ಕ್ಯಾನ್ಸರ್‌ ಪೀಡಿತರಿಗಾಗಿ ಕೇಶದಾನ ಮಾಡಿದ ಕಾಲೇಜು ವಿದ್ಯಾರ್ಥಿನಿ !

ಕಿಮೋಥೆರಪಿಗೆ ಒಳಗಾದ ಮಕ್ಕಳನ್ನು ನೋಡಿ ಈ ನಿರ್ಧಾರ

Team Udayavani, Sep 20, 2019, 5:24 AM IST

cancer-treatment

ಕೇಶದಾನದ ಮೊದಲು . ಅನಂತರ.

ಮಹಾನಗರ: ಹೆಣ್ಣಿಗೆ ಕೇಶವೇ ಭೂಷಣ. ನೀಲ ಕೇಶಕ್ಕಾಗಿ ಹೆಣ್ಮಕ್ಕಳು ಅದೆಷ್ಟು ಕಷ್ಟ ಪಡುತ್ತಾರೆ. ವೈದ್ಯರ ಸಲಹೆ ಸೇರಿದಂತೆ ಇದ್ದ ಎಣ್ಣೆಗಳನ್ನು ಬಳಸಿ ಕೇಶದ ಆರೈಕೆಗೆ ಮುಂದಾಗುತ್ತಾರೆ. ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ನೀಲ ಕೇಶವನ್ನು ಕೇಶರಹಿತರ ಮುಗದಲ್ಲಿ ನಗು ಕಾಣಲು ದಾನ ಮಾಡಿದ್ದಾಳೆ.

ನಗರದ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಬಿಎಎಲ್‌ಎಲ್‌ಬಿ ಕಲಿಯುತ್ತಿರುವ ಪವಿತ್ರಾ ಶೆಟ್ಯೆ ತನ್ನ ಕೇಶವನ್ನು ಕ್ಯಾನ್ಸರ್‌ ಪೀಡಿತ ಮಕ್ಕಳ ಮುಖದಲ್ಲಿ ನಗು ಕಾಣುವ ಸಲುವಾಗಿ ದಾನ ಮಾಡಿದ್ದಾಳೆ. ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರ್‌ ನವರಾದ ಪವಿತ್ರಾ ಕಾನೂನು ಪದವಿ ಪಡೆಯುವ ಉದ್ದೇಶದಿಂದ ನಗರಕ್ಕೆ ಆಗಮಿಸಿದ್ದಾರೆ. ಅನಿವಾರ್ಯ ಕಾರಣದಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದ ಪವಿತ್ರಾ ಕಿಮೋಥೆರಪಿಗೆ ಒಳಗಾದ ಮಕ್ಕಳನ್ನು ನೋಡಿ ಕೇಶದಾನ ಮಾಡುವ ನಿರ್ಧಾರ ಮಾಡಿದ್ದಾರೆ.

ಅಕ್ಕ ನಿಮ್ಮ ಕೂದಲು ಸುಂದರವಾಗಿದೆ!
ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಪವಿತ್ರಾ ನಗರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ಕೆಲವು ಹೊತ್ತು ಹೊರಭಾಗದಲ್ಲಿ ಕಾಯುವಂತೆ ತಿಳಿಸಿದರಂತೆ. ಹಾಗೆ ಹೊರಭಾಗದಲ್ಲಿ ಕುಳಿತಿದ್ದಾಗ ಕಿಮೋ ಥೆರಪಿಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಪವಿತ್ರಾ ಅವರನ್ನು ನೋಡಿ ನಿಮ್ಮ ಕೂದಲು ತುಂಬಾ ಚೆನ್ನಾಗಿದೆ ಎಂದು ಮುಟ್ಟಿದ್ದಾಗ ಅವರ ಮುಖದಲ್ಲಿ ಕಂಡ ಅಸಹಾಯಕತೆಯಿಂದ ಬೇಸರಗೊಂಡ ಪವಿತ್ರಾ ಮಕ್ಕಳ ಮುಂದೆ ನಸು ನಗುತ್ತಾ ವೈದ್ಯರನ್ನು ಭೇಟಿಯಾಗಿ ವಾಪಾಸು ಬಂದಿದ್ದರು. ಬಳಿಕ ಕ್ಯಾನ್ಸರ್‌ ಸೇವಾ ಸಂಸ್ಥೆಯೊಂದನ್ನು ಸಂಪರ್ಕಿಸಿ ಕೇಶದಾನ ಮಾಡುವ ಬಗ್ಗೆ ಚರ್ಚಿಸಿ ಕಳೆದ ವಾರ ತಮ್ಮ 18 ಇಂಚು ಉದ್ದದ ಕೂದಲನ್ನು ದಾನ ಮಾಡಿದ್ದಾರೆ.

ನಗರದ ಅನೇಕ ವಿದ್ಯಾರ್ಥಿಗಳಿಂದ ಕೇಶದಾನ
ಪವಿತ್ರಾ ಅವರಿಗಿಂತ ಮುನ್ನ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಹೆಣ್ಮಕ್ಕಳು ಕ್ಯಾನ್ಸರ್‌ ಪೀಡಿತರಿಗಾಗಿ ಕೇಶದಾನ ಮಾಡಿದ್ದಾರೆ. ಕ್ಯಾನ್ಸರ್‌ ಪೀಡಿತರಿಗಾಗಿ ಕೇಶ ಸಂಗ್ರಹಿಸುವ ಕಾಯಕದಲ್ಲಿ ತೊಡಗಿಕೊಂಡಿರುವ ಸಂಸ್ಥೆಯ ಮೂಲಕ ಕೇಶದಾನ ಮಾಡ ಲಾಗಿದೆ. ಕ್ಯಾನ್ಸರ್‌ ಪೀಡಿತರ ಚಿಕಿತ್ಸೆಗಾಗಿ ಕಿಮೋ ಥೆರಪಿ ಮಾಡಿದಾಗ ಅವರು ಕೇಶವನ್ನು ಕಳೆದುಕೊಳ್ಳುತಾರೆ. ಈ ಸಂದರ್ಭ ಹೆಚ್ಚಾಗಿ ಮಹಿಳೆಯರು ಮಾನಸಿಕವಾಗಿ ಕುಗ್ಗಿಹೋಗುತ್ತಾರೆ. ಅವರಿ ಗಾಗಿಯೇ ಕೃತಕ ಕೂದಲನ್ನು ತಯಾರಿಸಿ ಕೊಡಲಾಗುತ್ತದೆ. ಅದಕ್ಕಾಗಿ ಕೇಶದಾನದ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಸಂಘ ಸಂಸ್ಥೆಗಳು ಕಾರ್ಯಚರಿಸುತ್ತಿವೆ.

ಕ್ಯಾನ್ಸರ್‌ ಪೀಡಿತರ ಮುಖದ ನಗುವಿನಿಂದ ಸಂತೃಪ್ತಿ
ಕೇಶ ಎಲ್ಲ ಹೆಣ್ಮಕ್ಕಳ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಆದರೆ ನನಗೆ ಆ ಮಕ್ಕಳನ್ನು ನೋಡಿ ನನ್ನ ಸೌಂದರ್ಯಕ್ಕಿಂತ ಅವರ ಮುಖದ ನಗುವೇ ಮುಖ್ಯ ಎಂದೆನಿಸಿತು. ತಾಯಿಯೊಂದಿಗೆ ಮಾತನಾಡಿ ಕೇಶದಾನ ಮಾಡಿದೆ. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಬೇಕಾಗಿದೆ.
– ಪವಿತ್ರಾ ಶೆಟ್ಯೆ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.