ಬಿಜೆಪಿಗೆ ಗೆಲುವಿನ ನಗೆ ಬೀರುವ ಅನಿವಾರ್ಯ


Team Udayavani, Sep 23, 2019, 3:10 AM IST

bjp-logo

ಬೆಂಗಳೂರು: ಅನಿರೀಕ್ಷಿತವೆಂಬಂತೆ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ದಿಢೀರ್‌ ಉಪಚುನಾವಣೆ ಘೋಷಣೆಯಾಗಿದ್ದು, “ಬಿಜೆಪಿ ಒಕ್ಕಲಿಗ ನಾಯಕತ್ವ ವಿರೋಧಿ’ ಎಂಬ ಆರೋಪಗಳನ್ನು ಮೆಟ್ಟಿ ನಿಂತು ಗೆಲುವಿನ ನಗೆ ಬೀರುವ ಅನಿವಾರ್ಯತೆ ಕಮಲ ಪಕ್ಷಕ್ಕೆ ಎದುರಾಗಿದೆ.

ಒಕ್ಕಲಿಗ ನಾಯಕತ್ವದ ಸಮ್ಮಿಶ್ರ ಸರ್ಕಾರ ಪತನ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ ಬಂಧನ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೇಳಿಬಂದ ದೂರವಾಣಿ ಕದ್ದಾಲಿಕೆ ಆರೋಪ ಪ್ರಕರಣ ಸಿಬಿಐಗೆ ವಹಿಸಿದ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ, ಇತರ ಪಕ್ಷಗಳ ಒಕ್ಕಲಿಗ ನಾಯಕತ್ವವನ್ನು ಹಣಿಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹೊತ್ತಿನಲ್ಲೇ ಉಪಚುನಾವಣೆ ಎದುರಾಗಿದ್ದು, ಆರೋಪಗಳನ್ನು ಸುಳ್ಳಾಗಿಸಲು ಬಿಜೆಪಿ ನಾಯಕರು ಕಾರ್ಯತಂತ್ರ ಹೆಣೆಯುತ್ತಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಬಳಿಕ ಸಂಪುಟದಲ್ಲೂ ಒಕ್ಕಲಿಗರಿಗೆ ಆದ್ಯತೆ ಸಿಕ್ಕಿತ್ತು. ಒಕ್ಕಲಿಗರ ಪ್ರಾಬಲ್ಯವಿರುವ ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಭರಪೂರ ಅನುದಾನ ಘೋಷಣೆಯಾಗಿತ್ತು. ಈ ಜಿಲ್ಲೆಗಳ ಅಭಿವೃದ್ಧಿಗೆ ನೀಡಿದ ಆದ್ಯತೆ ಕಂಡು ಕುಮಾರಸ್ವಾಮಿ ಹಾಸನ, ಮಂಡ್ಯ, ರಾಮನಗರ ಮುಖ್ಯಮಂತ್ರಿ ಎಂಬ ಟೀಕೆಗಳು ಕೇಳಿಬಂದವು. ಅಂತಹ ನಾಯಕತ್ವದ ಮೈತ್ರಿ ಸರ್ಕಾರವನ್ನು ಬಿಜೆಪಿ ಕೆಡವಿದ್ದು, ಒಕ್ಕಲಿಗ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಕಾಂಗ್ರೆಸ್‌, ಜೆಡಿಎಸ್‌ ನಾಯಕರ ಲೆಕ್ಕಾಚಾರ.

ಮೈತ್ರಿ ಸರ್ಕಾರ ಪತನಗೊಳಿಸಿದ್ದರಿಂದ ಒಕ್ಕಲಿಗ ಸಮುದಾಯದಲ್ಲಿ ಉಂಟಾಗಿದೆ ಎನ್ನಲಾದ ಗಾಯ ಮಾಯುವ ಮೊದಲೇ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕೇಳಿಬಂದ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಬಿಜೆಪಿ ಸಿಬಿಐಗೆ ವಹಿಸಿರುವುದು ಸಮುದಾಯದಲ್ಲಿ ಅಸಮಾಧಾನ ಸೃಷ್ಟಿಸಿದೆ ಎಂಬ ಮಾತುಗಳು ಕೇಳಿಬಂದಿವೆ. ಕುಮಾರಸ್ವಾಮಿಯವರನ್ನು ರಾಜಕೀಯ ವಾಗಿ ಹಣಿಯಲು ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ ಎಂಬುದಾಗಿ ಕೆಲ ನಾಯಕರು ಆರೋಪ ಮಾಡುತ್ತಿದ್ದಾರೆ.

