ನೆರೆ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಿ

Team Udayavani, Sep 17, 2019, 11:45 AM IST

gadaga-tdy-1

ಗದಗ: ನೆರೆ ಸಂತ್ರಸ್ತರಿಗೆ ಶಾಶ್ವತ ಸೂರು ಹಾಗೂ ಸರಕಾರಿ ನೌಕರಿ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಗದಗ: ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಾಕಷ್ಟು ನಷ್ಟವಾಗಿದೆ. ರೈತರು ಬೆಳೆದ ಸಾವಿರಾರೂ ಹೆಕ್ಟೇರ್‌ ಬೆಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ರೈತರಿಗೆ ಬೆಳೆ ಪರಿಹಾರದೊಂದಿಗೆ ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಡಬೇಕು ಎಂದು ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ ಹೋರಾಟ ಸಮಿತಿ ಒತ್ತಾಯಿಸಿದೆ.

ಈ ಕುರಿತು ಸಂಘಟನೆ ರಾಜ್ಯಾಧ್ಯಕ್ಷ ಎಸ್‌.ಎಸ್‌. ರಡ್ಡೇರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಇತ್ತೀಚೆಗೆ ಉಂಟಾದ ಪ್ರವಾಹದಿಂದ ಸಾಕಷ್ಟು ಮನೆಗಳು ಕೊಚ್ಚಿ ಹೋಗಿದ್ದು, ಲಕ್ಷಾಂತರ ಜನರ ಬದುಕು ಬೀದಿಗೆ ಬಂದಿದೆ. ಅವರ ವಾಸಕ್ಕಾಗಿ ತಾತ್ಕಾಲಿಕ ಶೆಡ್‌ ನಿರ್ಮಿಸುವುದರೊಂದಿಗೆ ಶಾಶ್ವತ ಮನೆ ಕಲ್ಪಿಸಬೇಕು. ಜೊತೆಗೆ ಸಂತ್ರಸ್ತ ಕುಟುಂಬದ ಓರ್ವ ಸದಸ್ಯರಿಗೆ ಸರಕಾರಿ ಉದ್ಯೋಗ ಒದಗಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಎಸ್‌.ಎನ್‌. ಪಾಟೀಲ್ ಮಾತನಾಡಿ, ನೆರೆ ಹಾವಳಿಗೆ ತುತ್ತಾದ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳ ಭಯ ಶುರುವಾಗಿದೆ. ನೆರೆ ಪೀಡಿತ ಗ್ರಾಮಗಳಲ್ಲಿ ಸ್ವಚ್ಛತೆಯೊಂದಿಗೆ ವೈದ್ಯಕೀಯ ಸೇವೆ ಚುರುಕುಗೊಳಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

ಸಾಮಾಜಿಕ ಕಾರ್ಯಕರ್ತ ನಿಸಾರ್‌ ಅಹ್ಮದ್‌ ಮಾತನಾಡಿ, ನೆರೆಯಿಂದ ಮನೆ ಕಳೆದುಕೊಂಡವರು ಸದ್ಯಕ್ಕೆ ನೆರೆ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಆದರೆ, ತಿಂಗಳು ಕಳೆದರೂ ತಾತ್ಕಾಲಿಕ ಶೆಡ್‌ ದೊರೆಯದೇ ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದಾರೆ. ಈ ಕುರಿತು ಸರಕಾರ ತಕ್ಷಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸಂಚಾಲಕ ರಾಜಶೇಖರ ಕಾತರಕಿ, ರಾಜ್ಯ ರೈತ ಘಟಕದ ಬಸವರಾಜ ಉಪನಾಳ, ಅಲ್ಪಸಂಖ್ಯಾತರ ಘಟಕ ರಾಜ್ಯಾಧ್ಯಕ್ಷ ಎಂ.ಪಿ. ಮುಳಗುಂದ, ಜಿಲ್ಲಾಧ್ಯಕ್ಷ ಎಂ.ಎಸ್‌. ರಡ್ಡೇರ, ಅಕ್ಬರಬೇಗ, ಎಸ್‌.ಸಿ., ಎಸ್‌.ಟಿ. ಅಧ್ಯಕ್ಷ ಲಕ್ಷ್ಮಣ ಹಳ್ಳಿಕೇರಿ, ಗುರುಸಿದ್ಧಯ್ಯ ಹಳ್ಳಿಕೇರಿಮಠ, ಮಲ್ಲಯ್ಯ ಮುಧೋಳಮಠ, ಕೆ.ಎಚ್. ಗದ್ವಾಲ, ಹಜರಾತಸಾಬ ಮುಳಗುಂದ, ಗಂಗಾಧರ ಗಂಗಾವತಿ, ಹುಸೇನಬಾಬ ಬಾವಿಕಟ್ಟಿ, ಶಿವಾನಂದ ಶಿವಪುರ, ಬಸವರಾಜ ಬಳ್ಳಾರಿ, ಮುಕ್ತುಮ ಶಿರೋಳ ಇದ್ದರು.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.