ಹಂಚಿನಮನಿಯಲ್ಲೀಗ ಆರ್ಟ್‌ಗ್ಯಾಲರಿ

¬ಚಿತ್ರಕಲಾವಿದರಿಗೊಂದು ವೇದಿಕೆ , ಗ್ಯಾಲರಿ ಮಾಡಿ ಕಲಾಪ್ರೀತಿ ಮೆರೆದ ಕರಿಯಪ್ಪ

Team Udayavani, Sep 20, 2019, 1:29 PM IST

hv-tdy-1

ಹಾವೇರಿ: “ನಗರಕ್ಕೊಂದು ಆರ್ಟ್‌ ಗ್ಯಾಲರಿ ಮಾಡಿಕೊಡಿ’ ಎಂದು ಎರಡು ದಶಕಗಳ ಕಾಲ ಹೋರಾಡಿದರೂ ಸರ್ಕಾರ ಸ್ಪಂದಿಸದೆ ಇದ್ದಾಗ ಕಲಾವಿದರೋರ್ವರು ತನ್ನ ಮನೆಯನ್ನೇ ಆಟ್‌ ಗ್ಯಾಲರಿ ಮಾಡಿ ಕಲಾವಿದರಿಗೆ ವೇದಿಕೆ ಕಲ್ಪಿಸಿ ಗಮನಸೆಳೆದಿದ್ದಾರೆ.

ಲಕ್ಷಾಂತರ ರೂ. ವೆಚ್ಚ ಮಾಡಿ ತನ್ನ ಮನೆಯಲ್ಲಿಯೇ ಸುಂದರ, ಸುಸಜ್ಜಿತ ಆರ್ಟ್‌ ಗ್ಯಾಲರಿ ಮಾಡಿ ತನ್ನ ಕಲಾಪ್ರೀತಿ ಮೆರೆದ ಈ ಕಲಾವಿದನ ಹೆಸರು ಕರಿಯಪ್ಪ ಹಂಚಿನಮನಿ. ಇವರು ವೃತ್ತಿಯಲ್ಲಿ ಪೊಲೀಸ್‌ ಹೆಡ್‌ ಕಾನ್‌ ಸ್ಟೆಬಲ್‌ ಆಗಿದ್ದರೂ ಪ್ರವೃತ್ತಿಯಲ್ಲಿ ಪ್ರತಿಭಾವಂತ ಚಿತ್ರಕಲಾವಿದ. ಅವರು ರಾಜ್ಯವಷ್ಟೇ ಅಲ್ಲ ದೇಶಾದ್ಯಂತ ವಿವಿಧೆಡೆ ತಮ್ಮ ಚಿತ್ರಕಲೆ ಪ್ರದರ್ಶಿಸಿ ಹೆಸರುವಾಸಿಯಾಗಿದ್ದಾರೆ.

ಹಾವೇರಿ ನಗರದಲ್ಲೊಂದು ಸುಸಜ್ಜಿತ ಆರ್ಟ್‌ ಗ್ಯಾಲರಿ ನಿರ್ಮಾಣ ಆಗಬೇಕು ಎಂದು ಜಿಲ್ಲೆಯ ಕಲಾವಿದರು, ಸಾಹಿತಿಗಳು 25-30

ವರ್ಷಗಳಿಂದಲೂ ಹೋರಾಟ, ಪ್ರತಿಭಟನೆ ಮಾಡುತ್ತಲೇ ಬಂದಿದ್ದಾರೆ. ಬೀದಿಯಲ್ಲಿ ಚಿತ್ರಕಲೆ ಬಿಡಿಸಿ, ಬೀದಿಯಲ್ಲಿ ಚಿತ್ರಕಲೆ ಪ್ರದರ್ಶನ ಮಾಡಿ, ರಸ್ತೆ ಮೇಲೆ ಚಿತ್ರ ಬಿಡಿಸಿ ಭಿನ್ನ ವಿಭಿನ್ನವಾಗಿ ಪ್ರತಿಭಟನೆ ಮಾಡಿ ಸರ್ಕಾರದ ಕಣ್ತೆರೆಸುವ ಕೆಲಸ ಮಾಡಿದ್ದಾರೆ. ಆದರೆ, ಇದ್ಯಾವುದಕ್ಕೂ ಸರ್ಕಾರ ಈವರೆಗೂ ಸ್ಪಂದಿಸಿಯೇ ಇಲ್ಲ.

