ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Team Udayavani, Sep 24, 2019, 3:43 PM IST

VP-TDY-1

ವಿಜಯಪುರ: ರೈತರು ತಮ್ಮ ಜಮೀನುಗಳಿಗೆ ಹೋಗುವ ದಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮೀನಮೇಷ ಎಣಿಸದೇ ಈ ಸಮಸ್ಯೆಗೆ ಪರಿಹಾರ ಕಂಡುಕೊಡಲು ಸರ್ಕಾರ ತಹಶೀಲ್ದಾರ್‌ರಿಗೆ ಅಧಿಕಾರ ನೀಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸೋಮವಾರ ನಗರದ ಸಿದ್ದೇಶ್ವರ ದೇವಾಲಯದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು, ಮಹಾತ್ಮ ಗಾಂಧೀಜಿ ವೃತ್ತ, ಬಸವೇಶ್ವರರ ವೃತ್ತ, ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರೈತರು ಹೊಲಕ್ಕೆ ಹೋಗುವ ದಾರಿ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಕಳೆದ 3-4 ವರ್ಷಗಳಿಂದ ನಿರಂತರ ಮನವಿ ಮಾಡುತ್ತ ಬರಲಾಗಿದೆ. ಆದರೂ ಸರ್ಕಾರ ಈ ಗಂಭೀರ ವಿಷಯದ ಕುರಿತು ಕ್ರಮ ಕೈಗೊಳ್ಳುವಲ್ಲಿ ವಿಫ‌ಲವಾಗಿದೆ.

ದಾರಿ ಸಮಸ್ಯೆ ಇತ್ಯರ್ಥ ಪಡಿಸಲು ಗಂಭೀರವಾಗಿ ಪರಿಗಣಿಸದ ಕಾರಣ ರೈತರು ಹೊಲಕ್ಕೆ ಹೋಗುವ ದಾರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತಹಶೀಲ್ದಾರ್‌ ಹಾಗೂ ಜಿಲ್ಲಾ ಧಿಕಾರಿಗಳನ್ನು ಈ ಕುರಿತು ಪ್ರಶ್ನಿಸಿದರೆ, ಜಮೀನಿಗೆ ದಾರಿ ಸಮಸ್ಯೆ ಇತ್ಯರ್ಥ ಮಾಡುವ ಅಧಿಕಾರ ನಮಗೆ ಇಲ್ಲ. ನಿಮ್ಮ ಸಮಸ್ಯೆ ಇತ್ಯರ್ಥಕ್ಕೆ ನ್ಯಾಯಾಲಯಕ್ಕೆ ಹೋಗಿ, ದಾರಿ ಕೊಡಲು ಆದೇಶ ತನ್ನಿ ಎಂದು ಹೇಳುತ್ತಾರೆ ಎಂದು ದೂರಿದರು. ಹೊಲಕ್ಕೆ ಹೋಗುವ ದಾರಿ ವಿಷಯವಾಗಿ ರೈತರು ನ್ಯಾಯಾಲಯಕ್ಕೆ ಧಾವೆ ಹೂಡಿದರೆ 15-20 ವರ್ಷ ಪ್ರಕರಣ ಇತ್ಯರ್ಥವಾಗುವುದಿಲ್ಲ. ಇದರಿಂದ ರೈತರು ನ್ಯಾಯಾಲಯಕ್ಕೆ ಅಲೆದಾಡಿ ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ಹೈರಾಣಾಗುತ್ತಾರೆ. ಹಲವು ಸಂದರ್ಭಗಳಲ್ಲಿ ಹೊಲಕ್ಕೆ ಹೋಗುವ ದಾರಿಗಾಗಿ ಹಳ್ಳಿಗಳಲ್ಲಿ ಹೊಡೆದಾಟ ನಡೆದ್ದು, ಹಲವು ಸಂದರ್ಭದಲ್ಲಿ ಕೊಲೆಯಾದ ಘಟನೆಗಳು ಇವೆ. ಜಮೀನುಗಳು ತುಂಡಾಗಿರುವ ಕಾರಣ ದಾರಿ ಇಲ್ಲದ ಜಮೀನುಗಳು ಬೀಳು ಬಿದ್ದಿವೆ. ಇದರಿಂದ ಉತ್ತಮ ಮಳೆಯಾದರೂ ಬಿತ್ತನೆಯಾಗದೇ ಇಂಥ ಜಮೀನನ್ನು ನಂಬಿದ ರೈತ ಕುಟುಂಬದ ನಿರ್ವಹಣೆಗೆ ತೊಂದರೆಯಾಗುತ್ತಿದೆ ಎಂದು ಹೊಲಕ್ಕೆ ಹೋಗುವ ದಾರಿ ಇಲ್ಲದಿರುವುದರಿಂದ ಆಗುತ್ತಿರುವ ಸಮಸ್ಯೆ ವಿವರಿಸಿದರು.

