಮಾ ತರಬೇತಿ ಸಂಸ್ಥೆಯನ್ನು ಆರಂಭಿಸಿದ್ದಾರೆ.

ಸಿನಿಮಾ ನೋಡೋದೊಂದೇ ಸಿನಿಮಾ ಮಾಡಲು ಇರುವ ಅರ್ಹತೆಯೆಂದು ಅನೇಕರು ಭಾವಿಸಿರುತ್ತಾರೆ. ಆದರೆ ಸಿನಿಮಾವೊಂದು ರೂಪುಗೊಳ್ಳೋದರ ಹಿಂದೆ ಬೇರೆಯದ್ದೇ ವಿಧಾನಗಳಿರುತ್ತವೆ. ಯಾವ ಕಲಿಕೆಯೂ ಇಲ್ಲದೇ ಅಲ್ಲಿಗೆ ತೆರಳಿ ತಬ್ಬಿಬ್ಬಾಗಿ ನಿಲ್ಲುವುದಕ್ಕಿಂತ ಸಂಪೂರ್ಣವಾಗಿ ಎಲ್ಲ ವಿಧಿ ವಿಧಾನಗಳನ್ನೂ ಅರಿತುಕೊಂಡೇ ಎಂಟ್ರಿ ಕೊಟ್ಟರೆ ಸಾಧನೆಯೆಂಬುದು ಸಲೀಸಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಭಾವಂತರನ್ನು ಸೃಷ್ಟಿಸಿ ಚಿತ್ರರಂಗಕ್ಕೆ ಕಳಿಸುವ ಮಹತ್ವಾಕಾಂಕ್ಷೆಯೊಂದಿಗೆ ಗುರು ದೇಶಪಾಂಡೆ ಈ ತರಬೇತಿ ಸಂಸ್ಥೆಯನ್ನು ಆರಂಭಿಸಿದ್ದಾರೆ.

ಈ ತರಬೇತಿ ಸಂಸ್ಥೆ ಅಚ್ಚುಕಟ್ಟಾದ ರೂಪುರೇಷೆಗಳೊಂದಿಗೇ ಸಿದ್ಧಗೊಂಡಿದೆ. ನಿರ್ದೇಶನ, ನಿರ್ಮಾಣ ಸೇರಿದಂತೆ ಪ್ರತಿಯೊಂದು ವಿಚಾರದಲ್ಲಿಯೂ ಆಯಾ ವಿಭಾಗದಲ್ಲಿ ಯಶಸ್ವಿಯಾದವರಿಂದಲೇ ತರಬೇತಿ ಸೌಕರ್ಯ ಒದಗಿಸಿರೋದು ಜಿ ಅಕಾಡೆಮಿಯ ಪ್ರಧಾನ ಅಂಶ. ನಿರ್ಮಾಪಕರಾದ ಕೆ.ಮಂಜು, ಉದಯ್.ಕೆ ಮೆಹ್ತಾ, ನಿರ್ದೇಶಕರಾದ ದಯಾಳ್ ಪದ್ಮನಾಭನ್, ಭರ್ಜರಿ ಚೇತನ್ ಕುಮಾರ್, ರಾಮ ರಾಮ ರೇ ಸತ್ಯಪ್ರಕಾಶ್, ಬಿ.ಎಂ.ಗಿರಿರಾಜ್, ಮೌನೇಶ್ ಬಡಿಗೇರ್, ನವೀನ್ ಕೃಷ್ಣ, ಕೆಂಪರಾಜು, ಕೆ.ಎಸ್.ಚಂದ್ರಶೇಖರ್, ಆರ್.ಜೆ.ನೇತ್ರಾ, ಹೇಮಲತಾ, ಸಂತೋಷ್ ನಾಯಕ್,  ಮದನ್ ಹರಿಣಿ, ಗಿರೀಶ್, ಡಿಫರೆಂಟ್ ಡ್ಯಾನಿ, ದೀಪಕ್ ಮತ್ತು ಶ್ರೀನಿವಾಸ್  ಸೇರಿದಂತೆ ಅನೇಕರು ಆಯಾ ವಿಭಾಗಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲಿದ್ದಾರೆ.

ಇದೊಂದು ಸುಸಜ್ಜಿತವಾದ ಸಿನಿಮಾ ತರಬೇತಿ ಸಂಸ್ಥೆ. ಇಲ್ಲಿ ಪ್ರತಿಯೊಂದನ್ನೂ ಕೂಡಾ ಪ್ರಾಕ್ಟಿಕಲ್ ಆಗಿಯೇ ಅರಿತುಕೊಳ್ಳುವ ಸದಾವಕಾಶ ಆಕಾಂಕ್ಷಿಗಳಿಗೆ ಸಿಗಲಿದೆ. ನಿದರ್ೇಶನ, ನಟನೆ, ನೃತ್ಯ ಸೇರಿದಂತೆ ಎಲ್ಲ ವಿಭಾಗಗಳಿಗೂ ನುರಿತವರಿಂದಲೇ ತರಬೇತಿ ಕೊಡಿಸಲಾಗುತ್ತದೆ. ಹೀಗೆ ತರಬೇತಿ ಪಡೆದುಕೊಳ್ಳುವ ಪ್ರತಿಭಾವಂತರಿಗೆ ಗುರು ದೇಶಪಾಂಡೆ ತಮ್ಮ ಸಂಸ್ಥೆಯಿಂದ ನಿಮರ್ಾಣಗೊಳ್ಳಲಿರೋ ಚಿತ್ರಗಳಲ್ಲಿಯೂ ಅವಕಾಶ ಕಲ್ಪಿಸಿ ಕೊಡುವ ಇರಾದೆಯನ್ನೂ ಹೊಂದಿದ್ದಾರೆ. ಇದೇ ತಿಂಗಳ 25ರಿಂದ ಜಿ ಅಕಾಡೆಮಿಯಲ್ಲಿ ತರಗತಿಗಳು ಆರಂಭವಾಗಲಿವೆ. ಅದಕ್ಕೂ ಮುಂಚಿತವಾಗಿಯೇ ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು. ಬೆಂಗಳೂರಿನ ನಾಗರಬಾವಿಯಲ್ಲಿ ಜಿ ಅಕಾಡೆಮಿ ಕಾರ್ಯ ನಿರ್ವಹಿಸುತ್ತಿದೆ. ಹೆಚ್ಚಿನ ಮಾಹಿತಿಗಾಗಿ www.gacademy.co ವೆಬ್ ಸೈಟಿಗೆ ಭೇಟಿ ನೀಡಬಹುದು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.