ಹಂಚಿನಮನಿ ಆರ್ಟ್‌ ಗ್ಯಾಲರಿ’: ಕಲೆ ಪ್ರದರ್ಶನಕ್ಕೆ ಉತ್ತಮ ಗ್ಯಾಲರಿ ವ್ಯವಸ್ಥೆ ಇಲ್ಲದೇ ಚಿತ್ರಕಲಾವಿದರು ಪರದಾಡುವುದನ್ನು ಮನಗಂಡ ಕರಿಯಪ್ಪ ಹಂಚಿನಮನಿ, ನಗರದ ನಂದಿ ಲೇಔಟ್‌ನಲ್ಲಿರುವ ತಮ್ಮ ನೂತನ ಮನೆಯ ಮಹಡಿಯ ಒಂದು ಭಾಗವನ್ನು ಆರ್ಟ್‌ ಗ್ಯಾಲರಿಗೆ ಮೀಸಲಿಟ್ಟಿದ್ದಾರೆ. ಇದಕ್ಕೆ “ಹಂಚಿನಮನಿ ಆರ್ಟ್‌ ಗ್ಯಾಲರಿ’ ಎಂದು ಹೆಸರಿಟ್ಟಿದ್ದಾರೆ. ಇಲ್ಲಿ ಚಿತ್ರಕಲೆ ಪ್ರದರ್ಶನಕ್ಕೆ ಬೇಕಾದ ವಿಶೇಷ ವಿದ್ಯುತ್‌ ವ್ಯವಸ್ಥೆ, ಕಲಾಕೃತಿಗಳ ಪ್ರದರ್ಶನಕ್ಕೆ ಬೇಕಾದ ಹ್ಯಾಂಗರ್ ಸೇರಿದಂತೆ ಕಲಾ ಪ್ರದರ್ಶನಕ್ಕೆ ಬೇಕಾದ ಅಗತ್ಯ ಎಲ್ಲ ವ್ಯವಸ್ಥೆ ಮಾಡಿದ್ದಾರೆ.

ಕಲಾ ಪ್ರದರ್ಶನಕ್ಕೆ ಬಂದ ಕಲಾವಿದರ ವಾಸ್ತವ್ಯಕ್ಕಾಗಿ ಒಂದು ಪ್ರತ್ಯೇಕ ಕೊಠಡಿ ವ್ಯವಸ್ಥೆವೂ ಮಾಡಿದ್ದಾರೆ. ಸುಮಾರು 30-35 ಕಲಾಕೃತಿಗಳು ಪ್ರದರ್ಶನ ಮಾಡುವಷ್ಟು ವಿಶಾಲವಾದ ಗ್ಯಾಲರಿ ಇದಾಗಿದ್ದು, ಕಲಾ ಗ್ಯಾಲರಿಗೆ ತಕ್ಕಂತೆ ಜನಪದ ಕಲಾ ಶೈಲಿಯಲ್ಲಿ ಗ್ಯಾಲರಿಯ ಗೋಡೆ, ಬಾಗಿಲು, ಕಿಟಕಿ, ಅಲಂಕಾರ ಸಾಮಗ್ರಿ ಅಳವಡಿಸಿ ತಮ್ಮ ಗ್ಯಾಲರಿ ವಿಶಿಷ್ಟ, ವಿಭಿನ್ನ ಹಾಗೂ ಆಕರ್ಷಣೀಯವನ್ನಾಗಿಸಿದ್ದಾರೆ.

