ಸಮರ್ಪಕ ವಿದ್ಯುತ್ ಪೂರೈಕೆಗೆ ರೈತ ಸಂಘ ಆಗ್ರಹ


Team Udayavani, Sep 24, 2019, 4:21 PM IST

yg-tdy-1

ಸುರಪುರ: ಹೆಗ್ಗಣದೊಡ್ಡಿ, ಗೋಡ್ರಿಹಾಳ, ತಿಪ್ಪನಟಗಿ ಹಾಗೂ ತಾಲೂಕಿನಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ಉಂಟಾಗಿರುವ ವಿದ್ಯುತ್‌ ಸಮಸ್ಯೆ ನಿವಾರಿಸಿ ಸಮರ್ಪಕ ವಿದ್ಯುತ್‌ ಪೂರೈಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಸಮಿತಿ ಸದಸ್ಯರು ಸೋಮವಾರ ರಂಗಂಪೇಟೆ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷ ಹಣಮಂತ್ರಾಯ ಮಡಿವಾಳರ, ರೈತರ ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ಉತ್ತಮ ಮಳೆಯಿಲ್ಲದೆ ಒಣಗುತ್ತಿವೆ. ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗಿಲ್ಲ. ಬೆಳೆಗಳು ಒಣಗುತ್ತಿದ್ದು, ಇವುಗಳನ್ನು ಉಳಿಸಿಕೊಳ್ಳಲು ಕೊಳವೆ ಬಾವಿಗಳ ಮೊರೆ ಹೋಗಲಾಗಿದೆ. ಆದರೆ ವಿದ್ಯುತ್‌ ಪೂರೈಕೆ ಕೊರತೆಯಿಂದ ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಳೆಗಳಿಗೆ ಸಮರ್ಪಕವಾಗಿ ವಿದ್ಯುತ್‌ ದೊರೆಯದೆ ಇರುವುದರಿಂದ ಬೋರ್‌ವೆಲ್‌ಗ‌ಳಿಂದ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ದಿನಕ್ಕೆ 12 ಗಂಟೆ ವಿದ್ಯುತ್‌ ಪೂರೈಸುವಂತೆ ಮನವಿ ಮಾಡಿದರೂ ಜೆಸ್ಕಾಂ ಇಲಾಖೆ ಅಧಿ ಕಾರಿಗಳ ಮನ ಕರಗುತ್ತಿಲ್ಲ. ದಿನಕ್ಕೆ 2ರಿಂದ 3 ಗಂಟೆ ನೀಡುವ ವಿದ್ಯುತ್‌ನ್ನು ಸರಿಯಾಗಿ ಪೂರೈಸದೆ ರೈತರ ಜೀವನದ ಜೊತೆ ಆಟವಾಡುತ್ತಿದ್ದಾರೆ ಎಂದು ದೂರಿದರು.

ತಾಲೂಕಿನಲ್ಲಿ ಬರುವ ಎಲ್ಲ ಗ್ರಾಮಗಳಿಗೆ ನಿರಂತರ ಜ್ಯೋತಿ 24 ತಾಸು ಹಾಗೂ ರೈತರ ಪಂಪ್‌ಸೆಟ್‌ಗಳಿಗೆ 12:00 ಗಂಟೆ ಸಮರ್ಪಕವಾಗಿ ವಿದ್ಯುತ್‌ ಪೂರೈಸಬೇಕು. ಹುಣಸಗಿ ತಾಲೂಕಿನ ಮಂಜಲಾಪುರ ಗ್ರಾಮದಲ್ಲಿ ಬರುವ ಗುರಿಕಾರ ದೊಡ್ಡಿಯಲ್ಲಿ ವಿದ್ಯುತ್‌ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಬಾವಿ ಮಾತನಾಡಿದರು. ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಮಹಾದೇವಿ ಬೇವಿನಾಳಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವುಶರಣ ಸಾಹುಕಾರ, ಜಿಲ್ಲಾ ಗೌರವಾಧ್ಯಕ್ಷ ಹನುಮಗೌಡ ನಾರಾಯಣಪುರ, ಜಿಲ್ಲಾ ಉಪಾಧ್ಯಕ್ಷರಾದ ತಿಪ್ಪಣ್ಣ ಜಂಪಾ, ದೇವೇಂದ್ರಪ್ಪ ಪತ್ತಾರ, ಗ್ರಾಮ ಘಟಕದ ಅಧ್ಯಕ್ಷ ಚಂದ್ರಕಾಂತ ನಾಗೋರಿ, ಪಂಚಾಕ್ಷರಯ್ಯ ಹಿರೇಮಠ ಹೆಗ್ಗಣದೊಡ್ಡಿ, ಚಾಂದಪಾಷಾ ಮಾಲಗತ್ತಿ, ಮಲ್ಲಿಕಾರ್ಜುನ ಗೋಡ್ರಿಹಾಳ, ರಾಘು ಕುಪ್ಪಗಲ್‌, ಸುರೇಶ ದರಬಾರಿ, ಹಣಮಂತ್ರಾಯಗೌಡ ಕನಗಂಡನಹಳ್ಳಿ, ಪರಮಣ್ಣ ಮೇಟಿ, ತಿಪ್ಪಣ್ಣ ಇಟ್ಟಂಗಿ, ಸಾಹೇಬಗೌಡ ಮದಲಿಂಗನಾಳ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.