ಮೋದಿ ಜನ್ಮದಿನ: ರೈಲು ನಿಲ್ದಾಣಗಳಲ್ಲಿ ಸ್ವಚ್ಛತಾ ಅಭಿಯಾನ


Team Udayavani, Sep 18, 2019, 3:00 AM IST

modi-janma

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ನಾಗರಿಕರಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಅಭಿಯಾನಕ್ಕೆ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ ಕುಮಾರ್‌ ಸಿಂಗ್‌ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನೈಋತ್ಯ ರೈಲ್ವೆ ವ್ಯಾಪ್ತಿಯ ಮೈಸೂರು ಹುಬ್ಬಳ್ಳಿ, ಬೆಂಗಳೂರು ವಿಭಾಗಗಳ ನಿಲ್ದಾಣದಲ್ಲಿ ಪ್ಲಾಸ್ಟಿಕ್‌ ಮುಕ್ತ ನಿಲ್ದಾಣವನ್ನಾಗಿಸುವುದು ಹಾಗೂ ಜನರಿಗೆ ಸ್ವಚ್ಛತಾ ಅರಿವು ಮೂಡಿಸುವ ಕಾರ್ಯಕ್ರಮ ಆರಂಭಿಸಲಾಗಿದೆ. ನಿಲ್ದಾಣಗಳಲ್ಲಿ ಸ್ವಚ್ಛತೆ ಮತ್ತು ಆರೋಗ್ಯ ಕಾಪಾಡುವ ವಿಷಯದಲ್ಲಿ 68 ವಿಭಾಗಗಲ್ಲಿ ಮೈಸೂರು 4ನೇ ಸ್ಥಾನದಲ್ಲಿದೆ.

ಮೈಸೂರು ದೇಶದಲ್ಲಿಯೇ ಸ್ವಚ್ಛತಾ ನಗರ ಎಂಬ ಪ್ರಶಸ್ತಿಯನ್ನು ಈಗಾಗಲೇ ಪಡೆದುಕೊಂಡಿದೆ. ಅಲ್ಲದೆ ನೈಋತ್ಯ ರೈಲ್ವೆಯ ಮೂರು ವಿಭಾಗಗಳಲ್ಲಿ ಮೈಸೂರು ವಿಭಾಗ ಸ್ವಚ್ಛತೆ ಕಾಪಾಡುವಲ್ಲಿ ಮುಂದಿದೆ. ಹೀಗಾಗಿ ಇಲ್ಲಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಲು ಸಾಧ್ಯವಿದೆ. ಆದ್ದರಿಂದ ಈ ಅಭಿಯಾನವನ್ನು ಮೈಸೂರಿನಿಂದಲೇ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಅಭಿಯಾನದ ಅಂಗವಾಗಿ ವಿಭಾಗದಲ್ಲಿರುವ ನಿಲ್ದಾಣಗಳಲ್ಲಿ ಎನ್‌ಜಿಒ, ಚಾರಿಟೆಬಲ್‌ ಇನ್‌ಸ್ಟಿಟ್ಯೂಷನ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌ ಮತ್ತು ಸಿಬ್ಬಂದಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಿದ್ದಾರೆ. ಬಳಿಕ ನಿಲ್ದಾಣದಲ್ಲಿ ಸ್ವಚ್ಛತೆ ಕುರಿತು ಕಾರ್ಯಾಗಾರ ನಡೆಯಲಿದೆ ಎಂದರು.

ಬಯೋ ಟಾಯ್ಲೆಟ್‌: ಸೆ.18 ರಂದು ಬಯೋ ಟಾಯ್ಲೆಟ್‌ ಬಳಕೆ ಮಾಡುವಂತೆ ಅರಿವು ಮೂಡಿಸುವುದು, ರೈಲ್ವೆ ಇಲಾಖೆಯ ಶಾಲೆ, ಕಾಲೋನಿ, ಆಸ್ಪತ್ರೆ, ಕಚೇರಿಗಳು ಅತಿಥಿಗೃಹ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಹಾಕ ಬೇಡಿ ಎಂಬ ಸೂಚನೆ ಫ‌ಲಕ ಅಳವಡಿಸಲಾಗುವುದು. ಸೆ.19 ರಂದು ಸ್ವಚ್ಛ ನಿಲ್ದಾಣ ಪರಿಕಲ್ಪನೆಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗುವುದು. ಇದೇ ರೀತಿ ಸ್ವಚ್ಛ ಆಹಾರ, ಸ್ವಚ್ಛ ಪರಿಸರ, ಸ್ವಚ್ಛ ರೈಲು ಸ್ವಚ್ಛ ಕಚೇರಿ, ಸ್ವಚ್ಛ ನೀರು ಬಳಕೆ, ಸ್ವಚ್ಛ ಶೌಚಾಲಯ ಕಾರ್ಯಕ್ರಮಗಳನ್ನು ಸೆ. 16ರಿಂದ 14 ದಿನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮೈಸೂರು ನಿಲ್ದಾಣದ ಸುಂದರೀಕರಣ ಕಾಮಗಾರಿಯು ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಬೇರೆ ವಿಭಾಗಗಳಿಗೆ ಹೋಲಿಕೆ ಮಾಡಿದರೆ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರಗತಿಯಲ್ಲಿ ನಡೆಯುತ್ತಿವೆ ಎಂದು ಶ್ಲಾ ಸಿದರು. ಇದಕ್ಕೂ ಮುನ್ನ ರೈಲ್ವೆ ಸಿಬ್ಬಂದಿ ಹಾಗೂ ನೆರೆದಿದ್ದ ನಾಗರಿಕರು ಸ್ವಚ್ಛತೆ ಪ್ರತಿಜ್ಞೆ ಸ್ವೀಕರಿಸಿದರು. ಡಿಆರ್‌ಎಂ ಅಪರ್ಣ ಗರ್ಗ್‌ ಇತರರಿದ್ದರು.

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.