ಹಾಲಿನ ಸಹಾಯಧನ 1 ರೂ. ಏರಿಕೆ

Team Udayavani, Sep 17, 2019, 5:51 AM IST

milk

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಹಾಲು ಉತ್ಪಾದಕರಿಗೆ 6 ರೂ. ಸಹಾಯಧನ ನೀಡಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪರಿಷತ್‌ ಸಭೆ ಒಪ್ಪಿಗೆ ನೀಡಿದೆ. ಸದ್ಯ ಎಲ್ಲ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 5 ರೂ. ಸಹಾಯಧನ ನೀಡಲಾಗುತ್ತಿದೆ.

ಪರಿಶಿಷ್ಟ ಜಾತಿ, ಪಂಗಡ-ಗಿರಿಜನ ಉಪಯೋಜನೆ (ಎಸ್‌ಸಿಪಿ- ಟಿಎಸ್‌ಪಿ) ಸಂಬಂಧ ರಾಜ್ಯ ಪರಿಷತ್‌ ಅಧ್ಯಕ್ಷ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಸಭೆ ನಡೆಯಿತು. ಆ ಬಳಿಕ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಹಿಂದುಳಿದ ವರ್ಗಗಳ ಹಾಲು ಉತ್ಪಾದಕರನ್ನು ಉತ್ತೇಜಿಸಲು ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದರು.

ಕೃಷಿಗೂ ಸಬ್ಸಿಡಿ
ಕೃಷಿ ಯಂತ್ರೋಪಕರಣ ಖರೀದಿ, ಇನ್ನಿತರ ಹನಿ ನೀರಾವರಿ ವ್ಯವಸ್ಥೆಗೆ ಶೇ.90ರಷ್ಟು ಸಬ್ಸಿಡಿ ನೀಡಲು ತೀರ್ಮಾನಿಸಲಾಗಿದೆ. ಪಶುಸಂಗೋಪನಾ ಇಲಾಖೆಯಡಿ ಹಸು, ಮೇಕೆ, ಕುರಿ ಸಾಕಣೆ ಯೋಜನೆಯಡಿ ಪ್ರತಿ
ಯೂನಿಟ್‌ಗೆ ಶೇ. 90ರಷ್ಟು ಸಹಾಯಧನ ನೀಡಲಾಗುವುದು. ರೇಷ್ಮೆ ಹುಳು ಸಾಕಣೆದಾರರು ಶೆಡ್‌ ನಿರ್ಮಾಣಕ್ಕೆ ಶೇ.90ರಷ್ಟು ಸಬ್ಸಿಡಿ, ತೋಟಗಾರಿಕೆ ಇಲಾಖೆಯಡಿ ಹನಿ ನೀರಾವರಿ ಹಾಗೂ ಪಾಲಿಹೌಸ್‌ ನಿರ್ಮಾಣಕ್ಕೆ ಶೇ. 90 ಸಬ್ಸಿಡಿ ನೀಡಲು ತೀರ್ಮಾನಿಸಲಾಗಿದೆ ಎಂದರು.

ಮಹಿಳೆಯರಿಗೆ 10 ಸಾವಿರ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ “ಬಡವರ ಬಂಧು’ ಯೋಜನೆ ಮಾದರಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಬಡ ಮಹಿಳೆಯರಿಗೆ 10,000 ರೂ. ಸಾಲ ಸೌಲಭ್ಯ ಕಲ್ಪಿಸುವ ವಿನೂತನ ಯೋಜನೆ ಜಾರಿಗೊಳಿಸಲಾಗುವುದು. ಪರಿಶಿಷ್ಟ ಜಾತಿ, ಪಂಗಡದವರ ಸ್ವಸಹಾಯ ಸಂಘಗಳಿಗೆ 2 ಲಕ್ಷ ರೂ.ನಿಂದ 5 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗುವುದು ಎಂದು ಕಾರ ಜೋ ಳ ಮಾಹಿತಿ ನೀಡಿದರು.

ಕ್ರಿಯಾಯೋಜನೆಗೆ ಅನುಮೋದನೆ
ಪರಿಶಿಷ್ಟ ಜಾತಿ, ಪಂಗಡದವರ ಕಲ್ಯಾಣಕ್ಕಾಗಿ ಪ್ರಸಕ್ತ ವರ್ಷದಲ್ಲಿ ಒಟ್ಟು 30,444 ಕೋಟಿ ರೂ. ವೆಚ್ಚ ಮಾಡುವ ಕ್ರಿಯಾ ಯೋಜನೆಗೆ ಪ.ಜಾ., ಪಂಗಡದ ಅಭಿವೃದ್ಧಿ ಸಂಬಂಧ ರಚನೆಯಾಗಿರುವ ರಾಜ್ಯ ಪರಿಷತ್‌ ಅನುಮೋದನೆ ನೀಡಿದೆ. ಸಭೆಯ ಅನಂತರ ಮಾತನಾಡಿದ ಯಡಿಯೂರಪ್ಪ, ಪ.ಜಾ., ಪಂಗಡದವರ ಸರ್ವಾಂಗೀಣ ಅಭಿವೃದ್ಧಿಗಾಗಿ ಎಸ್‌ಸಿಪಿ- ಟಿಎಸ್‌ಪಿ ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 30,444 ಕೋಟಿ ರೂ. ವೆಚ್ಚ ಮಾಡುವ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕೆ 21,602 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ 8,842 ಕೋಟಿ ರೂ. ವಿನಿಯೋಗಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.