ದಂಡ ಪರಿಷ್ಕರಣೆ ಇಂದು ಪ್ರಕಟ?

ಕನಿಷ್ಠ ಶೇ. 20ರಿಂದ ಗರಿಷ್ಠ 80ರಷ್ಟು ದರ ಪರಿಷ್ಕರಣೆ ಸಾಧ್ಯತೆ.

Team Udayavani, Sep 21, 2019, 5:10 AM IST

u-51

ಬೆಂಗಳೂರು: ಅಳೆದು-ತೂಗಿ ಕೊನೆಗೂ ಸರಕಾರ ಸಾರಿಗೆ ನಿಯಮಗಳ ಉಲ್ಲಂಘನೆಯ ದಂಡದ ಪ್ರಮಾಣವನ್ನು ತಗ್ಗಿಸಲು ಮುಂದಾಗಿದ್ದು, ಬಹುತೇಕ ಎಲ್ಲ 24 ನಿಯಮಗಳ ಉಲ್ಲಂಘನೆಗೆ ಕೇಂದ್ರ ಸರಕಾರ ವಿಧಿಸಿರುವ ದಂಡದ ಮೊತ್ತ ಪರಿಷ್ಕರಣೆಯಾಗುವ ಸಾಧ್ಯತೆ ಇದೆ.

ವಿಕಾಸಸೌಧದಲ್ಲಿ ಶುಕ್ರವಾರ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆಸಿದ ಬಳಿಕ ಈ ಸಂಬಂಧ ಸೂಚನೆ ನೀಡಲಾಗಿದೆ. ಶನಿವಾರ ಪರಿಷ್ಕೃತ ದರವನ್ನು ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆ ಇದೆ.

ಈ ಮೊದಲು ಗುಜರಾತ್‌ ಮಾದರಿಯಲ್ಲಿ ದರ ಪರಿಷ್ಕರಣೆಗೆ ನಿರ್ಧರಿಸಲಾಗಿತ್ತು. ಈಗ ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಕುಡಿದು ವಾಹನ ಚಾಲನೆ ಹೊರತುಪಡಿಸಿ ಉಳಿದೆಲ್ಲ ನಿಯಮಗಳ ಉಲ್ಲಂಘನೆಯಲ್ಲೂ ದಂಡ ತಗ್ಗಿಸಲು ಸರಕಾರ ಮುಂದಾಗಿದೆ. ಈ ಸಂಬಂಧ ಸಾರಿಗೆ ಇಲಾಖೆಗೆ ಸೂಚಿಸಿದ್ದು, ಅಧಿಕಾರಿಗಳು ಪರಿಷ್ಕೃತ ಪಟ್ಟಿ ಸಿದ್ಧ ಪಡಿಸುತ್ತಿದ್ದಾರೆ.

ಕನಿಷ್ಠ 20ರಿಂದ ಗರಿಷ್ಠ 80ರಷ್ಟು ದರ ಪರಿಷ್ಕರಣೆ ಮಾಡಲು ಉದ್ದೇಶಿಸಿದ್ದು, ಸರಾಸರಿ ಶೇ. 50ರಷ್ಟು ಕಡಿಮೆ ಆಗಲಿದೆ. ಶನಿವಾರ ಸಾರಿಗೆ ಇಲಾಖೆಯು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ. ಸಾರಿಗೆ ಸಚಿವರು ಅನುಮೋದನೆ ನೀಡಿದ ಅನಂತರ ಅಂತಿಮಗೊಳ್ಳಲಿದೆ. ಎರಡು- ಮೂರು ದಿನಗಳಲ್ಲಿ ಅಧಿಸೂಚನೆ ಹೊರ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

“ನಿಯಮದ ಪ್ರಕಾರ ನೇರವಾಗಿ ರಾಜ್ಯಕ್ಕೆ ಅಧಿಕಾರ ಇಲ್ಲದಿರಬಹುದು. ಆದರೆ ಪರೋಕ್ಷವಾಗಿ ಹೆಚ್ಚು-ಕಡಿಮೆ ಮಾಡಲು ಅವಕಾಶ ಇದೆ’ ಎಂದು ಕಾನೂನು ಇಲಾಖೆ ಅಭಿ ಪ್ರಾಯಪಟ್ಟಿದೆ. ಅದರಂತೆ ಈ ಮೊದಲು ಮೋಟಾರು ವಾಹನ ಕಾಯ್ದೆ ತಿದ್ದುಪಡಿಗೆ ಹೊರಡಿಸಿದ್ದ ಅಧಿ ಸೂಚನೆ ಯನ್ನು ಹಿಂಪಡೆದು, ಶೀಘ್ರದಲ್ಲೇ ಪರಿಷ್ಕರಣೆ ಮಾಡಿ ಮತ್ತೂಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ದಂಡ ಪರಿಷ್ಕರಣೆ ವಿಧಾನ ಶೇ. 80ರಷ್ಟು ಗುಜರಾತ್‌ ಮಾದರಿ ಆಗಿರಲಿದೆ. ಕೆಲವು ದಂಡದ ಪ್ರಮಾಣ ಗುಜರಾತ್‌ಗಿಂತ ಭಿನ್ನವಾಗಿಯೂ ಇರಲಿದೆ ಎಂದೂ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.