ಬಹುನಿರೀಕ್ಷಿತ ಚುನಾವಣೆಗೆ ತಾಲೀಮು ಆರಂಭ

ಮಂಗಳೂರು ಮಹಾನಗರ ಪಾಲಿಕೆ

Team Udayavani, Sep 16, 2019, 5:25 AM IST

1509MLR28-MCC

ಮಹಾನಗರ: ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆಗಳನ್ನು ನಡೆಸು ವಂತೆ ರಾಜ್ಯ ಚುನಾವಣಾ ಆಯೋಗವು ದ.ಕ. ಜಿಲ್ಲಾಧಿಕಾರಿ ಅವರನ್ನು ಕೋರಿರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆಗೆ ಪೂರ್ವಸಿದ್ಧತೆ ಆರಂಭವಾದಂತಾಗಿದೆ.

ನ್ಯಾಯಾಲಯದ ಪ್ರಕರಣಗಳು ಇತ್ಯರ್ಥವಾಗಿರುವ, 2019ರ ಡಿಸೆಂಬರ್‌ನಲ್ಲಿ ಅಧಿಕಾರ ಅವಧಿ ಮುಕ್ತಾಯ ವಾಗುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವ ಸಂಬಂಧ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ರಾಜ್ಯ ಚುನಾವಣ ಆಯೋಗವು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸೆ.13ರಂದು ಕೋರಿತ್ತು.

ಸಿದ್ಧತೆ ಆರಂಭ
ಮತದಾನ ಪಟ್ಟಿ, ಮತದಾನ ಕೇಂದ್ರ ಗಳ ಪಟ್ಟಿ ಸಿದ್ಧಪಡಿಸುವುದು, ಮತದಾನ ಸಿಬಂದಿ ನೇಮಕ, ಇವಿಎಂಗಳ ಸಂಗ್ರಹ ಮಾಡಿ ಸಿದ್ಧಪಡಿಸಿಕೊಳ್ಳುವುದು ಹಾಗೂ ಚುನಾವಣಾಧಿಕಾರಿಗಳ ನೇಮಕ ಮಾಡಲು ಪಟ್ಟಿ ತಯಾರಿಸಿ ಸಲ್ಲಿಸುವಂತೆ ರಾಜ್ಯ ಚುನಾವಣ ಆಯೋಗ ತಿಳಿಸಿದೆ. ಮಹಾ ನಗರ ಪಾಲಿಕೆಯ ಪ್ರತಿ 5 ವಾರ್ಡ್‌ಗೆ ಉಪವಿಭಾಗಾಧಿಕಾರಿ ಅಥವಾ ತತ್ಸಮಾನ ಹುದ್ದೆಯ ಓರ್ವ ಅಧಿಕಾರಿ ಯನ್ನು ನೇಮಕ ಮಾಡಲು ಪಟ್ಟಿ ತಯಾರಿಸಿ ಸಲ್ಲಿಸುವಂತೆ ಆಯೋಗ ಕೋರಿದೆ. ಈ ಎಲ್ಲ ಕಾರಣದಿಂದ ಜಿಲ್ಲಾಡಳಿತ ಇದಕ್ಕೆ ಸ್ಪಂದಿಸುವ ನೆಲೆಯಲ್ಲಿ ಎಲ್ಲ ಸಿದ್ಧತೆಗಳನ್ನು ಪ್ರಾರಂಭಿಸಿದೆ.
ಚುನಾವಣ ಆಯೋಗವು ಪಾಲಿಕೆ ಚುನಾವಣೆಗೆ ಮುನ್ಸೂಚನೆ ನೀಡು ತ್ತಿದ್ದಂತೆ ಇತ್ತ ರಾಜಕೀಯ ಪಕ್ಷಗಳಲ್ಲಿ ಲೆಕ್ಕಾ ಚಾರಗಳು ಶುರುವಾಗಿವೆ. ಈಗಾಗಲೇ ಪ್ರಕಟವಾಗಿರುವ ಮೀಸಲಾತಿ, ಅದರನ್ವಯ ಸ್ಪರ್ಧೆಯ ಅವಕಾಶದ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದ ವರಿಷ್ಠರಲ್ಲಿ ಆಕಾಂಕ್ಷಿಗಳು ಮಾತುಕತೆ ನಡೆಸಲು ಆರಂಭಿಸಿದ್ದಾರೆ.

