ಕಲ್ಲೊಡ್ಡು ಯೋಜನೆ ವಿರೋಧಿಸಿ ಬೃಹತ್‌ ಪ್ರತಿಭಟನೆ


Team Udayavani, Sep 17, 2019, 2:11 PM IST

cm-tdy-1

ಸಾಗರ: ಕಲ್ಲೊಡ್ಡು ಹಳ್ಳ ಹೊಸಕೆರೆ ಯೋಜನೆ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ಕಲ್ಲೊಡ್ಡು ಹಳ್ಳ ಹೊಸಕೆರೆ ನಿರ್ಮಾಣ ವಿರೋಧಿ ಸಮಿತಿ ಸದಸ್ಯರು ಪ್ರತಿಭಟಿಸಿದರು.

ಸಾಗರ: ತಾಲೂಕಿನ ಬರೂರು ಗ್ರಾಪಂ ವ್ಯಾಪ್ತಿಯ ಕಲ್ಲೊಡ್ಡು ಹಳ್ಳ ಹೊಸಕೆರೆ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಖಂಡಿಸಿ ಸೋಮವಾರ ಕಲ್ಲೊಡ್ಡು ಹಳ್ಳ ಹೊಸಕೆರೆ ನಿರ್ಮಾಣ ವಿರೋಧಿ ಸಮಿತಿ ಹಾಗೂ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು.

ಯೋಜನೆ ಕೈ ಬಿಡುವಂತೆ ಗ್ರಾಪಂ ಅಧ್ಯಕ್ಷರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಯೋಜನೆಗೆ ಆಗಸ್ಟ್‌ ಒಂದರಂದು ರಾಜ್ಯ ಆಡಳಿತಾತ್ಮಕ ಅನುಮೋದನೆ ನೀಡಿದೆ. ಯೋಜನೆ ಅನ್ವಯ ಶಿಕಾರಿಪುರ, ಸೊರಬ ತಾಲೂಕಿನ 16 ಹಳ್ಳಿಗಳಲ್ಲಿ 1,950 ಹೆಕ್ಟೇರ್‌ ಬೇಸಾಯ ಭೂಮಿಗೆ ನೀರಾವರಿ ಕಲ್ಪಿಸುವುದು ಒಳಗೊಂಡಿದೆ. ಒಂದು ಸಾವಿರ ಮಿಲಿಮೀಟರ್‌ಗಿಂತ ಹೆಚ್ಚು ವಾರ್ಷಿಕ ಮಳೆಯಾಗುವ ಈ ಪ್ರದೇಶದಲ್ಲಿ ಯೋಜನೆಯಿಂದ 0.64 ಟಿಎಂಸಿ ನೀರನ್ನು ಯೋಜಿತ ಡ್ಯಾಂನಲ್ಲಿ ಸಂಗ್ರಹಿಸಿಡುವ ಉದ್ದೇಶ ಯೋಜನೆ ಒಳಗೊಂಡಿದೆ. ಆದರೆ ವಾಸ್ತವವಾಗಿ ತಾಲೂಕಿನ ಯಾವ ಹಳ್ಳಿಗಳಿಗೂ ಈ ಯೋಜನೆಯಿಂದ ಉಪಯೋಗವಾಗುವುದಿಲ್ಲ. ವಾರ್ಷಿಕವಾಗಿ ಒಂದು ಸಾವಿರ ಮಿಲಿಮೀಟರ್‌ ಮಳೆಯಾಗುತ್ತದೆ ಎಂದು ಹೇಳಿರುವುದೇ ಅವೈಜ್ಞಾನಿಕವಾಗಿದೆ ಎಂದು ಪ್ರತಿಭಟನಾನಿರತರು ದೂರಿದರು.