ಡಿ.ಕೆ.ಶಿವಕುಮಾರ್‌ ಬಂಧನ: ಇನ್ನೊಂದೆಡೆ ಕಾಂಗ್ರೆಸ್‌ನ ಪ್ರಭಾವಿ ನಾಯಕ ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್‌ ಬಂಧನ ವಿಚಾರದಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್‌, ಜೆಡಿಎಸ್‌ ಕಾರ್ಯಕರ್ತರು ಹೋರಾಟ ನಡೆಸಿದ್ದರು. ಸದ್ಯ ಡಿ.ಕೆ.ಶಿವಕುಮಾರ್‌ ನ್ಯಾಯಾಂಗ ಬಂಧನಲ್ಲಿದ್ದಾರೆ. ಹಾಗಿದ್ದರೂ ಬಿಜೆಪಿ ರಾಷ್ಟ್ರೀಯ ನಾಯಕರೇ ರಾಜಕೀಯ ಷಡ್ಯಂತ್ರ ನಡೆಸಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪಗಳು ನಿರಂತರವಾಗಿ ಕೇಳಿಬಂದಿವೆ.

ಒಕ್ಕಲಿಗ ಸಂಘ ಸಂಸ್ಥೆಗಳ ಒಕ್ಕೂಟದಡಿ ಸಾವಿರಾರು ಮಂದಿ ನಗರದಲ್ಲಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿ ಬಿಜೆಪಿಯನ್ನೇ ಗುರಿಯಾಗಿಸಿಕೊಂಡು ವಾಗ್ಧಾಳಿ ಮಾಡಿರುವುದು ಸಹ ನಡೆದಿದೆ. ಜತೆಗೆ ಬಿಜೆಪಿಯ ಹಲವು ನಾಯಕರು ಡಿ.ಕೆ.ಶಿವಕುಮಾರ್‌ ಬಂಧನ ವಿಚಾರದಲ್ಲಿ ನೀಡಿದ ಹೇಳಿಕೆ, ತಿರುಗೇಟು, ವ್ಯಂಗ್ಯದ ಮಾತುಗಳು ಸಮುದಾಯದ ನಾನಾ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.

ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲೇ ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಸೆಳೆದು ಉಭಯ ಪಕ್ಷಗಳ ಸಂಘಟನೆಗೆ ಹೊಡೆತ ಕೊಡುವ ಪ್ರಯತ್ನವನ್ನು ಬಿಜೆಪಿ ನಡೆಸಿರುವುದು. ಬಂಡೆದ್ದ ಕೆಲ ಒಕ್ಕಲಿಗ ನಾಯಕರು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ, ಕುಮಾರಸ್ವಾಮಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮತ್ತು ಕುಟುಂಬದವರ ವಿರುದ್ಧ ಆರೋಪ ಮಾಡುತ್ತಿರುವುದು ಸಹ ಸಮುದಾಯದಲ್ಲಿ ಚರ್ಚೆ ಹುಟ್ಟುಹಾಕಿದೆ.

ಆರೇಳು ಕ್ಷೇತ್ರದಲ್ಲಿ ನಿರ್ಣಾಯಕ: ಈ ಎಲ್ಲ ಅಂಶಗಳ ಆಧಾರದ ಮೇಲೆ ಬಿಜೆಪಿಯು ಒಕ್ಕಲಿಗ ನಾಯಕತ್ವವನ್ನು ಹಣಿಯುತ್ತಿದೆ ಎಂಬುದಾಗಿ ಬಿಂಬಿಸುವ ಕಾರ್ಯವನ್ನು ಕೆಲವರು ಸದ್ದಿಲ್ಲದೆ ತೆರೆಮರೆಯಲ್ಲೇ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಉಪಚುನಾವಣೆ ಎದುರಾಗಿರುವ 15 ಕ್ಷೇತ್ರಗಳ ಪೈಕಿ ಹುಣಸೂರು, ಕೆ.ಆರ್‌.ಪೇಟೆ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್‌, ಕೆ.ಆರ್‌.ಪುರ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರು ನಿರ್ಣಾಯಕ ಎನ್ನುವಷ್ಟರ ಮಟ್ಟಿಗೆ ಗಣನೀಯ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಬಿಜೆಪಿ ಒಕ್ಕಲಿಗ ಸಮುದಾಯವನ್ನು ವಿಶ್ವಾಸದಲ್ಲಿಟ್ಟುಕೊಂಡು ಚುನಾವಣೆಗೆ ಹೇಗೆ ಸಿದ್ದವಾಗಲಿದೆ ಎಂಬ ಕುತೂಹಲ ಮೂಡಿದೆ.

