ಇಂದಿರಾ ಕ್ಯಾಂಟೀನ್‌: ಪಾಲಿಕೆಗೆ ಆರ್ಥಿಕ ಹೊರೆ

Team Udayavani, Sep 25, 2019, 3:06 AM IST

indeera

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಯೋಜನೆಗೆ ಶೇ.50 ಆರ್ಥಿಕ ಹೊರೆ ಭರಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕಿದ್ದು, ಶೇ.25 ಮಾತ್ರ ನೆರವು ಭರವಸೆ ನೀಡಿದೆ. ಹೀಗಾಗಿ, ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಯೋಜನೆಯ ಶೇ.100 ರಾಜ್ಯ ಸರ್ಕಾರವೇ ಭರಿಸಬೇಕು ಎಂಬುದು ಬಿಬಿಎಂಪಿ ಬೇಡಿಕೆಯಾಗಿತ್ತು. ಆದರೆ, ಶೇ.50 ಭರಿಸುವ ಭರವಸೆ ದೊರೆತಿತ್ತು. ಆದರೆ, ಹಣಕಾಸು ಇಲಾಖೆ ಶೇ.25 ಮಾತ್ರ ಕೊಡಲು ಸಾಧ್ಯ ಎಂದು ತಿಳಿಸಿದ್ದು, ಶೇ.75 ಪಾಲಿಕೆ ಭರಿಸಬೇಕಾಗಿದೆ.

ಶೇ.50 ನೆರವು ನೀಡಿದರೆ ಮಾತ್ರ ಯೋಜನೆ ಮುಂದುವರಿಸಲು ಸಾಧ್ಯ ಎಂದು ಬಿಬಿಎಂಪಿ ಹೇಳಿದೆ. ಒಂದೊಮ್ಮೆ ನಿರೀಕ್ಷಿತ ನೆರವು ಸಿಗದಿದ್ದರೆ ಬಿಬಿಎಂಪಿ ವತಿಯಿಂದ ಇಂದಿರಾ ಕ್ಯಾಂಟೀನ್‌ ನಡೆಸಲು ಸಾಧ್ಯವೇ ಎಂಬ ಬಗ್ಗೆ ಪಾಲಿಕೆ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವ ಸಾಧ್ಯತೆಯಿದೆ. ಹೀಗಾಗಿ, ರಾಜ್ಯ ಸರ್ಕಾರವು ಯಾವ ರೀತಿ ಸ್ಪಂದಿಸಲಿದೆ ಎಂಬುದರ ಮೇಲೆ ಯೋಜನೆಯ ಭವಿಷ್ಯ ನಿರ್ಧಾರವಾಗುವ ಸಾಧ್ಯತೆಯಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌, ಸದ್ಯಕ್ಕೆ ಇಂದಿರಾ ಕ್ಯಾಂಟಿನ್‌ ಬಿಬಿಎಂಪಿ ವತಿಯಿಂದಲೇ ನಿರ್ವಹಣೆ ಮಾಡಲಾಗುತ್ತಿದೆ. ಸರ್ಕಾರ ಶೇ. 50 ಅನುದಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಹಣಕಾಸು ಇಲಾಖೆಯು ಸರ್ಕಾರದಿಂದ ಶೇ. 25ರಷ್ಟು ಮಾತ್ರ ಅನುದಾನ ನೀಡಲು ಸಾಧ್ಯ ಎಂದು ತಿಳಿಸಿದೆ.

ಬಿಬಿಎಂಪಿಗೆ ಶೇ. 50 ಅನುದಾನ ನೀಡಿದರೆ ಮಾತ್ರ ಇಂದಿರಾ ಕ್ಯಾಂಟಿನ್‌ ಯೋಜನೆ ಮುಂದುವರಿಸಲು ಸಾಧ್ಯ ಎಂದು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ಅನುದಾದ ವಿಷಯದಲ್ಲಿ ಪಾಲಿಕೆ ಸರ್ಕಾರದಿಂದ ಸ್ಪಷ್ಟ ಉತ್ತರ ಪಡೆಯಬೇಕಾಗಿದೆ. ಇಲ್ಲದಿದ್ದಲ್ಲಿ ಇಂದಿರಾ ಕ್ಯಾಂಟಿನ್‌ ಬಿಬಿಎಂಪಿ ವತಿಯಿಂದ ನಡೆಸಲು ಸಾಧ್ಯವೇ ಎನ್ನುವುದನ್ನು ಪಾಲಿಕೆಯ ಸಭೆಯಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಅನುದಾನವೇ ಸಿಕ್ಕಿಲ್ಲ: ಬಿಬಿಎಂಪಿ ವ್ಯಾಪ್ತಿಯಲ್ಲಿ 174 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟಿನ್‌ ಆರಂಭಿಸಲಾಗಿದೆ. 18 ಕಡೆ ಸಂಚಾರಿ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. ಪ್ರಾರಂಭದಲ್ಲಿ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟಿನ್‌ ಯೋಜನೆಗೆ 100 ಕೋಟಿ ರೂ. ಅನುದಾನ ಒದಗಿಸಿತ್ತು. ಆ ನಂತರ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಈ ಯೋಜನೆಗೆ ಯಾವುದೇ ಅನುದಾನ ನೀಡಿರಲಿಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಕೂಡಾ ಅನುದಾನ ನೀಡದೆ ಯೋಜನೆಯಲ್ಲಿ ಅವ್ಯವಹಾರ ಆರೋಪ ತನಿಖೆಗೆ ಸೂಚಿಸಿದೆ.

ಮತ್ತೊಂದು ಹೊರೆ: ಬಿಬಿಎಂಪಿ 2019-20 ನೇ ಸಾಲಿನಲ್ಲಿ ಕ್ಯಾಂಟೀನ್‌ ನಿರ್ವಹಣೆಗೆ 152 ಕೋಟಿ ರೂ. ಅಂದಾಜು ಮಾಡುವುದರ ಜತೆಗೆ ಈ ಹಿಂದಿನ ವರ್ಷದಲ್ಲಿ ಹೆಚ್ಚುವರಿಯಾಗಿ ವೆಚ್ಚ ಮಾಡಿದ 58 ಕೋಟಿ ರೂ. ಸೇರಿಸಿ ಒಟ್ಟು 210 ಕೋಟಿ ಬಿಡುಗಡೆ ಮಾಡುವಂತೆ ರಾಜ್ಯಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿತ್ತು. ಆದರೆ, ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ. ಈ ವರ್ಷ ಪ್ರಾರಂಭದಿಂದ ಪ್ರತಿ ತಿಂಗಳು ಇಂದಿರಾ ಕ್ಯಾಂಟೀನ್‌ ಗುತ್ತಿಗೆದಾರರಿಗೆ ಬಿಲ್‌ ಪಾವತಿಗೆ ಬಿಬಿಎಂಪಿ ಬೇರೆ ಬೇರೆ ಯೋಜನೆಗಳಿಗೆ ಮೀಸಲಿಟ್ಟಿದ್ದ ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕಾದ ಸ್ಥಿತಿ ಎದುರಾಗಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.