ಹಣ ಬಿಡಿಸಿಕೊಂಡು ಬರುವುದಾಗಿ ಎಸ್ಕೇಪ್‌ ಆಗಿದ್ದ ಕೈದಿ!

Team Udayavani, Sep 20, 2019, 9:36 AM IST

Udayavani Kannada Newspaper

ಬೆಂಗಳೂರು: ಅನಾರೋಗ್ಯ ಕಾರಣದಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಕೈದಿ ತಪ್ಪಿಸಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆತ ಜಯದೇವ ಆಸ್ಪತ್ರೆ ಬಳಿಯಿಂದ ತಪ್ಪಿಸಿಕೊಂಡಿದ್ದ ಎಂದು ಹೇಳಿದ್ದ ಪೊಲೀಸರು ಈಗ ಎಂ.ಎಸ್‌. ಬಿಲ್ಡಿಂಗ್‌ ಬಳಿಯಿಂದ ತಪ್ಪಿಸಿಕೊಂಡಿರುವುದಾಗಿ ವರದಿ ನೀಡಿದ್ದಾರೆ. ಸೆ.4ರಂದು ತಪ್ಪಿಸಿಕೊಂಡಿರುವ ಕೈದಿ ಬಸವರಾಜ ಕಳಕಯ್ಯ ಕರಡಗಿ ಮಠ, ಬೆಂಗಾವಲಿಗೆ ಇದ್ದ ಪೊಲೀಸರಿಗೆ ಕಟ್ಟು ಕತೆ ಹೇಳಿ ಎಂ.ಎಸ್‌ ಬಿಲ್ಡಿಂಗ್‌ನಿಂದ ಪರಾರಿಯಾಗಿದ್ದಾನೆ ಎಂಬುದು ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ.

ಹೃದಯ ಶಸ್ತ್ರಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಕೈದಿ ಬಸವರಾಜನನ್ನು ಸೆ.4ರಂದು ಡಿಸಾcರ್ಜ್‌ ಮಾಡಲಾಗಿತ್ತು. ಬಳಿಕ ಜೈಲಿಗೆ ಕರೆದೊಯ್ಯುವಾಗ ತಮ್ಮನ್ನು ತಳ್ಳಿ ಪರಾರಿಯಾಗಿದ್ದ ಎಂದು ಬೆಂಗಾವಲು ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪಡೆ ಎಎಸ್‌ಐ ಶಿವಮೂರ್ತಿ, ತಿಲಕ್‌ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ದ್ದರು. ಆದರೆ, ಕೈದಿ ಪರಾರಿಯಾಗಿದ್ದು ಜಯದೇವ ಆಸ್ಪತ್ರೆಯಿಂದ ಅಲ್ಲ, ಎಂ. ಎಸ್‌.ಬಿಲ್ಡಿಂಗ್‌ನಿಂದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಆಸ್ಪತ್ರೆಯಿಂದ ಡಿಸಾcರ್ಜ್‌ ಆದ ಕೈದಿ ಬಸವರಾಜ, ನನಗೆ ಔಷಧ ಮತ್ತಿತರ ಖರ್ಚಿಗೆ ಹಣ ಬೇಕು ಹೀಗಾಗಿ ಎಂ.ಎಸ್‌.ಬಿಲ್ಡಿಂಗ್‌ನಲ್ಲಿರುವ ಬ್ಯಾಂಕ್‌ಗೆ ತೆರಳಿ ಹಣ

ಬಿಡಿಸಿಕೊಳ್ಳುತ್ತೇನೆ ಎಂದು ಬೆಂಗಾವಲು ಕರ್ತವ್ಯಕ್ಕಿದ್ದ ಎಎಸ್‌ಐ ಶಿವಮೂರ್ತಿ ಹಾಗೂ ಪೇದೆಯನ್ನು ನಂಬಿಸಿದ್ದ. ಆತನ ಮಾತು ನಂಬಿದ ಎಎಸ್‌ಐ ಹಾಗೂ ಪೇದೆ, ಆತನನ್ನು ಎಂ.ಎಸ್‌ ಬಿಲ್ಡಿಂಗ್‌ ಬಳಿ ಕರೆತಂದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕೊಳ ತೆಗೆಸಿಕೊಳ್ಳಲು ಮತ್ತೂಂದು ನಾಟಕ ಶುರು ಮಾಡಿದ ಬಸವರಾಜ, ಕೈಯಲ್ಲಿ ಕೋಳವಿದ್ದರೆ ಬ್ಯಾಂಕ್‌ ಒಳಗೆ ಬಿಡುವುದಿಲ್ಲ. ಕೋಳ ತೆಗೆಯಿರಿ ಎಂದು ಹೇಳಿ ಕೇಳಿಕೊಂಡಿದ್ದಾನೆ. ಕೋಳ ತೆಗೆಯುತ್ತಿದ್ದಂತೆ ಬ್ಯಾಂಕ್‌ಗೆ ಹೋದಂತೆ ನಟಿಸಿ, ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದ ಎಂದು ಹಿರಿಯ ಅಧಿಕಾರಿ ವಿವರಿಸಿದರು.

ಘಟನೆ ಎಂ.ಎಸ್‌.ಬಿಲ್ಡಿಂಗ್‌ನಲ್ಲಿ ನಡೆದಿರುವುದರಿಂದ ಅ ಪ್ರದೇಶ ವ್ಯಾಪ್ತಿಗೆ ಸೇರುವ ವಿಧಾನಸೌಧ ಠಾಣೆ ಪೊಲೀಸರಿಗೆ ಪ್ರಕರಣ ವರ್ಗಾಯಿಸಲಾಗಿದೆ. 2018ರಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಸವರಾಜ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಎಂದು ಅಧಿಕಾರಿ ಹೇಳಿದರು.

● ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.