ತೆರೆಮರೆಯಲ್ಲೇ ನಾನಾ ಕಸರತ್ತು: ಬಿಜೆಪಿಗೆ ಒಕ್ಕಲಿಗ ಸಮುದಾಯ ವಿರೋಧಿ ಎಂಬ ಹಣೆಪಟ್ಟಿ ಕಟ್ಟಲು ನಡೆದಿರುವ ಪ್ರಯತ್ನಗಳನ್ನು ಸೂಕ್ಷ್ಮವಾಗಿ ಗಮನಿಸಿರುವ ರಾಜ್ಯ ಬಿಜೆಪಿ ನಾಯಕರು ಅದನ್ನು ಸುಳ್ಳಾಗಿಸುವ ನಿಟ್ಟಿನಲ್ಲಿ ತೆರೆಮರೆಯಲ್ಲೇ ನಾನಾ ಕಸರತ್ತು ನಡೆಸಿದ್ದಾರೆ. ಒಕ್ಕಲಿಗ ಸಮುದಾಯ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಜತೆಗೆ ಪ್ರಭಾವಿ ಖಾತೆ ನೀಡಲಾಗಿದೆ.

ಮತ್ತೂಬ್ಬ ನಾಯಕ ಆರ್‌.ಅಶೋಕ್‌ ಅವರಿಗೆ ಪ್ರಭಾವಿ ಕಂದಾಯ ಖಾತೆ ವಹಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಬಳಿ ಕೆಂಪೇಗೌಡರ ಬೃಹತ್‌ ಪ್ರತಿಮೆ ನಿರ್ಮಿಸುವುದಾಗಿಯೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ. ಬಿಬಿಎಂಪಿ ಮೇಯರ್‌, ಉಪಮೇಯರ್‌ ಚುನಾವಣೆಯಲ್ಲೂ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವ ಪ್ರಯತ್ನ ನಡೆದರೂ ಅಚ್ಚರಿ ಇಲ್ಲ ಎಂಬ ಮಾತುಗಳಿವೆ.

ನಿರಾಧಾರ ಆರೋಪಕ್ಕೆ ಆದ್ಯತೆ ಬೇಕಿಲ್ಲ: ಬಿಜೆಪಿ ವಿರುದ್ಧ ಒಂದು ಸಮುದಾಯವನ್ನು ಎತ್ತಿ ಕಟ್ಟುವ ಉದ್ದೇಶದಿಂದ ನಿರಾಧಾರ ಆರೋಪ ಮಾಡಿದರೆ ಅದಕ್ಕೆ ಆದ್ಯತೆ ನೀಡುವ ಅಗತ್ಯವಿಲ್ಲ. ಹಣಕಾಸು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಇಡಿ ಪ್ರಕರಣ ದಾಖಲಿಸಿಕೊಂಡು ಡಿ.ಕೆ.ಶಿವಕುಮಾರ್‌ ಅವರನ್ನು ವಿಚಾರಣೆಗೊಳಪಡಿಸಿರುವುದಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಅನಗತ್ಯವಾಗಿ ಬಿಜೆಪಿ ನಾಯಕರ ಹೆಸರನ್ನು ಎಳೆದು ತಂದರೂ ರಾಜ್ಯದ ಜನತೆಗೆ ವಾಸ್ತವ ತಿಳಿದಿದೆ.

ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಆದಿಚುಂಚನಗಿರಿ ಮಠದ ಶ್ರೀಗಳ ದೂರವಾಣಿಯೂ ಕದ್ದಾಲಿಕೆಯಾಗಿದೆ ಎಂಬ ಮಾಹಿತಿ ತನಿಖೆಯಿಂದ ಸದ್ಯ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇದು ನಿಜವಾಗಿದ್ದರೆ ಸಮುದಾಯ ಸಮರ್ಥನೆ ಮಾಡಿಕೊಳ್ಳುವುದಾದರೂ ಹೇಗೆ? ಬಿಜೆಪಿಯು ಯಾವುದೇ ಸಮುದಾಯ, ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿಲ್ಲ. ಇದೆಲ್ಲಾ ಜನರಿಗೆ ತಿಳಿಯಲಿದೆ ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದರು.

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.