ಆದ್ದರಿಂದ ಶೀಘ್ರದಲ್ಲಿ ಸರ್ಕಾರ ಸಚಿವ ಸಂಪುಟ ಸಭೆಯಲ್ಲಾಗಲಿ ಅಥವಾ ಇದಕ್ಕಾಗಿ ಪ್ರತ್ಯೇಕ ಅಧಿ ವೇಶನದಲ್ಲಿ ಚರ್ಚಿಸಿ ಕಾನೂನು ತಿದ್ದುಪಡಿ ಮಾಡಿ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರದಂತೆ ಕಾನೂನು ರೂಪಿಸಿಬೇಕು. ದಾರಿ ಮಾಡಿಕೊಡುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರ್‌ರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ಸಿದ್ನಾಪುರ ರಂಜಣಗಿ ಮಾತನಾಡಿ, ರಾಜ್ಯದ ರೈತರ ಜಮೀನುಗಳ ಸರ್ವೇ ಕಾರ್ಯವನ್ನು ಬ್ರಿಟಿಷ್‌ ಆಡಳಿತದಲ್ಲಿದ್ದಾಗ ಮಾಡಿದ್ದು, ಸ್ವಾತಂತ್ರ್ಯ ಸಿಕ್ಕ ನಂತರ 72 ವರ್ಷಗಳವರೆಗೆ ಪುನಃ ಸರ್ವೇ ಮಾಡಿರುವುದಿಲ್ಲ. ಪ್ರತಿ 30 ವರ್ಷಕ್ಕೊಮ್ಮೆ ಜಮೀನುಗಳು ಸರ್ವೇ ಮಾಡಿ, ಹದ್ದುಬಸ್ತು ಗುರುತಿಸಬೇಕೆಂಬ ನಿಯಮ ಪಾಲನೆ ಆಗುತ್ತಿಲ್ಲ. ಹಳ್ಳಿಗಳಲ್ಲಿ ಜಮೀನು ಅತಿಕ್ರಮವಾಗಿ ಹದ್ದಿ ಗುರುತು ಸಿಗದಂತಾಗಿದೆ. ಇದರಿಂದಾಗಿಯೂ ಕೂಡ ಹಳ್ಳಿಗಳಲ್ಲಿ ದಿನ ನಿತ್ಯ ಹೊಡೆದಾಟಗಳು ನಡೆಯುತ್ತಲಿವೆ. ತಕ್ಷಣ ಸರ್ಕಾರ ಎಚ್ಚೆತ್ತುಕೊಂಡು ಮೋಜನಿ ಕಾರ್ಯಕ್ಕೆ ಚಾಲನೆ ನೀಡಬೇಕೆಂದು ಒತ್ತಾಯಿಸಿದರು. ಸರ್ಕಾರದಿಂದ ಕೂಡಲೇ ರೈತರಿಗೆ ಸಮರ್ಪಕವಾಗಿ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುವುದು, ರಸಗೊಬ್ಬರ ಹಾಗೂ ಕ್ರಿಮಿನಾಶಕಗಳ ಬೆಲೆ ನಿಯಂತ್ರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಪಾಂಡು ಹ್ಯಾಟಿ, ಗೊಲ್ಲಾಳಪ್ಪ ಚೌಧರಿ, ಕೃಷ್ಣಪ್ಪ ಬಮರಡ್ಡಿ, ಹೊನಕೇರಪ್ಪ ತೆಲಗಿ, ಹನುಮಂತ ತೋಟದ, ರಾಮಣ್ಣ ವಾಲೀಕಾರ, ಚಂದ್ರಾಮ ತೆಗ್ಗಿ, ಬಸವರಾಜ ಹೆಬ್ಟಾಳ, ಲಿಂಗು ಹಡಪದ, ಸಂಗಪ್ಪ ಪಡಸಲಗಿ, ಮಾಚಪ್ಪ ಹೊರ್ತಿ, ಬೂದೆಸಾಬ ಕೋಲಾರ, ನಬೀಸಾಬ ಗಣಿಯಾರ, ಮಲ್ಲಪ್ಪ ಮಾಡ್ಯಾಳ, ನಂದುಗೌಡ ಬಿರಾದಾರ, ಚನಬಸಪ್ಪ ಸಿಂಧೂರ, ಗುರಲಿಂಗಪ್ಪ ಪಡಸಲಗಿ, ಶಿವಪ್ಪ ಸುಂಟ್ಯಾನ, ಅರವಿಂದ ಹಾಲಣ್ಣವರ, ಸಂಗಪ್ಪ ತೇರಾಪುರ, ಸುರೇಶ ಬಿರಾದಾರ, ಬಸವರಾಜ ಬಿರಾದಾರ, ಸಾಗರ, ನಿಂಗು ಹಡಪದ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.