ಸ್ವಚ್ಛತೆ ಸಾಮಾಜಿಕ ಹೊಣೆಗಾರಿಕೆ: ಆರ್‌. ಸೆಲ್ವಮಣಿ

ಸ್ವಚ್ಛ ಮಂಗಳೂರು ವಿದ್ಯಾರ್ಥಿ ರಾಯಭಾರಿ ಕಾರ್ಯಕ್ರಮ ಉದ್ಘಾಟನೆ

Team Udayavani, Sep 15, 2019, 5:48 AM IST

as-20

.ಕ.ಜಿ.ಪಂ. ಸಿಇಒ ಆರ್‌. ಸೆಲ್ವಮಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಾನಗರ: ಪ್ರಸ್ತುತ ಕಾಲ ಘಟ್ಟದಲ್ಲಿ ಸ್ವಚ್ಛತೆಯ ಮಹತ್ವ ಮತ್ತು ಅದರ ವಿವಿಧ ಆಯಾಮಗಳ ಬಗ್ಗೆ ಸಾರ್ವತ್ರಿಕ ಅರಿವು ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ. ಸ್ವಚ್ಛತೆ ಒಂದು ಸಾಮಾಜಿಕ ಹೊಣೆಗಾರಿಕೆಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ದ.ಕ. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್‌. ಸೆಲ್ವಮಣಿ ಹೇಳಿದ್ದಾರೆ.

ಮಂಗಳೂರಿನ ರಾಮಕೃಷ್ಣ ಮಿಷನ್‌ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಸ್ವಚ್ಛ ಮಂಗಳೂರು ವಿದ್ಯಾರ್ಥಿ ರಾಯಭಾರಿ -2019 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಎಳೆಯ ಪ್ರಾಯದಲ್ಲೇ ಸ್ವಚ್ಛತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಮಂಗಳೂರಿನ ರಾಮಕೃಷ್ಣ ಮಠ ಹಮ್ಮಿಕೊಂಡಿರುವ ಸ್ವಚ್ಛ ಮನಸ್ಸು ಕಾರ್ಯಕ್ರಮ ಅತ್ಯಂತ ಮಹತ್ವ ದ್ದಾಗಿದೆ. ಸ್ವಚ್ಛ ಮನಸ್ಸುಗಳಿಂದ ಸ್ವಚ್ಛ ಪರಿಸರ, ಸಮಾಜ ನಿರ್ಮಾಣವಾಗುತ್ತದೆ ಎಂದರು.

ಪ್ಲಾಸ್ಟಿಕ್‌ ಬಳಕೆ ತ್ಯಜಿಸಿ
ಜಿಲ್ಲೆಯಲ್ಲಿ ಪ್ರತಿಯೊಂದು ಮನೆಯೂ ಶೌಚಾಲಯ ಹೊಂದುವ ಸರಕಾರದ ಗುರಿ ಯಶಸ್ವಿಯಾಗಿದೆ. ತ್ಯಾಜ್ಯ ವಿಲೇ ವಾರಿ ಕಾರ್ಯ ಸಮರ್ಪಕವಾಗಿ ನಡೆ ದಾಗ ಪರಿಸರ ಮಾಲಿನ್ಯ ಸಮಸ್ಯೆ ನಿವಾರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆಗಳಲ್ಲೂ ಕಸ ವಿಂಗಡನೆ ಸರಿಯಾದ ರೀತಿಯಲ್ಲಿ ಆಗಬೇಕು ಮತ್ತು ಪ್ಲಾಸ್ಟಿಕ್‌ ಬಳಕೆಯನ್ನು ತ್ಯಜಿಸಬೇಕು. ವಿದ್ಯಾರ್ಥಿ ರಾಯಭಾರಿಗಳಾಗಿ ನಾಮ ನಿರ್ದೇಶನಗೊಂಡಿರುವ ವಿದ್ಯಾರ್ಥಿಗಳು ಈ ಬಗ್ಗೆ ತಮ್ಮ ಮನೆ, ಪರಿಸರ, ಶಾಲೆಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಜವಾಬ್ದಾರಿಯುತ ನಾಗರಿಕರನ್ನಾಗಿಸಿ
ಸ್ವಚ್ಛ ಮಂಗಳೂರು ರಾಯಭಾರಿ ಕಾರ್ಯಕ್ರಮದ ಬಗ್ಗೆ ವಿವರಿಸಿದ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಅವರು ಮಕ್ಕಳಲ್ಲಿ ಎಳೆಯ ಪ್ರಾಯದಲ್ಲೇ ಸ್ವಚ್ಛತೆಯ ಮನೋಭೂಮಿಕೆಯನ್ನು ನಿರ್ಮಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರ ನ್ನಾಗಿ ರೂಪಿಸುವುದು ಸ್ವಚ್ಛ ಮನಸ್ಸು ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳಿಂದ, ಶಿಕ್ಷಕರು, ಹೆತ್ತವರಿಂದ ಅತ್ಯುತ್ತಮ ಬೆಂಬಲ ಮತ್ತು ಪಾಲ್ಗೊಳ್ಳುವಿಕೆ ವ್ಯಕ್ತವಾಗಿದೆ ಎಂದರು. ವಿದ್ಯಾರ್ಥಿ ರಾಯಭಾರಿಗಳಾಗಿ ನಾಮ ನಿರ್ದೇಶನಗೊಂಡಿರುವ ವಿದ್ಯಾರ್ಥಿ ಗಳು ಸ್ವಚ್ಛತೆಯಲ್ಲಿ ತಾನು ಮಾದರಿಯಾಗಿ, ಇತರರಿಗೆ ಪ್ರೇರಣಾದಾಯಕರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಸ್ವಚ್ಛ ಮನಸು ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 130 ಶಾಲೆಗಳಲ್ಲಿ 5 ತಿಂಗಳುಗಳಲ್ಲಿ ಆಯೋಜನೆಗೊಂಡಿದ್ದು, ಇದರಲ್ಲಿ 13,000 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಪ್ರತಿ ತಿಂಗಳು ತಲಾ ಒಂದು ಪರಿಕಲ್ಪನೆಯಡಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗಿದೆ. ಸ್ವಚ್ಛ ಮಂಗಳೂರು ರಾಯಭಾರಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸ್ವಚ್ಛತಾ ರಾಯಭಾರಿಗಳಾಗಿ ನಾಮನಿರ್ದೇಶನಗೊಳಿಸಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿ ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ಸ್ವಾಮಿ ಜಿತಕಾಮಾನಂದಜೀ ಅವರು ವಿವರಿಸಿದರು.

130 ಶಾಲೆಗಳ 13,000 ವಿದ್ಯಾರ್ಥಿಗಳು

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.