ಮನೆಯೂ ವಿಭಿನ್ನ: ಕರಿಯಪ್ಪ ಹಂಚಿನಮನಿಯರು ಕಟ್ಟಿಸಿದ ನೂತನ ಮನೆ ಕೂಡ ವಿಶಿಷ್ಟವಾಗಿದ್ದು ಮನೆಯೇ ಒಂದು ಸುಂದರ ಕಲಾಕೃತಿಯಂತಿದೆ. ಮನೆಯ ಕಾಂಪೌಂಡ್‌ ಮೇಲೆ ಜನಪದ ಕಲಾಚಿತ್ರಗಳು, ಗೇಟಿಗೆ ಎತ್ತಿನಗಾಡಿಯ ಚಕ್ರ, ನೈಸರ್ಗಿಕವಾಗಿರುವ ಮರದ ಹಲಗೆಗಳನ್ನು ಕಲಾತ್ಮಕವಾಗಿಟ್ಟು ಜೋಡಿಸಿರುವ ಬಾಗಿಲು-ಚೌಕಟ್ಟು ಹೀಗೆ ಎಲ್ಲವೂ ವಿಶಿಷ್ಟವಾಗಿದ್ದು ಒಟ್ಟಾರೆ ಮನೆ ಅಕ್ಷರಶಃ “ಕಲಾ ಮನೆ’ಯಂತಾಗಿದೆ. ಇದು ಕರಿಯಪ್ಪ ಅವರಿಗೆ ಕಲೆ ಮೇಲಿನ ಪ್ರೀತಿ, ಅಭಿಮಾನದ ಸಂಕೇತದಂತಿದೆ.

ಉದ್ಘಾಟನೆಯೂ ವಿಶೇಷ: ಕರಿಯಪ್ಪ ಹಂಚಿನಮನಿಯವರು ಸೆ. 22ರಂದು ಬೆಳಗ್ಗೆ 10ಗಂಟೆಗೆ “ಹಂಚಿನಮನಿ ಆರ್ಟ್‌ ಗ್ಯಾಲರಿ’ಯ ಉದ್ಘಾಟನೆ ಇಟ್ಟುಕೊಂಡಿದ್ದು ಇದನ್ನೂ ವಿಶಿಷ್ಟವಾಗಿ ಆಯೋಜಿಸಿಕೊಂಡಿದ್ದಾರೆ. ಅಂದು ರಾಜ್ಯಾದ್ಯಂತದಿಂದ 50ಕ್ಕೂ ಹೆಚ್ಚು ಕಲಾವಿದರನ್ನು ಕರೆಸಿ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಶಿಬಿರ ಏರ್ಪಡಿಸಿದ್ದಾರೆ. ಉದ್ಘಾಟನೆಯ ದಿನ ನೂತನ ಗ್ಯಾಲರಿಯಲ್ಲಿ ಹಂಚಿನಮನಿಯವರ ಕಲಾಕೃತಿಗಳು ರಾರಾಜಿಸಿದರೆ, ಮರುದಿನ ಉಳಿದ ಕಲಾವಿದರ ಕಲಾಕೃತಿಗಳು ಗ್ಯಾಲರಿಯಲ್ಲಿ ಪ್ರದರ್ಶನಗೊಳ್ಳಲಿವೆ. ಒಟ್ಟಾರೆ “ಹಂಚಿನಮನಿ ಆರ್ಟ್‌ ಗ್ಯಾಲರಿ’ ಚಿತ್ರಕಲಾವಿದರಿಗೆ ಒಂದು ವೇದಿಕೆ ಕಲ್ಪಿಸಿ, ಕಲೆಗೆ ಪ್ರೋತ್ಸಾಹದಾಯಕವಾಗಲಿದೆ ಎಂದು ಅಪೇಕ್ಷಿಸಲಾಗಿದೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.