ಹೌಡಿ ಮೋದಿ: ಮಹತ್ವದ ಘೋಷಣೆ?
Team Udayavani, Sep 20, 2019, 5:33 AM IST
ವಾಷಿಂಗ್ಟನ್: ಅಮೆರಿಕದ ಹೂಸ್ಟನ್ನಲ್ಲಿ 22 ರಂದು ನಡೆಯಲಿರುವ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಮಹತ್ವದ ಘೋಷಣೆ ಮಾಡುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇಲ್ಲಿ ವಿಶೇಷ ಘೋಷಣೆ ಮಾಡುವ ಸಾಧ್ಯತೆ ಇದೆಯೇ ಎಂದು ಪತ್ರಕರ್ತರು ಟ್ರಂಪ್ ಬಳಿ ಕೇಳಿದಾಗ, ಇರಬಹುದು. ಯಾಕೆಂದರೆ ಪ್ರಧಾನಿ ಮೋದಿ ಜೊತೆಗೆ ನಾನು ಉತ್ತಮ ಸಂಬಂಧ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಆದರೆ ಯಾವ ರೀತಿಯ ಘೋಷಣೆ ಎಂಬ ಬಗ್ಗೆ ಅವರು ಏನನ್ನೂ ಹೇಳಿಲ್ಲ. ಮೂಲಗಳ ಪ್ರಕಾರ ಭಾರತ ಮತ್ತು ಪಾಕಿಸ್ಥಾನವು ವ್ಯಾಪಾರ ಒಪ್ಪಂದಕ್ಕೆ ಬರುವ ಕುರಿತು ಕಳೆದ ಕೆಲವು ದಿನಗಳಿಂದ ಮಾತುಕತೆ ನಡೆಸಿವೆ. ಹೀಗಾಗಿ, ಈ ಬಗ್ಗೆ ಅಂತಿಮ ಘೋಷಣೆ ಮಾಡುವ ಸಾಧ್ಯತೆಯಿದೆ.
ಜಿಎಸ್ಪಿ ಮಾನದಂಡಕ್ಕೆ ಅನುಗುಣವಾಗಿದೆ: ಈ ನಡುವೆ, ಅಮೆರಿಕದ ಆದ್ಯತೆಯ ದೇಶ (ಜಿಎಸ್ಪಿ) ಎಂಬ ಮಾನದಂಡಕ್ಕೆ ಭಾರತ ಅನುಗುಣವಾಗಿದೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಜಯ್ ಗೋಖಲೆ ಹೇಳಿದ್ದಾರೆ. ಆದರೆ ಈ ವಿಚಾರದ ಬಗ್ಗೆ ಅಮೆರಿಕವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