ಈ ಮಧ್ಯೆ ಪ್ರಮುಖವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷದ ವರಿಷ್ಠರು ಈಗಾ ಗಲೇ ಕೆಲವು ಸುತ್ತಿನ ಆಂತರಿಕ ಸಭೆ ನಡೆಸಿ 60 ವಾರ್ಡ್‌ಗಳಲ್ಲಿ ಯಾರ ಸ್ಪರ್ಧೆಗೆ ಅವಕಾಶ ಎಂಬ ಕುರಿತಂತೆ ಪ್ರಾಥಮಿಕವಾಗಿ ಚರ್ಚಿಸಿದ್ದಾರೆ. ಆದರೆ ಯಾವುದೂ ಕೂಡ ಅಂತಿಮವಾಗಿಲ್ಲ. ಉಳಿದಂತೆ ಜೆಡಿಎಸ್‌, ಎಸ್‌ಡಿಪಿಐ ಕೂಡ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಆಸಕ್ತಿ ತೋರಿದೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತ, ಮಂಗಳೂರು ದಕ್ಷಿಣ-ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಹಾಗೂ ನಳಿನ್‌ ಕುಮಾರ್‌ ಕಟೀಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆ ಯಲ್ಲಿ ಈ ಬಾರಿ ಪಾಲಿಕೆ ಆಡಳಿತವನ್ನು ಬಿಜೆಪಿ ಪಡೆಯುವ ನೆಲೆಯಲ್ಲಿ ಸಿದ್ಧತೆ ನಡೆಸು ತ್ತಿದ್ದರೆ, ಕಾಂಗ್ರೆಸ್‌ ಸರಕಾರದ ಆಡಳಿತದಲ್ಲಿ ನಗರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿದ ಕೆಲ ವೊಂದು ವಿಚಾರಗಳನ್ನು ಮುಂದಿಟ್ಟು ಕಾಂಗ್ರೆಸ್‌ ಮತ್ತೆ ಪಾಲಿಕೆ ಆಡಳಿತವನ್ನು ತನ್ನ ಕೈವಶ ಮಾಡಲು ಪ್ರಯತ್ನಿಸುತ್ತಿದೆ.

ಮೀಸಲಾತಿ ವಿಚಾರ;
ಚುನಾವಣೆ ತಡವಾಗಲು ಕಾರಣ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ರಾಜ್ಯ ನಗರಾಭಿವೃದ್ಧಿ ಇಲಾಖೆಯು ಸಲ್ಲಿಸಿದ್ದ ಮಂಗಳೂರು ಪಾಲಿಕೆಯ ಅಂತಿಮ ಮೀಸಲು ಪಟ್ಟಿಯಲ್ಲಿ ಆವರ್ತನ ಪದ್ಧತಿ (ರೊಟೇಶನ್‌ ಪದ್ಧತಿ)ಯನ್ನು ಸರಿಯಾಗಿ ಅನುಸರಿಸಿಲ್ಲ ಎಂದು ಪ್ರಶ್ನಿಸಿ ಕೆಲವರು ರಾಜ್ಯ ಹೈಕೋರ್ಟ್‌ನಲ್ಲಿ ರಿಟ್‌ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ ಹೊಸ ಮೀಸಲು ಪಟ್ಟಿ ಸಲ್ಲಿಸುವಂತೆ ಸರಕಾರಕ್ಕೆ ಈ ಹಿಂದೆ ಸೂಚಿಸಿತ್ತು.

ಆದರೆ ಏಕಸದಸ್ಯ ಪೀಠದ ತೀರ್ಪಿನ ವಿರುದ್ಧ ರಾಜ್ಯ ಸರಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮ  ನವಿ ಸಲ್ಲಿಸಿತ್ತು. ಹೈಕೋರ್ಟ್‌ ದ್ವಿಸ ದಸ್ಯ ಪೀಠದಲ್ಲಿ ವಿಚಾರಣೆ ನಡೆದು ಮೇ 31ರಂದು ಇದನ್ನು ವಜಾ ಮಾಡಿತ್ತು. ಈ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೆಲವು ಅರ್ಜಿದಾರರು ಮತ್ತೆ ಹೈಕೋರ್ಟ್‌ ಕದ ತಟ್ಟಿದ್ದು, ವಿಚಾರಣೆ ಸದ್ಯ ನಡೆಯುತ್ತಿದೆ. ಈ ಮಧ್ಯೆ, ಕೆಲವರು ಮತ್ತೆ ನ್ಯಾಯಾ ಲಯ ದಲ್ಲಿ ಪ್ರತ್ಯೇ  ಕವಾಗಿ ಅರ್ಜಿ ಹಾಕಿ ಚುನಾ ವಣೆ ನಡೆ ಯ ದಿರುವುದನ್ನು ಪ್ರಶ್ನಿ ಸಿ ದ್ದರು. ಹೀಗಾಗಿ ನ. 15ರೊಳಗೆ ಚುನಾ ವಣಪ್ರಕ್ರಿಯೆ ಪೂರ್ಣ  ಗೊಳಿಸುವಂತೆ ಚುನಾ ವಣ ಆಯೋಗಕ್ಕೆ ಆ. 28ರಂದು ಹೈಕೋರ್ಟ್‌ಆದೇಶಿಸಿದೆ.

ಮಾ. 7ಕ್ಕೆ ಅಧಿಕಾರಾವಧಿ ಪೂರ್ಣ
ಮಹಾನಗರ ಪಾಲಿಕೆಯ ಅಧಿಕಾರಾವಧಿ 2019ರ ಮಾ. 7ಕ್ಕೆ ಅಂತ್ಯಗೊಂಡಿತ್ತು. ಆದರೆ ವಾರ್ಡ್‌ ಮೀಸಲಾತಿ ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ಚುನಾವಣೆ ನಡೆದಿರಲಿಲ್ಲ. ಮಹಾನಗರ ಪಾಲಿಕೆ ಒಟ್ಟು 60 ವಾರ್ಡ್‌ಗಳನ್ನು ಒಳಗೊಂಡಿದೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ 35, ಬಿಜೆಪಿ 20, ಜೆಡಿಎಸ್‌ 2, ಸಿಪಿಎಂ 1, ಎಸ್‌ಡಿಪಿಐ 1, ಪಕ್ಷೇತರ 1 ಸ್ಥಾನ ಪಡೆದಿದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.