ಎಂಟಿಬಿಯಿಂದ ಮತದಾರರಿಗೆ ವಿಶ್ವಾಸದ್ರೋಹ

Team Udayavani, Sep 17, 2019, 3:00 AM IST

mtbindas

ಹೊಸಕೋಟೆ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ ಮತದಾರರಿಗೆ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ವಿಶ್ವಾಸದ್ರೋಹ ಎಸಗಿದ್ದಾರೆ ಎಂದು ಶಾಸಕ ಬೈರತಿ ಸುರೇಶ್‌ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸ ಮಂದಿರದಲ್ಲಿ ನಡೆದ ಕಾಂಗ್ರೆಸ್‌ ಸ್ವಾಭಿಮಾನಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಶೀಘ್ರದಲ್ಲಿಯೇ ವಿಧಾನಸಭಾ ಉಪ ಚುನಾವಣೆ ನಡೆಯಲಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕರ್ತರಿಗೆ ಆತ್ಮವಿಶ್ವಾಸ ಮೂಡಿಸಲು ಸಮಾವೇಶ ನಡೆಸಲು ಪಕ್ಷದ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ ಎಂದರು.

ಉಪ ಚುನಾವಣೆಯಲ್ಲಿ ನನ್ನ ಪತ್ನಿ ಪದ್ಮಾವತಿ ಸ್ಪರ್ಧಿಸುತ್ತಾರೆ ಎಂದು ಸುಳ್ಳು ವದಂತಿ ಹಬ್ಬಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನವನ್ನು ವರಿಷ್ಠರು ಕೈಗೊಂಡಿಲ್ಲ. ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್‌ರಂತೆ ತಾವು ಯಾವುದೇ ಅಧಿಕಾರದ ಬಗ್ಗೆ ವ್ಯಾಮೋಹ ಹೊಂದಿಲ್ಲ.

ಹೈಕಮಾಂಡ್‌ ಸೂಚಿಸುವ ಅಭ್ಯರ್ಥಿಯ ಗೆಲುವಿಗಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಾಗುವುದು.ಅನರ್ಹ ಶಾಸಕರ ಬಗ್ಗೆ ಕ್ಷೇತ್ರದ ಮತದಾರರು ಬೇಸರಗೊಂಡಿದ್ದು, ವಿರೊಧಿ ಅಲೆ ನಿರ್ಮಾಣವಾಗಿದೆ. ಈ ಸನ್ನಿವೇಶವನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಲು ಶ್ರಮಿಸಬೇಕು ಎಂದು ಹೇಳಿದರು.

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮುನಿ ಶಾಮಣ್ಣ ಮಾತನಾಡಿ, ಸೆ.21ರಂದು ನಡೆಯಲಿರುವ ಸಮಾವೇಶದಲ್ಲಿ ರಾಜ್ಯ ಮಟ್ಟದ ಮುಖಂಡರುಗಳ ಭಾಗವಹಿಸುತ್ತಿದ್ದು, ಎಂಟಿಬಿ ವಿರುದ್ಧ ರಣ ಕಹಳೆ ಮೊಳಗಿಸಲು ತೀರ್ಮಾನಿಸಲಾಗಿದೆ. ತಾಲೂಕಿನ 10 ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಎಲ್ಲಾ ಗ್ರಾಮಗಳಲ್ಲೂ ಈ ಬಗ್ಗೆ ಸೂಕ್ತ ಮಾಹಿತಿ ನೀಡಿ ಪಕ್ಷ ಸಂಘಟಿಸಲು ಕಾರ್ಯಕರ್ತರು ಗಮನಹರಿಸಬೇಕು ಎಂದರು.

ಸಭೆಯಲ್ಲಿ ಮಾಜಿ ಸಭಾಪತಿ ಬಿ.ಎಲ್‌.ಶಂಕರ್‌, ಎಐಸಿಸಿ ಸದಸ್ಯೆ ಕಮಲಾಕ್ಷಿ ರಾಜಣ್ಣ, ಜಿಪಂ ಸದಸ್ಯ ವಿ.ಪ್ರಸಾದ್‌, ಮಾಜಿ ಅಧ್ಯಕ್ಷ ವಿ. ನಾರಾಯಣಸ್ವಾಮಿ, ಮುಖಂಡರಾದ ಚಿಕ್ಕಹುಲ್ಲೂರು ಬಚ್ಚೇಗೌಡ, ಸಗೀರ್‌ ಅಹಮದ್‌, ಕಾಂತರಾಜ್‌ ಮುಂತಾದವರು ಭಾಗವಹಿಸಿದ್ದರು.

ಎಂಟಿಬಿ ನಾಗರಾಜ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾಗಿದ್ದರೂ, ರಾಜ್ಯ ಬಿಜೆಪಿ ಸರಕಾರದ ಬೆಂಬಲದಿಂದ ಪೊಲೀಸ್‌ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಬೆದರಿಕೆ ಒಡ್ಡುತ್ತಿದ್ದಾರೆ. ಇಂತಹ ಕೃತ್ಯಗಳಿಗೆ ಹೆದರದೆ ಕಾರ್ಯಕರ್ತರು ಧೈರ್ಯವಾಗಿ ಪಕ್ಷದ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು.
-ಕೃಷ್ಣಬೈರೇಗೌಡ, ಮಾಜಿ ಸಚಿವ

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.