ಡ್ಯಾಂ ನಿರ್ಮಾಣದಿಂದ ಬರೂರು ಗ್ರಾಪಂ ವ್ಯಾಪ್ತಿಯ ಸುಮಾರು 93.53 ಹೆಕ್ಟೇರ್‌ ಕೃಷಿ ಭೂಮಿ ಭೂಸ್ವಾಧೀನ ಮಾಡಿಕೊಳ್ಳಲು ಅವಕಾಶ ಮಾಡಿಕೊಳ್ಳಲಾಗಿದೆ. ಅರಣ್ಯ ಭೂಮಿ 79 ಹೆಕ್ಟೇರ್‌ ಮಾತ್ರ ಮುಳುಗಡೆಯಾಗುತ್ತದೆ ಎಂದು ತಿಳಿಸಲಾಗಿದೆ. ಡ್ಯಾಂನ ಎತ್ತರ 22.53 ಮೀಟರ್‌ ಎಂದು ಹೇಳಲಾಗಿದ್ದು, ಎಷ್ಟು ಹಳ್ಳಿ ಮುಳುಗಡೆಯಾಗುತ್ತದೆ ಎಂದು ವರದಿಯಲ್ಲಿ ಉಲ್ಲೇಖೀಸಿಲ್ಲ. ಯೋಜನೆಯಿಂದ ಬರೂರು ಗ್ರಾಪಂ ವ್ಯಾಪ್ತಿಯ 10ಕ್ಕೂ ಹೆಚ್ಚು ಹಳ್ಳಿಗಳು ಮುಳುಗಡೆಯಾಗುತ್ತಿದ್ದು, 1500ಕ್ಕೂ ಹೆಚ್ಚು ಕೃಷಿ ಬಡ ರೈತ ಕುಟುಂಬಗಳು ಸಂತ್ರಸ್ತರಾಗುವ ಸಾಧ್ಯತೆ ಇದೆ. ಗ್ರಾಪಂ ವ್ಯಾಪ್ತಿಯಲ್ಲಿ ಶರಾವತಿ ನದಿಗೆ ಮಡೆನೂರು, ಲಿಂಗನಮಕ್ಕಿ ಆಣೆಕಟ್ಟು ನಿರ್ಮಾಣ ಸಂದರ್ಭದಲ್ಲಿ ಸಂತ್ರಸ್ತರಾದ 200 ಕುಟುಂಬವಿದ್ದು, ಈತನಕ ಅವರಿಗೆ ಪುನರ್ವಸತಿ ಸೌಲಭ್ಯ ಕಲ್ಪಿಸಿಲ್ಲ. ಈಗ ಈ ಯೋಜನೆ ಜಾರಿಗೆಯಾದರೆ ಕುಟುಂಬಗಳು ಮತ್ತೂಮ್ಮೆ ಮುಳುಗಡೆಯಾಗುವ ಭೀತಿ ಎದುರಾಗಿದೆ ಎಂದು ಪ್ರತಿಭಟನಾನಿರತರು ಹೇಳಿದರು.

ಯೋಜಿತ ಪ್ರದೇಶದಲ್ಲಿ ಸುಮಾರು 1030 ಎಕರೆ ಖುಷ್ಕಿ ಬೆಳೆ, 2000 ಎಕರೆ ಭತ್ತ, ಕಬ್ಬು ಇತ್ಯಾದಿ ತರಿ ಬೆಳೆ, 200 ಎಕರೆಗೂ ಹೆಚ್ಚು ಅಡಕೆ ತೋಟವಿದೆ. ಸಾವಿರಾರು ಎಕರೆ ಜಾಗದಲ್ಲಿ ಬಗರ್‌ಹುಕುಂ ಭೂಮಿಯ ಸಾಗುವಳಿದಾರರು ಬದುಕು ಸಾಗಿಸುತ್ತಿದ್ದಾರೆ. ಸುಮಾರು 6 ಸಾವಿರ ಎಕರೆ ಅರಣ್ಯವಿದೆ. ಆದರೆ ಯೋಜನೆ ರೂಪಿಸುವಾಗ ಸತ್ಯವನ್ನು ಮರೆಮಾಚುವ ಪ್ರಯತ್ನ ನಡೆದಿದೆ. ಜೀವ ವೈವಿಧ್ಯತೆ ನಾಶ, ಅರಣ್ಯನಾಶದ ಜತೆಗೆ ಗ್ರಾಮೀಣ ಜನರ ಬದುಕಿಗೆ ಮಾರಕವಾಗಿರುವ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳಬಾರದು. ಡಿಪಿಆರ್‌ನಲ್ಲಿ ತಿಳಿಸಿರುವಂತೆ ಇಲ್ಲಿ ಯಾವುದೇ ಜಲಮೂಲವಿಲ್ಲ. ಮಳೆಗಾಲದಲ್ಲಿ ಸುರಿಯುವ ಮಳೆನೀರಿನಿಂದ ಹರಿಯುವ ಕೆರೆಯ ನೀರನ್ನು ನಂಬಿಕೊಂಡು ಯೋಜನೆ ರೂಪಿಸಿರುವುದು ಸಂಪೂರ್ಣ ಅವೈಜ್ಞಾನಿಕವಾಗಿದೆ. ತಕ್ಷಣ ಯೋಜನೆ ಕೈ ಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಮಿತಿ ಮತ್ತು ಗ್ರಾಮಸ್ಥರು ಇನ್ನಷ್ಟು ಉಗ್ರ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಹೋರಾಟ ಸಮಿತಿಯ ಗೌರವಾಧ್ಯಕ್ಷ ವೀರೇಶ್‌ ಬರೂರು, ಸಂಚಾಲಕರಾದ ಶಿವಪ್ಪ, ಟಾಕಪ್ಪ, ಎಂ.ಸಿ.ಪರಶುರಾಮಪ್ಪ, ಗ್ರಾಪಂ ಅಧ್ಯಕ್ಷೆ ಕುಸುಮ ಪಕೀರಪ್ಪ, ಉಪಾಧ್ಯಕ್ಷ ವೀರಪ್ಪ ಗೌಡ, ತಾಪಂ ಸದಸ್ಯರಾದ ಸವಿತಾ ನಟರಾಜ್‌, ಹೇಮಾ ರಾಜಪ್ಪ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.